Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Team Udayavani, Dec 16, 2024, 7:28 PM IST
ಅಂಕೋಲಾ : ವೃಕ್ಷಮಾತೆ ಎಂದೆನಿಸಿಕೊಂಡ ಪದ್ಮಶ್ರೀ ತುಳಸಿ ಗೌಡ ಸೋಮವಾರ(ಡಿ16) ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸಾಗಿತ್ತು.
ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ ಅವರು ವಯೋ ಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಕಳೆದ ಎಂಟು ತಿಂಗಳಿನಿಂದ ವಯೋ ಸಹಜ ಅನಾರೋಗ್ಯಕ್ಕೆ ತುತ್ತಾದ ತುಳಸಿ ಗೌಡ ಅವರಿಗೆ ಆಸ್ಪತ್ರೆ ಸೇರಿದಂತೆ ಅನೇಕ ಕಡೆ ಚಿಕಿತ್ಸೆಯನ್ನು ನೀಡಲಾಗಿತ್ತು. ಹೊನ್ನಳ್ಳಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ ಜಗದೀಶ ನಾಯಕ ತುಳಸಿ ಗೌಡ ಮನೆಗೆ ತೆರಳಿ ಮೃತಪಟ್ಟಿರುವುದು ಖಚಿತ ಪಡಿಸಿದ್ದಾರೆ.
ತುಳಸಿ ಗೌಡರವರು ಒರ್ವ ಪುತ್ರ ಮತ್ತು ಪುತ್ರಿ, ಮೊಮ್ಮಕ್ಕಳು ಮರಿಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅಂತಿಮ ಸಂಸ್ಕಾರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಹೊನ್ನಳ್ಳಿಯ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಪದ್ಮಶ್ರೀ ಸುಕ್ರಿ ಬೊಮ್ಮು ಗೌಡ ಅವರ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ತನ್ನದೇ ವಿಶಿಷ್ಠ ಸಾಧನೆಯ ಮೂಲಕ ಗಮನ ಸೆಳೆದ ಮಹಿಳಾ ಸಾಧಕಿ ತುಳಸಿ ಗೌಡ ಅತೀ ದೊಡ್ಡ ಪರಿಸರ ಪ್ರೇಮಿಯಾಗಿದ್ದರು. ಲಕ್ಷಕ್ಕೂ ಹೆಚ್ಚು ಮರ ಬೆಳೆಸಿದ್ದ ತುಳಸಿ ಅವರು ಕಟ್ಟಿಗೆ ಸಂಗ್ರಹಿಸಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು.ಮತ್ತಿಘಟ್ಟ ಅರಣ್ಯ ನರ್ಸರಿಯಲ್ಲಿ ಸೇವೆ ಮಾಡಿ ನಿವೃತ್ತರಾಗಿದ್ದರು.ಯುವ ಜನಾಂಗಕ್ಕೆ ನಿರಂತರ ತರಬೇತಿ, ಮಾರ್ಗದರ್ಶನ ನೀಡುವ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿದ್ದರು.
ಹಾಲಕ್ಕಿ ಸಮುದಾಯದ ಜಾನಪದ ಕಲಾವಿದೆಯೂ ಆಗಿದ್ದ ತುಳಸಿ ಗೌಡ ಅವರ ಸಾಧನೆಯನ್ನು ಪರಿಗಣಿಸಿ ಕೇಂದ್ರ ಸರಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ಒಲಿದು ಬಂದಿತ್ತು. ಅನೇಕ ಸಮ್ಮಾನಗಳು ಸಂದಿದ್ದವು.
ಸಂತಾಪ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಸತೀಶ ಸೈಲ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಮಾಜಿ ಶಾಸಕಿ ರೂಪಾಲಿ ನಾಯ್ಕ, ಮಾಜಿ ಸಚಿವ ಆನಂದ ಅಸ್ನೋಟಿಕರ, ಅಗಸೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗೊಪು ನಾಯಕ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ: ಆರೋಗ್ಯ ಸಚಿವ
Karnataka ಮಾಹಿತಿ ಆಯೋಗ: ಖಾಲಿ ಹುದ್ದೆ ಭರ್ತಿಗೆ ಹೈಕೋರ್ಟ್ ಆದೇಶ
RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ
ಸ್ಪೀಕರ್, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ
Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
3 ತಿಂಗಳಿಂದ ಸಂಬಳ ನೀಡದ್ದಕ್ಕೆ 30 ಅಡಿ ಎತ್ತರದ ಕಂಬ ಏರಿ ಆತ್ಮಹ*ತ್ಯೆಗೆ ಯತ್ನ
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Karnataka Govt.,: ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ: ಆರೋಗ್ಯ ಸಚಿವ
Karnataka ಮಾಹಿತಿ ಆಯೋಗ: ಖಾಲಿ ಹುದ್ದೆ ಭರ್ತಿಗೆ ಹೈಕೋರ್ಟ್ ಆದೇಶ
UK ಚೆವನಿಂಗ್-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.