ಹೆಸ್ಕಾಂ ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ರೆ ಕ್ರಮ


Team Udayavani, Jun 19, 2020, 5:18 PM IST

ಹೆಸ್ಕಾಂ ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ರೆ ಕ್ರಮ

ಕಾರವಾರ: ಪಂಡಿತ ದೀನ ದಯಾಳ್‌ ಗ್ರಾಮೀಣ ವಿದ್ಯುದ್ದೀಕರಣ ಯೋಜನೆ ಹಾಗೂ ಸೌಭಾಗ್ಯ ಯೋಜನೆ ಫಲಾನುಭವಿಗಳ ಅಂಕಿ-ಅಂಶಗಳ ನಿಖರ ಮಾಹಿತಿ ನೀಡಬೇಕೆಂದು ಸಂಸದ ಅನಂತಕುಮಾರ ಹೆಗಡೆ ಅವರು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದೀಶಾ ಸಮಿತಿ) ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ದೀನ ದಯಾಳ್‌ ಗ್ರಾಮೀಣ ವಿದ್ಯುದ್ದೀಕರಣ ಹಾಗೂ ಸೌಭಾಗ್ಯ ಯೋಜನೆ ಫಲಾನುಭವಿಗಳ ಅಂಕಿ-ಅಂಶದಲ್ಲಿ ಅಜಗಜಾಂತರ ವ್ಯತ್ಯಾಸವಿದ್ದು, ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸದೇ ನಿಜವಾದ ಅಂಕಿ-ಅಂಶಗಳ ಮಾಹಿತಿ ನೀಡಬೇಕು. ಬೇಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ್ದಲ್ಲಿ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ಪ್ರಧಾನಮಂತ್ರಿ ಯೋಜನೆ ಪ್ರಗತಿ ವರದಿ ಪರಿಶೀಲಿಸಿದ ಸಂಸದರು ನೆರೆ ಸಂತ್ರಸ್ತರಿಗೆ ಈ ಯೋಜನೆಯಡಿ ಮನೆ ಕಟ್ಟಿಸಿಕೊಡಲು ಸಮಸ್ಯೆಯಾಗುವುದರಿಂದ ಪರ್ಯಾಯವಾಗಿ ಮನೆ ಕಟ್ಟಿಸಿಕೊಡುವ ಕಾರ್ಯವಾಗಬೇಕೆಂದರು. ಹಿಂದಿನ ಸಭೆಯಲ್ಲಿ ಫಲಾನುಭವಿಗಳಿಗೆ ಮನೆ ಕಟ್ಟಿ ಕೊಡಲು ಜಾಗೆಯನ್ನು ಗುರುತಿಸುವುದಕ್ಕೆ ಸಂಬಂಧಿಸಿದಂತೆ ಸಂಸದರು ಅಧಿಕಾರಿಗಳಿಗೆ ಪ್ರಶ್ನಿಸಿದಾಗ ಕುಮಟಾ, ಹೊನ್ನಾವರ, ಭಟ್ಕಳ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯಾವುದೇ ಸರಕಾರಿ ಜಮೀನು ಲಭ್ಯ ಇಲ್ಲದೇ ಇರುವುದರಿಂದ ಖಾಸಗಿ ಜಮೀನಿಗಾಗಿ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿರುತ್ತದೆ. ಸರಕಾರದ ಮಾರ್ಗಸೂಚಿ ದರದಲ್ಲಿ ಖಾಸಗಿ ಜಮೀನಿನ ಮಾಲೀಕರು ಜಮೀನನ್ನು ಮುಂದೆ ನೀಡಲು ಬಂದಿರುವುದಿಲ್ಲ ಎಂದು ತಿಳಿಸಿದರು.

ಆರೋಗ್ಯ ಇಲಾಖೆ ಪ್ರಗತಿ ಪರಿಶೀಲಿಸಿ ಜಿಲ್ಲೆಯಲ್ಲಿ ಕಾಣಿಸಿಕೊಳ್ಳುವ ಮಂಗನಕಾಯಿಲೆ ಸಂಬಂಧ ಪಟ್ಟಂತೆ ಗ್ರಾಮ ಪಂಚಾಯತಿಗಳಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಅವರು ಸೂಚಿಸಿದರು. ನರೇಗಾ ಯೋಜನೆ ಪ್ರಗತಿಯನ್ನು ಪರಿಶೀಲಿಸಿದ ಸಂಸದರು, ಜಿಲ್ಲೆಯಲ್ಲಿ ಈ ಯೋಜನೆಯು ಇನ್ನು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕಾಗಿದೆ ಎಂದರು. ನರೇಗಾ ಯೋಜನೆಯಡಿ 2019-20ನೇ ಸಾಲಿಗೆ ಅನುದಾನ ಬಿಡುಗಡೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ ಕೂಲಿ ಪಾವತಿಗಾಗಿ ಸಾಕಷ್ಟು ಅನುದಾನ ಲಭ್ಯವಿರುವ ಕಾರಣ ಕೂಲಿಯನ್ನು ಪಾವತಿ ಮಾಡಲಾಗಿರುತ್ತದೆ ಎಂದು ಜಿ.ಪಂ. ಸಿಇಒ ಎಂ. ರೋಷನ್‌ ಅವರು ಸಂಸದರ ಗಮನಕ್ಕೆ ತಂದರು.

ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ಹೆಸ್ಕಾಂ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ವಿದ್ಯುತ್‌ ಪೂರೈಕೆ ಸಮಸ್ಯೆ ಉಂಟಾಗುತ್ತಿದ್ದು, ಅಧಿಕಾರಿಗಳು ಇದರ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಮತ್ತು ವಿದ್ಯುತ್‌ ಕಾಮಗಾರಿಗಳನ್ನು ಮಧ್ಯಾಹ್ನದವರೆಗೂ ಮಾಡಿ ರಾತ್ರಿ ವಿದ್ಯುತ್‌ ಪೂರೈಸುವ ಕಾರ್ಯವನ್ನು ಕೈಗೊಳ್ಳಬೇಕೆಂದರು. ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಇದ್ದರು.

ಟಾಪ್ ನ್ಯೂಸ್

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

8-utkhader

U. T. Khader: ಹೆಬ್ಟಾಳ್ಕರ್‌-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್‌

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

Bengaluru; Cab driver fell asleep: Passenger drove the vehicle!

Bengaluru; ನಿದ್ರೆಗೆ ಜಾರಿದ ಕ್ಯಾಬ್‌ ಡ್ರೈವರ್‌: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video

ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

INDvAUS; For the first time in history…: Bumrah sets new record with 200 wickets

INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್‌ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Kasaragodu: ಹೊಳೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

8-utkhader

U. T. Khader: ಹೆಬ್ಟಾಳ್ಕರ್‌-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್‌

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.