Ankola: ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ; 7 ಮಂದಿ ದುರ್ಮರಣ – ಸಂಸದ ಕಾಗೇರಿ ಮಾಹಿತಿ

ಮಂಗಳೂರು, ಕುಮಟಾ ಮತ್ತಿತರ ಭಾಗಗಳಿಗೆ ತೆರಳುವವರು ಹೆದ್ದಾರಿಯಲ್ಲಿ ಕಾಲ ಕಳೆಯುವಂತಾಗಿದೆ...

Team Udayavani, Jul 16, 2024, 1:22 PM IST

14

ಅಂಕೋಲಾ:  ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಪರಿಣಾಮ ಮಂಗಳವಾರ(ಜು.16ರಂದು) ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದ (Hill collapse) 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಹಿತಿ ನೀಡಿದ್ದಾರೆ.

ಕಾರಾವಾರದಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು 7 ಮಂದಿ ಗುಡ್ಡ ಕುಸಿತದಿಂದ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಮಂಗಳವಾರ(ಜು.16ರಂದು) ಭೀಕರ ಮಳೆಯಿಂದ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಮಣ್ಣಿನಡಿಯಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ 15 ಮಂದಿಗೂ ಅಧಿಕ ಮಂದಿ ಸಿಲುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಕ್ಷಣಾ ತಂಡ ಶಾಂತಿ ನಾಯ್ಕ(37) ಎನ್ನುವವರ ಮೃತದೇಹವನ್ನು ಮಣ್ಣಿನಿಂದ ಹೊರಕ್ಕೆ ತೆಗೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೆದ್ದಾರಿಯಲ್ಲಿ ನಿಂತಿರುವ ಅನೇಕ ವಾಹನಗಳಿಗೂ ಹಾನಿ ಉಂಟಾಗಿದ್ದು ಅಲ್ಲಿ ನಿಂತಿರುವ ಒಂದು ಗ್ಯಾಸ್ ಟ್ಯಾಂಕರ್ ಪಕ್ಕದಲ್ಲಿರುವ ಗಂಗಾವಳಿ ನದಿಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಅದರಲ್ಲಿದ್ದ ಚಾಲಕ ಕ್ಲೀನರ್ ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.  

ಗುಡ್ಡ ಕುಸಿತಿದಿಂದಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕಾರವಾರ ಗೋವಾ ಅಂಕೋಲಾದಿಂದ ಕೇರಳ, ಮಂಗಳೂರು, ಕುಮಟಾ ಮತ್ತಿತರ ಭಾಗಗಳಿಗೆ ತೆರಳುವವರು ಹೆದ್ದಾರಿಯಲ್ಲಿ ಕಾಲ ಕಳೆಯುವಂತಾಗಿದೆ.

ಚತುಷ್ಪಥ ಹೆದ್ದಾರಿಗಾಗಿ ಗುಡ್ಡವನ್ನು ಕೊರೆಯಲಾಗಿತ್ತು ಈ ಗುಡ್ಡವು ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿರುವುದರಿಂದ ಹೆದ್ದಾರಿಯ ತುಂಬಾ ಮಣ್ಣು ಕಲ್ಲುಗಳು ತುಂಬಿ ಸಂಚರಿಸಲು ಆಗದ ಹಾಗೆ ಮಾರ್ಪಟ್ಟಿದೆ.

ಈಗಾಗಲೇ ಅಂಕೋಲಾ ತಾಲೂಕು ಆಡಳಿತ ಅಗ್ನಿಶಾಮಕದಳ ಪೊಲೀಸ್ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು ಮಣ್ಣಿನ ಅಡಿಯಲ್ಲಿ ಎಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವು ಮಾಡಲು 24 ಗಂಟೆಗೂ ಅಧಿಕ ಕಾಲ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಗೆ ಮಳೆ ಅಡ್ಡಿಯಾಗುತ್ತಿದೆ ಎನ್ನಲಾಗುತ್ತಿದೆ. ಇನ್ನು ಕೂಡ ಗುಡ್ಡ ಕುಸಿತ ಆಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಟಾಪ್ ನ್ಯೂಸ್

1-census

Report; ಸೆಪ್ಟಂಬರ್‌ನಲ್ಲಿ ನಡೆವ ಜನಗಣತಿ ಜತೆಗೇ ಜಾತಿಗಣತಿ?

Mysuru

Mysuru Dasara: ಅರಮನೆ ತಲುಪಿದ ಗಜಪಡೆ : ಭವ್ಯ ಸ್ವಾಗತ

CM-Siddu

Misappropriation Fund: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

Malpe ಮುಂದುವರಿದ ಗಾಳಿ; ಕಡಲಿಗೆ ಇಳಿಯದ ಬೋಟುಗಳು

Malpe ಮುಂದುವರಿದ ಗಾಳಿ; ಕಡಲಿಗೆ ಇಳಿಯದ ಬೋಟುಗಳು

Joshi-vijyebdra

Secret meeting: ಕೇಂದ್ರ ಸಚಿವ ಪ್ರಹ್ಲಾದ ಜೋಶಿ- ವಿಜಯೇಂದ್ರ ಗೌಪ್ಯ ಸಭೆ

Udupi ಗೀತಾರ್ಥ ಚಿಂತನೆ-15; ಭಗವದಿಚ್ಛೆಯೇ ಧರ್ಮಮೂಲ

Udupi ಗೀತಾರ್ಥ ಚಿಂತನೆ-15; ಭಗವದಿಚ್ಛೆಯೇ ಧರ್ಮಮೂಲ

Udupi ಶ್ರೀ ಕೃಷ್ಣಮಠದಲ್ಲಿ ವೈಭವದ ಲಡ್ಡುತ್ಸವ

Udupi ಶ್ರೀ ಕೃಷ್ಣಮಠದಲ್ಲಿ ವೈಭವದ ಲಡ್ಡುತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Siddu

Misappropriation Fund: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

Joshi-vijyebdra

Secret meeting: ಕೇಂದ್ರ ಸಚಿವ ಪ್ರಹ್ಲಾದ ಜೋಶಿ- ವಿಜಯೇಂದ್ರ ಗೌಪ್ಯ ಸಭೆ

DK-Shiva-Kumar

Drinking water scheme: ನಿರ್ಣಾಯಕ ಘಟ್ಟ ತಲುಪಿದ ಎತ್ತಿನಹೊಳೆ ಯೋಜನೆ: ಡಿಸಿಎಂ

KRISHNAMOOORTHY

Reward: ಕಡೂರಿನ ಡಾ| ಕೃಷ್ಣಮೂರ್ತಿಗೆ ರಾಷ್ಟ್ರೀಯ ವಿಜ್ಞಾನ ಪುರಸ್ಕಾರ

Logo

Political Competition: ರಾಜಕೀಯ ಅಖಾಡವಾಗಿ ಮಾರ್ಪಟ್ಟ ವೀರಶೈವ ಮಹಾಸಭಾ ಚುನಾವಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-census

Report; ಸೆಪ್ಟಂಬರ್‌ನಲ್ಲಿ ನಡೆವ ಜನಗಣತಿ ಜತೆಗೇ ಜಾತಿಗಣತಿ?

BJP 2

Kashmir Elections:ಬಿಜೆಪಿ ಏಕಾಂಗಿ ಸ್ಪರ್ಧೆ, ಶೀಘ್ರ ಅಭ್ಯರ್ಥಿಗಳ ಪಟ್ಟಿ

air india

Training ಇಲ್ಲದ ಪೈಲಟ್‌ ಬಳಕೆ: ಏರ್‌ ಇಂಡಿಯಾಕ್ಕೆ 90 ಲಕ್ಷ ರೂ. ದಂಡ!

1-gb

Norway ಕಾಯ್ದೆ ಸಡಿಲ: 18ನೇ ವಾರಕ್ಕೂ ಗರ್ಭಪಾತಕ್ಕೆ ಸಮ್ಮತಿ

Mysuru

Mysuru Dasara: ಅರಮನೆ ತಲುಪಿದ ಗಜಪಡೆ : ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.