Road Mishap; ಭಟ್ಕಳ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು
Team Udayavani, Dec 19, 2023, 7:25 PM IST
ಭಟ್ಕಳ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತ ಪಟ್ಟು ಇನ್ನೊಂದು ಬೈಕಿನ ಸವಾರ ತೀವ್ರ ಗಾಯಗೊಂಡಿರುವ ಘಟನೆ ಸಾಗರ ರಸ್ತೆಯ ಪುರಸಭಾ ತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಸಂಭವಿಸಿದೆ.
ಮೃತನನ್ನು ತಾಲೂಕಿನ ಯಲ್ವಡಿಕವೂರು ನಿವಾಸಿ ಶ್ರೀಧರ ಜಟ್ಟಪ್ಪ ನಾಯ್ಕ ಎಂದು ಗುರುತಿಸಲಾಗಿದೆ.
ಈತ ಭಟ್ಕಳ ಕಡೆಯಿಂದ ಮಾರುಕೇರಿ ಕಡೆಗೆ ಹೋಗುತ್ತಿರುವಾಗ ಎದುರುಗಡೆಯಿಂದ ಸ್ಕೂಟರಿನಲ್ಲಿ ವೇಗವಾಗಿ, ಅಜಾಗರೂಕತೆಯಿಂದ ಬಂದ ಲೋಕೇಶ ಗೊಂಡ ಎನ್ನುವವನು ನಿಯಂತ್ರಣ ತಪ್ಪಿ ಶ್ರೀಧರ ನಾಯ್ಕ ಇವರ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಆತನು ರಸ್ತೆಯ ಮೇಲೆ ಬಿದ್ದು ತಲೆಗೆ ತೀವ್ರವಾದ ಗಾಯವಾದ ಕಾರಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ತೀವ್ರವಾಗಿ ಗಾಯಗೊಂಡ ಲೊಕೇಶ ಗೊಂಡ ಈತನನ್ನು ಸ್ಥಳೀಯರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಕುಂದಾಪುರದ ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.