ಕೋವಿಡ್ ಎರಡನೇ ಅಲೆ ತಡೆಯಲು ಕ್ರಮ
Team Udayavani, Dec 25, 2020, 5:02 PM IST
ಭಟ್ಕಳ: ಕೋವಿಡ್-19 ಎರಡನೇ ಅಲೆಯು ಜಿಲ್ಲೆಗೆ ಬಾರದಂತೆ ನಾವು ತೀರಾ ಜಾಗ್ರತೆವಹಿಸಬೇಕಾಗಿದ್ದು, ವಿದೇಶದಿಂದ ಬರುವವರ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶರದ್ ನಾಯಕ ಹೇಳಿದರು.
ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ -19 ಎರಡನೇ ಅಲೆಯ ಕುರಿತು ನಾಗರಿಕರು, ಸಂಘ ಸಂಸ್ಥೆಗಳ ಪ್ರತಿನಿ ಧಿಗಳೊಂದಿಗೆ ಅಭಿಪ್ರಾಯ ಸಂಗ್ರಹಣೆ ಸಭೆಯಲ್ಲಿ ಅವರು ಮಾತನಾಡಿದರು. ವಿದೇಶದಿಂದ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು 72 ತಾಸಿನ ಮೊದಲುಬಂದರೆ ಯಾವುದೇ ಸಮಸ್ಯೆ ಇಲ್ಲ. 72ತಾಸಿಗಿಂತ ತಡವಾಗಿದ್ದರೆ ಮಾತ್ರ ಅವರನ್ನು ಪರೀಕ್ಷೆಗೊಳಪಡಿಸಿ ಹೋಂ ಕ್ವಾರೆಂಟೈನ್‌ನಲ್ಲಿರಬೇಕಾಗುವುದು ಎಂದರು.
ವಿದೇಶದಿಂದ ಬಂದವರ ಗಂಟಲು ದ್ರವದಮಾದರಿಯನ್ನು ಪ್ರಥಮವಾಗಿ ಕಾರವಾರದಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗುತ್ತದೆ. ಅಲ್ಲಿಪಾಸಿಟಿವ್ ಬಂದರೆ ನಂತರ ಅದನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ ಅದರಲ್ಲಿನ ವೈರಸ್ ಪ್ರಭಾವ ಪತ್ತೆ ಮಾಡಲಾಗುತ್ತದೆ ಎಂದರು.
ಕಫ, ಕೆಮ್ಮು, ಜ್ವರದೊಂದಿಗೆ ಬೇದಿಯೂ ಕೋವಿಡ್ ವೈರಸ್ ಲಕ್ಷಣವಾಗಿದೆ ಎಂದ ಅವರು, ಪ್ರತಿಯೊಬ್ಬರೂ ಈ ರೀತಿಯ ಯಾವುದೇ ಲಕ್ಷಣ ಕಂಡುಬಂದರೆ ತಕ್ಷಣ ಆಸ್ಪತ್ರೆಗೆ ಬಂದು ಪರೀಕ್ಷಿಸಿಕೊಳ್ಳಿ ಎಂದು ಸಲಹೆ ನೀಡಿದರು.ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ಸವಿತಾ ಕಾಮತ್ ಮಾತನಾಡಿ, ಭಟ್ಕಳದಲ್ಲಿಇಲ್ಲಿಯ ತನಕ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ. ಆದರೂ ನಾಗರಿಕರು ಸ್ವಯಂ ಪರೀಕ್ಷೆಗೆ ಒಳಗಾಗಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ತಂಜೀಂ ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ,ಈ ಮೊದಲು ಸಾಕಷ್ಟು ಬಾರಿ ಸ್ವಯಂಪರೀಕ್ಷೆಗೊಳಗಾಗಿದ್ದ ಜನರಿಗೆ ಮತ್ತೆ ಮತ್ತೆ ಪರೀಕ್ಷೆಗೊಳಗಾಗುವಂತೆ ಹೇಳಿದರೆ ಸಾಧ್ಯವಿಲ್ಲ. ಅವರು ಇಂತಹ ಸಂದರ್ಭದಲ್ಲಿ ಯಾರಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ. ಅದು ಭಟ್ಕಳಲ್ಲಿ ಸಾಧ್ಯವಾಗುವುದಿಲ್ಲ. ವಿದೇಶದಿಂದ ಬಂದವರನ್ನು ಮಾತ್ರ ಪರೀಕ್ಷೆಗೊಳಪಡಿಸಿ ಎಂದು ಸಲಹೆ ನೀಡಿದರು. ಇವರ ಮಾತಿಗೆ ಅಬ್ದುರ್ ರಕೀಮ್ ಎಂ.ಜೆ., ಇಮ್ತಿಯಾಜ್ ಉದ್ಯಾವರ್ ಮುಂತಾದವರು ಧ್ವನಿಗೂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ನಾಯಕ ಹಾಗೂ ಶ್ರೀಕಾಂತನಾಯ್ಕ, ಸಾರ್ವಜನಿಕವಾಗಿ ಸಹಕರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ಹಿಂದಿನಂತೆ ಎಲ್ಲರೂ ಸಹಕರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.