ಕೇಂದ್ರ ಸರಕಾರದ ಮೂರು ರೈತ ವಿರೋಧಿ ಕಾಯ್ದೆಗಳು ರದ್ದಾಗಬೇಕು:ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ
Team Udayavani, Sep 27, 2021, 2:46 PM IST
ಭಟ್ಕಳ: ಕೇಂದ್ರ ಸರಕಾರದ ಮೂರು ರೈತ ವಿರೋಧಿ ಕಾಯ್ದೆಗಳು ರದ್ದಾಗಬೇಕು, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯ ಖಾತ್ರಿ ಕಾನೂನು ಜಾರಿಗೆ ಬರಬೇಕು, ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳು ವಾಪಾಸಾಗಬೇಕು, ಸಾರ್ವತ್ರಿಕ ವಲಯಗಳ ಖಾಸಗೀಕರಣ ನಿಲ್ಲಲು ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.
ಸೆ.27ರಂದು ರಾಷ್ಟ್ರವ್ಯಾಪಿ ಭಾರತ್ ಬಂದ್ ಕರೆ ನೀಡಿದ್ದನ್ನು ಬೆಂಬಲಿಸಿ ಸಲ್ಲಿಸಿದ ಮನವಿಯಲ್ಲಿ ಈ ಕಾಯ್ದೆಗಳು ಜಾರಿಯಾದರೆ, ಸಾಗುವಳಿ ಭೂಮಿ-ಕೃಷಿ ಬೆಳೆಗಳ ಆಯ್ಕೆ-ಬೆಳೆದ ಬೆಳೆಗೆ ಬೆಲೆ ಕೇಳುವ ಸ್ವಾತಂತ್ರ್ಯ ಸೇರಿದಂತೆ ರೈತಾಪಿ ವರ್ಗದ ಸ್ವಾವಲಂಬನೆಯೆ ಸರ್ವನಾಶವಾಗಿ ಹೋಗಲಿದೆ. ಕಾರ್ಪೋರೇಟ್ ಕಂಪನಿಯ ಕಾಲಾಳುಗಳಾಗಿ, ಖೈದಿ ಕೆಲಸಗಾರರಾಗಿ ರೈತರು ದಾಸ್ಯದ ಹೊಸ ನೊಗ ಹೊರಬೇಕಾಗುತ್ತದೆ.
ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ-ಎಪಿಎಂಸಿಗಳ ಮೂಲಕ ಬೆಂಬಲ ಬೆಲೆಯ ಖಾತ್ರಿ ಕೊಡಬೇಕೆಂದು ಕಳೆದ 10 ತಿಂಗಳುಗಳಿಂದ ದೆಹಲಿಯ ಸುತ್ತಾ ಮುತ್ತಾ ರೈತರು ಮಹಾ ಸಂಘರ್ಷ ಸಾರಿದ್ದಾರೆ. 500ಕ್ಕೂ ಹೆಚ್ಚು ಸಂಘಟನೆಗಳ ಕೂಡು ಪಡೆಯಾದ ಸಂಯುಕ್ತ ಕಿಸಾನ ಮೋರ್ಚಾ ದಿನಕ್ಕಿಷ್ಟು ವಿಸ್ತಾರಗೊಳ್ಳುತ್ತಾ ಭಾರತ ಬಂದ್‍ಗೆ ಕರೆ ನೀಡಿದೆ. ಈ ಹೋರಾಟವನ್ನು ಐತಿಹಾಸಿಕವಾಗಿ ಯಶಸ್ವಿಗೊಳಿಸಬೇಕಾದ ಹೊಣೆಗಾರಿಕೆಯಲ್ಲಿ ಈ ದೇಶದ ಕಾರ್ಮಿಕರು, ದಲಿತ-ದಮನಿತರು, ವಿದ್ಯಾರ್ಥಿ-ಯುವಜನರು ವಿಶೇಷವಾಗಿ ಮಹಿಳೆಯರು ಅತಿ ಹೆಚ್ಚಿನ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.
ಇದನ್ನೂ ಓದಿ:ಬೆಂಗಳೂರು: ಕುಸಿದುಬಿತ್ತು ಮೂರಂತಸ್ತಿನ ಮನೆ, ತಪ್ಪಿದ ಭಾರೀ ಅನಾಹುತ
ಮನವಿಯಲ್ಲಿ ಕೇಂದ್ರ ಸರಕಾರದ ಮೂರು ರೈತ ವಿರೋಧಿ ಕಾಯ್ದೆಗಳು ರದ್ದಾಗಬೇಕು, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯ ಖಾತ್ರಿ ಕಾನೂನು ಜಾರಿಗೆ ಬರಬೇಕು, ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆಗಳು ವಾಪಾಸಾಗಬೇಕು, ಸಾರ್ವತ್ರಿಕ ವಲಯಗಳ ಖಾಸಗೀಕರಣ ನಿಲ್ಲಬೇಕು ಎಂದೂ ಆಗ್ರಹಿಸಲಾಗಿದೆ.
ಮನವಿಯನ್ನು ಸಲ್ಲಿಸುವ ಸಂದರ್ಭದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಅಜೀಜ್ ಜಾಗೀರ್ದಾರ್, ಜಿಲ್ಲಾಧ್ಯಕ್ಷ ಡಾ. ನಸೀಮ್ ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸಿಫ್ ಶೇಖ್, ಶೌಖತ್ ಖತೀಬ್, ಯುನುಸ್ ರುಕ್ನುದ್ಧೀನ್, ಜಬ್ಬಾರ್ ಅಸಾದಿ, ಅಸ್ಲಂ ಶೇಖ, ಐ.ಡಿ. ಖಾನ್ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು. ಸಹಾಯಕ ಆಯುಕ್ತರ ಅನುಪಸ್ಥಿತಿಯಲ್ಲಿ ಕಚೇರಿಯ ವಿಜಯಲಕ್ಷ್ಮೀ ಮಣಿ ಮನವಿಯನ್ನು ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.