ತಿಮ್ಮಕ್ಕ ಗಾರ್ಡನ್‌ನಲ್ಲಿ ಚಿಟ್ಟೆ ಪಾರ್ಕ್‌ಗೆ ಯತ್ನ
Team Udayavani, Dec 4, 2019, 5:48 PM IST
ಕಾರವಾರ: ಇಲ್ಲಿನ ಕಡಲತೀರಕ್ಕೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ-66ರ ಪಕ್ಕದಲ್ಲೇ ಇರುವ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಚಿಟ್ಟೆ ಪಾರ್ಕ್‌ಗೆ ಬೇಕಾದ ಪೂರಕ ವಾತಾವರಣ ಸೃಷ್ಟಿಯ ಯತ್ನಗಳು ಸದ್ದಿಲ್ಲದೇ ಸಾಗಿವೆ. ಇನ್ನೂ ಅಭಿವೃದ್ಧಿ ಹಂತದಲ್ಲಿರುವ ಚಿಟ್ಟೆಗಳ ಉದ್ಯಾನ, ಏಷ್ಯಾ ಖಂಡದಲ್ಲಿಯೇ ಅತಿದೊಡ್ಡ ಪತಂಗ ಉದ್ಯಾನವನ ಆಗಲಿದೆ ಎಂಬ ಹೆಗ್ಗಳಿಕೆ ಪಡೆದಿರುವ ಸದರ್ನ್ ಬಟರ್ ಫ್ಲೈ ಗಳನ್ನೂ ಒಳಗೊಂಡು ಸುಮಾರು 48 ಪ್ರಭೇದದ ಚಿಟ್ಟೆಗಳಿಗೆ ಆಶ್ರಯ ಕಲ್ಪಿಸಿದೆ.
ಕೋಡಿಬಾಗದಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನ ಸುಮಾರು 1.5 ಹೆಕ್ಟೇರ್ ವಿಸ್ತಾರವಾದ ಜಾಗ ಹೊಂದಿದೆ. ಇದರಲ್ಲಿ ಈಗಾಗಲೇ ಸುಮಾರು 16 ಎಕರೆ ಜಾಗವನ್ನು ಅಭಿವೃದ್ಧಿಪಡಿಸಿ ವೃಕ್ಷಉದ್ಯಾನ ನಿರ್ಮಾಣ ಮಾಡಲಾಗಿದೆ. ಅದರಲ್ಲೇ 2 ಗುಂಟೆ ಪ್ರದೇಶವನ್ನು ಈಗ ಚಿಟ್ಟೆ ಉದ್ಯಾನವನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರವೇಶದ್ವಾರದ ಒಳ ಹೊಕ್ಕುತ್ತಿದ್ದಂತೆ ಎಡಭಾಗದಲ್ಲೇ ಈ ಉದ್ಯಾನವಿದೆ. ಉದ್ಯಾನದ ಒಳಭಾಗದಲ್ಲಿ ಚಿಟ್ಟೆಗಳು ಕುಳಿತು ಪರಾಗಸ್ಪರ್ಶ ಕ್ರಿಯೆ ನಡೆಸಲು ಅನುಕೂಲವಾಗುವ ಹಾಗೂ ಹೆಚ್ಚು ಮಕರಂದ ನೀಡುವ ಚಿಕ್ಕ ಚಿಕ್ಕಹೂವುಗಳ ಹಾಗೂ ಕಾಡು ಗಿಡಗಳನ್ನು ಬೆಳೆಸಲಾಗಿದೆ. ಮಳೆಗಾಲದಲ್ಲಿ ಇನ್ನಷ್ಟು ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಮಧ್ಯಮ ಪ್ರಮಾಣದ ಬಿಸಿಲು ಹಾಗೂ ತಂಪಿನ ವಾತಾವರಣ ಚಿಟ್ಟೆಗಳು ಬಯಸುವುದರಿಂದ ಉದ್ಯಾನದಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲಾಗಿದೆ.
ಸದ್ಯ ಪ್ರಾಯೋಗಿಕವಾಗಿ ಸಣ್ಣ ಜಾಗದಲ್ಲಿ ಚಿಟ್ಟೆ ಉದ್ಯಾನ ಅಭಿವೃದ್ಧಿಗೊಳ್ಳುತ್ತಿದೆ. ಇದು ಯಶಸ್ವಿಯಾದರೆ ಮತ್ತಷ್ಟು ಪ್ರದೇಶದಲ್ಲಿ ಉದ್ಯಾನವಿಸ್ತರಿಸಲಾಗುತ್ತದೆ. ಚಿಟ್ಟೆಯ ಕುರಿತಾದ ಮಾಹಿತಿ ಫಲಕಗಳನ್ನೂ ಇಲ್ಲಿ ಅಳವಡಿಸಲಾಗಿದೆ. ಉದ್ಯಾನಕ್ಕೆ ಭೇಟಿ ನೀಡುವವರಿಗೆ ಚಿಟ್ಟೆಗಳ ಜೀವನ ಶೈಲಿಯ ಬಗ್ಗೆ ಮಾಹಿತಿ ಒದಗಿಸುವಕಾರ್ಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.