ಅಂಗನವಾಡಿ ನೌಕರರ ಪ್ರತಿಭಟನೆ
Team Udayavani, Nov 12, 2020, 9:19 PM IST
ಕಾರವಾರ: ಅಖೀಲ ಭಾರತ ಮುಷ್ಕರ ನ.26 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವ ಭಾವಿಯಾಗಿ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಒತ್ತಾಯಿಸಿ ಅಂಗನವಾಡಿ ನೌಕರರು ಕಾರವಾರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಯೋಜಿತ ಅಖೀಲ ಭಾರತ ಅಂಗನವಾಡಿ ಕಾರ್ಯಕರ್ತೆಯರ ಮತ್ತುಸಹಾಯಕಿಯರ ಫೆಡರೇಶನ್ ವತಿಯಿಂದ ಏರ್ಪಟ್ಟಿದ್ದ ಪ್ರತಿಭಟನಾ ಮೆರವಣಿಗೆ ನಗರದ ಮಾಲಾದೇವಿ ಮೈದಾನದಿಂದ ಪ್ರಾರಂಭವಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಂದ ಮೆರವಣಿಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿಘೋಷಣೆ ಕೂಗಿದರು. ಅಲ್ಲದೇ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿತಲುಪಿದ ನಂತರ ಅಲ್ಲಿ ಪ್ರತಿಭಟನಾಕಾರರು ಸಮಾವೇಶಗೊಂಡರು.
ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ತಲುಪಿ ಅಲ್ಲಿ ಧರಣಿ ಮಾಡಲಾಯಿತು. ಧರಣಿನಿರತರನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದಾ, ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಂದ ಮಾಡಿಸಿಕೊಂಡ ಕೆಲಸಕ್ಕೆ ತಕ್ಕ ವೇತನ ನೀಡಿಲ್ಲಎಂದು ಆರೋಪಿಸಿದರು.
ಈ ಧೋರಣೆ ಸರಿಯಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು ಎಂದರು.ಅಂಗನವಾಡಿ ಕಾರ್ಯಕರ್ತೆಯರಸಂಘಟನೆಯ ಪದಾಧಿ ಕಾರಿ ಗೀತಾ ನಾಯ್ಕ ಮಾತನಾಡಿ, ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ 21 ಸಾವಿರಕ್ಕೆ ಹೆಚ್ಚಿಸಿ, ನೌಕರಿ ಕಾಯಂಗೊಳಿಸಬೇಕು. ಜತೆಗೆ 10 ಸಾವಿರನಿವೃತ್ತಿ ವೇತನ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ನೂತನ
ಶಿಕ್ಷಣ ನೀತಿ-2020 ರ ಅಪಾಯಗಳಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಶಾಲಾ
ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಿ, ಹೆಚ್ಚುವರಿ ಕೆಲಸ ನಿರ್ಬಂಧಿ ಸಬೇಕು. ಆರಂಭಿಕ ಬಾಲ್ಯಾವಸ್ಥೆಯ ಪಾಲನೆ ಮತ್ತು ಶಿಕ್ಷಣವನ್ನು ಉಚಿತವಾಗಿ ಕಡ್ಡಾಯವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಕೊಡಲು ಶಾಸನ ರೂಪಿಸಬೇಕು ಎಂದು ಮಾಲಿನಿ ಮೇಸ್ತ ಸರ್ಕಾರವನ್ನು ಆಗ್ರಹಿಸಿದರು.
ಕೋವಿಡ್ ದಿಂದ ಮೃತರಾದ 26 ಮತ್ತು ಕೆಲಸದ ಒತ್ತಡದಿಂದ ಮೃತರಾದ ಅಂಗನವಾಡಿ ನೌಕರರ ಮಕ್ಕಳಿಗೆ ನೇಮಕಾತಿ ನಿಯಮ ಸಡಿಲಿಸಿ ಅನುಕಂಪದ ಆಧಾರದಲ್ಲಿ ಕೆಲಸ ನೀಡಬೇಕು. ಕೋವಿಡ್ ಸಂದರ್ಭದಲ್ಲಿ ಕೆಲಸದ ಒತ್ತಡದಿಂದ ನಿಧನರಾದ 32 ಜನ ಅಂಗನವಾಡಿ ನೌಕರರಿಗೆ ಕನಿಷ್ಟ 5 ಲಕ್ಷ ರೂ. ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯ ನೇತೃತ್ವವನ್ನು ಸಂಘಟನಾ ಕಾರ್ಯದರ್ಶಿ ವಿದ್ಯಾ ವೈದ್ಯ, ಗೀತಾ ನಾಯ್ಕ, ಯಮುನಾ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.