ಪಕ್ಷಾಂತರ ನಿಷೇಧ ಕಾಯ್ದೆ ಅಗತ್ಯ
Team Udayavani, May 30, 2020, 6:36 AM IST
ಶಿರಸಿ: ಪಕ್ಷಾಂತರ ನಿಷೇಧ ಕಾಯ್ದೆಯನ್ನು ಇನ್ನಷ್ಟು ಪ್ರಬಲವಾಗಿ ರೂಪಿಸಬೇಕು. ಯಾರೇ ಪಕ್ಷಾಂತರ ಮಾಡಿದರೂ ಎರಡು ಚುನಾವಣೆಗೆ ನಿಲ್ಲದಂತೆ ಆಗಬೇಕು ಎಂದು ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದರು.
ಪಕ್ಷದ ಪ್ರಮುಖರ ಸಭೆ ನಡೆಸಿದ ಬಳಿಕ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕರಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದರು. ಬಿಜೆಪಿ ಆಂತರಿಕ ಸಂಗತಿ ಅವರ ಪಕ್ಷದ್ದು. ಯಾವುದೇ ಕಾರಣಕ್ಕೂ ಬಿಜೆಪಿ ಸರಕಾರ ಅಸ್ತಿರವಾದರೂ ಕಾಂಗ್ರೆಸ್ ಮರಳಿ ಚುನಾವಣೆಗೆ ಹೋಗುತ್ತದೆಯೇ ಹೊರತು ಸರಕಾರ ರಚನೆ ಮಾಡುವುದಿಲ್ಲ. ಅಷ್ಟು ಹಣ ಕೂಡ ನಮ್ಮಲ್ಲಿ ಇಲ್ಲ ಎಂದು ಹೇಳಿದರು.
ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಇಚ್ಛಾಶಕ್ತಿ ಕೊರತೆಯಿದೆ. ಎಲ್ಲ ಪಕ್ಷದವರೂ ಕೂಡಿ ಹೋರಾಟ ಮಾಡಿದರೆ ಸರಕಾರಗಳ ಗಮನ ಸೆಳೆಯಲು ಸಾಧ್ಯ ಎಂದ ಅವರು, ಕೋವಿಡ್ ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವನ್ನು ಸರಕಾರ ಘೋಷಿಸಿದೆ. ಅದನ್ನು ಕೂಡಲೇ ಜಮಾ ಮಾಡಬೇಕು ಎಂದು ಆಗ್ರಹಿಸಿದರು. ಗ್ರಾಪಂಗೆ ಸಮಿತಿ ರಚಿಸಲು ಸರಕಾರ ತಯಾರಿ ನಡೆಸಿದೆ. ಇಂತಹ ಕಾರ್ಯಕ್ಕೆ ಮುಂದಾದರೆ ಕಾನೂನು ಹೋರಾಟ ನಡೆಸುತ್ತೇವೆ ಎಂದೂ ಹೇಳಿದರು.
ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಸುಷ್ಮಾ ರಾಜಗೋಪಾಲರೆಡ್ಡಿ, ಸಂತೋಷ ಶೆಟ್ಟಿ, ಎಸ್.ಕೆ. ಭಾಗÌತ, ಜಗದೀಶ ಗೌಡ, ದೀಪಕ ದೊಡೂxರು ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.