Bhatkal ಸರಕಾರಿ ಆಸ್ಪತ್ರೆ ವೈದ್ಯ ನಾಪತ್ತೆ; ದೂರು ದಾಖಲು
Team Udayavani, Oct 13, 2023, 6:52 PM IST
ಭಟ್ಕಳ: ತಾಲೂಕಾ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರೋರ್ವರು ಮನೆಯಿಂದ ಕರ್ತವ್ಯಕ್ಕೆ ತೆರಳುತ್ತೇನೆಂದು ಹೋದವರು ಮೂರು ದಿನಗಳಾದರೂ ಕರ್ತವ್ಯಕ್ಕೂ ಹಾಜರಾಗದೇ, ಮನೆಗೂ ಬಾರದೇ ನಿಗೂಢವಾಗಿ ನಾಪತ್ತೆಯಾಗಿರುವ ಕುರಿತು ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದ ವೈದ್ಯರನ್ನು ಸರಕಾರಿ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಚ್.ಟಿ. ಉಮೇಶ ದೇವೆಂದ್ರಪ್ಪ (34) ಎಂದು ಗುರುತಿಸಲಾಗಿದೆ. ಇವರು ಮೂಲತಃ ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ನಿಟ್ಟೂರಿನವರಾಗಿದ್ದು ಪ್ರಸ್ತುತ ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದರು. ಸಾಗರ ರಸ್ತೆಯ ದುರ್ಗಾಪರಮೇಶ್ವರಿ ಕಾಲೋನಿಯಲ್ಲಿ ಬಾಡಿಗೆ ಮನೆಯನ್ನು ಮಾಡಿಕೊಂಡು ಪತ್ನಿಯೊಂದಿಗೆ ವಾಸ ಮಾಡುತ್ತಿದ್ದರು.
ಅಕ್ಟೋಬರ್ 1೦ರಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಮನೆಯಿಂದ ಕರ್ತವ್ಯಕ್ಕೆ ಹೋಗುತ್ತೇನೆ ಎಂದು ಪತ್ನಿಯಲ್ಲಿ ಹೇಳಿ ಹೋದವರು ಸಂಜೆಯಾದರೂ ಮನೆಗೆ ಬಾರದೇ ಬಾರದೆಸಂಬಂಧಿಕರ ಮನೆಗೂ ಹೋಗದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾರೆ. ಸತತ ಮೂರು ದಿನವಾದರು ಬಾರದೇ ಇದ್ದ ಹಿನ್ನೆಲೆ ನಾಪತ್ತೆಯಾಗಿದ್ದಾರೆಂದು ಶಂಕಿಸಿ ವೈದ್ಯರ ಪತ್ನಿ ಡಾ. ಪೂಜಾ ಎಚ್.ಟಿ.ಉಮೇಶ ಅವರು ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ.
ದೂರನ್ನು ದಾಖಲಿಸಿಕೊಂಡ ಗ್ರಾಮೀಣ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.