10ರಂದು ಅಘನಾಶಿನಿ ಉಳಿಸಿ ಸಮಾವೇಶ
•ಅಘನಾಶಿನಿ ಕಣಿವೆ ಅರಣ್ಯ ಶಿವಮೊಗ್ಗ ಶರಾವತಿ ಅಭಯಾರಣ್ಯಕ್ಕೆ ಸೇರಿಸಲು ವಿರೋಧ
Team Udayavani, Jul 7, 2019, 10:53 AM IST
ಶಿರಸಿ: ಅನಂತ ಅಶೀಸರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಶಿರಸಿ: ಅಘನಾಶಿನಿ ಕಣಿವೆ ಅರಣ್ಯಗಳನ್ನು ಶಿವಮೊಗ್ಗದ ಶರಾವತಿ ಅಭಯಾರಣ್ಯಕ್ಕೆ ಸೇರಿಸಿರುವ ಸರಕಾರದ ಆದೇಶ ರದ್ದುಪಡಿಸಲು ಆಗ್ರಹಿಸಿ ಅಘನಾಶಿನಿ ಉಳಿಸಿ ಸಮಾವೇಶ ಸಿದ್ದಾಪುರ ತಾಲೂಕಿನ ನೆಲೆಮಾವು ಮಠದ ಸಭಾಭವನದಲ್ಲಿ ಜು.10ರ ಮಧ್ಯಾಹ್ನ 3ಕ್ಕೆ ಆಯೋಜಿಸಲಾಗಿದೆ.
ಅಘನಾಶಿನಿ ಕಣಿವೆ ಸಂರಕ್ಷಣಾ ಹೋರಾಟ ಸಮಿತಿ, ಬೇಡ್ತಿ-ಅಘನಾಶಿನಿ ಕೊಳ್ಳ ಸಮಿತಿ, ನೆಲಮಾವು ಮಠ, ಸಿದ್ಧಿವಿನಾಯಕ ದೇವಾಲಯ ಹೇರೂರು ಇವುಗಳ ಸಹಯೋಗದಲ್ಲಿ ಸಮಾವೇಶ ನಡೆಯಲಿದೆ. ಶರಾವತಿ ಅಭಯಾರಣ್ಯಕ್ಕೆ ಅಘನಾಶಿನಿ ಅರಣ್ಯಗಳ ಸೇರ್ಪಡೆ ವಿರೋಧಿಸಿ ನಡೆಯುವ ಈ ಸಭೆ ಮುಂದಿನ ಹೋರಾಟದ ಸ್ವರೂಪ ನಿರ್ಧರಿಸಲಿದೆ. ಸಮಾವೇಶದಲ್ಲಿ ಬೇಡ್ತಿ ಅಘನಾಶಿನಿಕೊಳ್ಳ ಸಂರಕ್ಷಣಾ ಸಮಿತಿ ಗೌರವ ಅಧ್ಯಕ್ಷ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಸಾನ್ನಿಧ್ಯ ನೀಡುವರು. ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸುವರು. ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಪ್ರೊ| ಬಿ.ಎಂ. ಕುಮಾರಸ್ವಾಮಿ, ಪ್ರೊ| ಸುಭಾಸ್‌ಚಂದ್ರನ್, ಕೇಶವ ಕೊರ್ಸೆ, ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ. ಅಘನಾಶಿನಿ ಜೊತೆ ಕಾಳಿ ಕಣಿವೆ, ಶರಾವತಿ, ಬೇಡ್ತಿ ಕಣಿವೆ ಪ್ರದೇಶದ ಹೋರಾಟದ ಪ್ರಮುಖರನ್ನೂ ಸಭೆಗೆ ಆಹ್ವಾನಿಸಲಾಗಿದೆ ಎಂದು ಅಘನಾಶಿನಿ ಕಣಿವೆ ಸಂರಕ್ಷಣಾ ಹೋರಾಟ ಸಮಿತಿ ತಿಳಿಸಿದೆ. ಇಡೀ ಪಶ್ಚಿಮ ಘಟ್ಟದಲ್ಲಿ ಭಾರೀ ವಿರೋಧ ಎದುರಿಸುತ್ತಿರುವ ಲಿಂಗನಮಕ್ಕಿ ನೀರು ಬೆಂಗಳೂರಿಗೆ ಸಾಗಿಸುವ ಯೋಜನೆ, ಬೇಡ್ತಿ-ವರದಾ, ಅಘನಾಶಿನಿ-ವರದಾ, ಅಘನಾಶಿನಿ-ಬೆಂಗಳೂರು, ಕಾಳಿ- ಘಟಪ್ರಭಾ ಮುಂತಾದ ಯೋಜನೆಗಳ ಕುರಿತೂ ಧ್ವನಿ ಎತ್ತಲಾಗುತ್ತಿದೆ ಎಂದು ಸಮಿತಿ ವಿವರಿಸಿದೆ. ಅಘನಾಶಿನಿ ಉಳಿಸಿ ಸಮಾವೇಶ ಪೂರ್ವಭಾವಿಯಾಗಿ ನಗರದಲ್ಲಿ ಪರಿಸರ ಕಾರ್ಯಕರ್ತರ ಸಭೆ ನಡೆಯಿತು. ಸಮಾವೇಶದಲ್ಲಿ ಪಾಲ್ಗೊಳ್ಳಲು ನಾಗರಿಕರಿಗೆ ಮನವಿ ಮಾಡಲಾಯಿತು. ಸಿದ್ದಾಪುರ ತಾಲೂಕಿನ ಜನಪ್ರತಿನಿಧಿಗಳು ಅಭಯಾರಣ್ಯಕ್ಕೆ ಅಘನಾಶಿನಿ ಸೇರ್ಪಡೆ ವಿರೋಧಿಸಿ ನಿರ್ಣಯ ಕೈಗೊಂಡಿದ್ದಾರೆ ಎಂದು ಹೋರಾಟ ಸಮಿತಿ ಕಾರ್ಯದರ್ಶಿ ಮಹಾಬಲೇಶ್ವರ ಹೆಗಡೆ ತಿಳಿಸಿದರು.
ಜು.10 ರ ನೆಲೆಮಾವು ಸಮಾವೇಶ ಪೂರ್ವ ಸಂಪರ್ಕ ಅಭಿಯಾನ ಸಿದ್ದಾಪುರ ತಾಲೂಕಿನ ಎಲ್ಲ ಪಂಚಾಯತಗಳಲ್ಲಿ ನಡೆಯಲಿದೆ ಎಂದು ಸಂಚಾಲಕ ಗೋಪಾಲಕೃಷ್ಣ ತಂಗಾರ್ಮನೆ ತಿಳಿಸಿದರು. ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಕಾರ್ಯದರ್ಶಿ ಅನಂತ ಹೆಗಡೆ ಅಶೀಸರ, ಅರಣ್ಯ ಇಲಾಖೆ ಈವರೆಗೆ ನಮ್ಮ ಅಹವಾಲಿನ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅವರನ್ನು ವೃಕ್ಷಲಕ್ಷ ನಿಯೋಗ ಭೇಟಿ ಮಾಡಿ ಅಹವಾಲು ನೀಡಿದೆ. ಅಭಯಾರಣ್ಯ ಸೇರ್ಪಡೆ ವಿಷಯವಾಗಿ ಅರಣ್ಯ-ಪರಿಸರ ಮಂತ್ರಾಲಯದ ಪ್ರಮುಖರ ಜೊತೆ ಮಾತುಕತೆ ನಡೆಸುವ ಭರವಸೆಯನ್ನು ಸಂಸದರು ನೀಡಿದ್ದಾರೆ. ಮಾಜಿ ಪರಿಸರ ಸಚಿವ ರಾಜ್ಯಸಭಾ ಸದಸ್ಯ ಜೈರಾಂ ರಮೇಶ ಅವರನ್ನು ಭೇಟಿ ಮಾಡಿ ಗಮನ ಸೆಳೆದಿದ್ದೇವೆ ಎಂದು ಅಶೀಸರ ವಿವರಿಸಿದರು.
ಪ್ರೊ| ಆರ್.ವಿ. ಭಾಗ್ವತ, ವಿಜ್ಞಾನಿ ಪಿ.ಆರ್. ಭಟ್, ವಿ.ಪಿ. ಹೆಗಡೆ, ಮಧುಮತಿ ಹೆಗಡೆ, ಈಶಣ್ಣ ನೀರ್ನಳ್ಳಿ, ಎನ್.ಆರ್. ಹೆಗಡೆ, ಗಣಪತಿ ಕೆ. ಮುಂತಾದವರು ಪಾಲ್ಗೊಂಡಿದ್ದರು. ಸಮಾವೇಶದ ಯಶಸ್ಸಿಗೆ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.