ಭಟ್ಕಳ: ಕಾರು ಸೇತುವೆಗೆ ಢಿಕ್ಕಿ; ತಂದೆ ಸಾವು, ಮಗಳಿಗೆ ಗಾಯ
ನೀಟ್ ಪರೀಕ್ಷೆ ಮುಗಿಸಿ ವಾಪಸಾಗುತ್ತಿದ್ದಾಗ ಅವಘಡ
Team Udayavani, Jul 17, 2022, 9:25 PM IST
ಭಟ್ಕಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿಯಾದ ಪರಿಣಾಮ ಕಾರಿನ ಚಾಲಕ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತರನ್ನು ಜೋಸೆಫ್ ಕುಟ್ಟಿ (46) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇವರ ಪುತ್ರಿ ಅನು ಮರಿಯಾ (16) ಗಾಯಗೊಂಡಿದ್ದು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಜೋಸೆಫ್ ಮಗಳ ನೀಟ್ ಪರೀಕ್ಷೆಗೋಸ್ಕರ ಮಂಗಳೂರಿಗೆ ಹೋಗಿ ವಾಪಾಸಾಗುತ್ತಿದ್ದಾಗ ಭಾರೀ ಮಳೆಯಿಂದ ಬೆಳಕೆ ಸೇತುವೆಯಲ್ಲಿ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಜೋಸೆಫ್ ಎಡಗೆನ್ನೆಗೆ ತೀವ್ರವಾಗಿ ಪೆಟ್ಟು ತಗುಲಿದ್ದು ತಕ್ಷಣ ಸರಕಾರಿ ಆಸ್ಪತ್ರೆಗೆ ತರಲಾಯಿತಾದರೂ ಆಸ್ಪತ್ರೆಗೆ ಬರುವ ಮೊದಲೇ ಜೋಸೆಫ್ ಅಸು ನೀಗಿದ್ದರು.
ಸುದ್ದಿ ತಿಳಿದ ತಕ್ಷಣ ನೂರಾರು ಜನರು ಆಸ್ಪತ್ರೆಯ ಆವರಣಕ್ಕೆ ಆಗಮಿಸಿದ್ದು ಆಕ್ರಂದನ ಮುಗಿಲು ಮುಟ್ಟಿತ್ತು. ಮೃತರು ವಿದ್ಯುತ್ ಗುತ್ತಿಗೆದಾರರ ಕೆಲಸ ಮಾಡಿಕೊಂಡಿದ್ದು ಕಳೆದ ಹಲವಾರು ವರ್ಷಗಳಿಂದ ಭಟ್ಕಳದ ಜನರ ಪ್ರೀತಿ ಗಳಿಸಿದ್ದಲ್ಲದೇ ಎಲ್ಲರಲ್ಲಿಯೂ ಉತ್ತಮ ಬಾಂಧವ್ಯ ಹೊಂದಿ ಜನಾನುರಾಗಿಗಳಾಗಿದ್ದರು. ನೂರಾರು ಜನರು ಆಗಮಿಸಿ ಅಂತಿಮ ದರ್ಶನ ಪಡೆದರು. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು ಸಬ್ ಇನ್ಸಪೆಕ್ಟರ್ ಭರತ್‍ಕುಮಾರ್ ವಿ. ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.