![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, Aug 11, 2020, 10:13 AM IST
ಭಟ್ಕಳ: ಇಲ್ಲಿನ ಮಾರುತಿ ನಗರದಲ್ಲಿ ಬಿಜೆಪಿ ಮಂಡಳದ ನೂತನ ಕಚೇರಿಯನ್ನು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಉದ್ಘಾಟಿಸಿದರು.
ನಂತರ ಮಾತನಾಡಿದ ಆವರು, ಎಲ್ಲಾ ಕಾರ್ಯಕ್ಕೂ ಒಂದು ಆಲಯ ಬೇಕು. ಆದಕ್ಕಾಗಿ ಇಂದು ಕಾರ್ಯಾಲಯ ಉದ್ಘಾಟಿಸಲಾಗಿದೆ. ಇದು ಕೆಲಸ ಮಾಡುವ ಕಾರ್ಯಕರ್ತರಿಗೆ ಮನೆಯಾಗಬೇಕು. ಇಲ್ಲಿ ಯಾವತ್ತೂ ಕಾರ್ಯಗಳು ನಡೆಯಬೇಕು, ಇದು ಕಾರ್ಯ ಲಯವಾಗಬಾರದು ಎಂದರು. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲ ಒಂದನೇ ಹಂತದ ಕಾಮಗಾರಿ ಆರಂಭ ಮಾಡುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಎರಡನೇ ಹಂತದ ಕಾಮಗಾರಿಗಳ ಪ್ರಯೋಜನ ಕೂಡಾ ಜನತೆಗೆ ದೊರೆಯಲಿದೆ. ಕರಾವಳಿಯ ತಾಲೂಕುಗಳ ಅಭಿವೃದ್ಧಿ ಬಂದರಿನ ಅಭಿವೃದ್ಧಿಯಿಂದ ಮಾತ್ರ ಸಾಧ್ಯವಾಗುವುದು. ಈಗಾಗಲೇ ಕೋಸ್ಟಲ್ ಎಕನಾಮಿಕ್ ಝೋನ್ ಮಾಡುವ ಕುರಿತು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಒಪ್ಪಿಗೆ ದೊರೆತಿದೆ. ಆ ದಿಶೆಯಲ್ಲಿ ಹೊನ್ನಾವರ, ಬೇಲೇಕೇರಿ ಹಾಗೂ ಕಾರವಾರದ ಬಂದು ಅಭಿವೃದ್ಧಿಯಾಗಲಿದ್ದು ಆರ್ಥಿಕ ಅಭಿವೃದ್ಧಿಯ ಹೆಬ್ಟಾಗಿಲು ತೆರೆದುಕೊಳ್ಳಲಿದೆ ಎಂದ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಅಲ್ಲಿನ ಬಂದರುಗಳ ಕೊಡುಗೆಯೇ ಮುಖ್ಯವಾಗಿದೆ ಎಂದರು.
ಶಾಸಕ ಸುನೀಲ್ ನಾಯ್ಕ ಮಾತನಾಡಿ, ಬಿಜೆಪಿಗೆ ಕಚೇರಿಯಿಲ್ಲದೇ ಕಾರ್ಯಕರ್ತರಿಗೆ ತೊಂದರೆಯಾಗಿರುವುದನ್ನು ಮನಗಂಡು ಕಚೇರಿಯನ್ನು ಆರಂಭಿಸಲಾಗಿದೆ. ಪ್ರತಿಯೊಬ್ಬ ಕಾರ್ಯಕರ್ತರು ಇಲ್ಲಿ ಬಂದು ತಮ್ಮ ಕುಂದುಕೊರತೆಗಳನ್ನು ಹೇಳಿಕೊಳ್ಳಬಹುದು. ಅಗತ್ಯವಿದ್ದರೆ ಅರ್ಜಿಗಳನ್ನು ಕೂಡಾ ಇಲ್ಲಿಯೇ ನೀಡಬಹುದು ಎಂದು ತಿಳಿಸಿದರು. ವಿಧಾನ ಪರಿಷತ್ ನೂತನ ಸದಸ್ಯ ಶಾಂತಾರಾಮ ಸಿದ್ಧಿ ಅವರನ್ನು ಬಿಜೆಪಿ ಮಂಡಳದ ವತಿಯಿಂದ ಗೌರವಿಸಲಾಯಿತು. ಭಟ್ಕಳ ಮಂಡಳದ ಅಧ್ಯಕ್ಷ ಸುಬ್ರಾಯ ನಾಯ್ಕ ಮಾತನಾಡಿದರು. ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಎಸ್. ಹೆಗಡೆ, ಭಟ್ಕಳ ಪ್ರಭಾರಿ ಪ್ರಶಾಂತ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶಿವಾನಿ ಶಾಂತಾರಾಮ, ಹಿಂದುಳಿದ ಮೋರ್ಚಾ ಅಧ್ಯಕ್ಷ ರವಿ ನಾಯ್ಕ ಜಾಲಿ, ಭಟ್ಕಳ ಮಂಡಳದ ನಿಕಟಪೂರ್ವ ಅಧ್ಯಕ್ಷ ರಾಜೇಶ ನಾಯ್ಕ, ಕೃಷ್ಣಾ ನಾಯ್ಕ ಆಸರಕೇರಿ, ಈಶ್ವರ ನಾಯ್ಕ ಮುಂತಾದವರು ಭಾಗವಹಿಸಿದ್ದರು.
ಮಂಡಲ ಪ್ರಧಾನ ಕಾರ್ಯದಶಿ ಮೋಹನ ಕೆ. ನಾಯ್ಕ ಸ್ವಾಗತಿಸಿದರು. ಪಕ್ಷದ ಪ್ರಮುಖ ಡಿ.ಕೆ. ಜೈನ್ ನಿರೂಪಿಸಿದರು. ಶ್ರೀನಿವಾಸ ನಾಯ್ಕ ವಂದಿಸಿದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.