ಬಿಜೆಪಿ ಮುಖಂಡ-ವೈದ್ಯ ಡಾ| ಟಿ.ಟಿ. ಹೆಗಡೆ ಇನ್ನಿಲ್ಲ
Team Udayavani, Jul 29, 2019, 9:29 AM IST
ಕುಮಟಾ: ಕುಮಟಾ ಹವ್ಯಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಹವ್ಯಕ ರತ್ನ, ಹಿರಿಯ ವೈದ್ಯ ಡಾ| ಟಿ.ಟಿ. ಹೆಗಡೆ (86) ಭಾನುವಾರ ಬೆಳಗಿನ ಜಾವ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಚೇತರಿಸಿಕೊಂಡು ಮನೆಗೆ ಮರಳುವ ಹಂತದಲ್ಲಿರುವಾಗ ರಾತ್ರಿ ನಿದ್ರೆಯಲ್ಲೇ ಕೋಮಾಕ್ಕೆ ತೆರಳಿ ಬೆಳಗ್ಗೆ 7ಕ್ಕೆ ಕೊನೆಯುಸಿರೆಳೆದಿದ್ದಾರೆ.
ಇವರು ಮುಂಬೈನಲ್ಲಿ ಎಂಬಿಬಿಎಸ್ ಮಾಡಿ ವೈದ್ಯರಾಗಿ ಸತತ ಆರು ದಶಕಗಳಿಗೂ ಹೆಚ್ಚು ಕಾಲ ಕುಮಟಾ ಹಾಗೂ ಇತರ ತಾಲೂಕಿನ ಜನರ ಸೇವೆ ಮಾಡಿದ್ದಾರೆ. ಮುಖ್ಯವಾಗಿ ಸಂಪರ್ಕ ವ್ಯವಸ್ಥೆಯೇ ಇಲ್ಲದ ದೂರದ ಕುಗ್ರಾಮಗಳಿಗೂ ತಡರಾತ್ರಿಯಲ್ಲೂ ತಮ್ಮ ರಾಜದೂತ್ ಬೈಕ್‌ನಲ್ಲಿ ಒಬ್ಬರೇ ರೋಗಿಯ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡುವ ಮೂಲಕ ಎಲ್ಲರಿಗೂ ತೀರಾ ಆಪ್ತರಾಗಿದ್ದ ಡಾ| ಹೆಗಡೆ, ವಿವಿಧ ಸಂಘಸಂಸ್ಥೆ, ಸಾಮಾಜಿಕ ಚಟುವಟಿಕೆಗಳಲ್ಲೂ ಕ್ರಿಯಾಶೀಲರಾಗಿ ಜನರಿಗೆ ಬೇಕಾದವರಾಗಿದ್ದರು. ಎಪಿಎಂಸಿ ಅಧ್ಯಕ್ಷರಾಗಿ ಸಾಕಷ್ಟು ಸುಧಾರಣೆಗಳಿಗೆ ಕಾರಣರಾಗಿದ್ದ ಡಾ| ಹೆಗಡೆಯವರು ರೈತಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಅದಲ್ಲದೇ, ಆರ್‌ಎಸ್‌ಎಸ್‌ನಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಕುಮಟಾದಲ್ಲಿ ಬಿಜೆಪಿಯನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ರಾಜಕೀಯದಲ್ಲಿದ್ದರೂ ನಿಷ್ಠುರವಾದಿಯಾಗಿ ಹೆಸರು ಮಾಡಿದ್ದರು.
ಹವ್ಯಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಹವ್ಯಕ ಸಭಾಭವನ, ವೃದ್ಧಾಶ್ರಮ, ವಿದ್ಯಾರ್ಥಿಗಳಿಗೆ ವಸತಿಗೃಹ, ಬಡ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ನೆರವು ಮುಂತಾದ ಸೇವೆ ಸಲ್ಲಿಸುತ್ತಲೇ ಜೀವನದ ಪಯಣ ಸಾರ್ಥಕವಾಗಿ ಮುಗಿಸಿದ್ದಾರೆ. ಡಾ| ಹೆಗಡೆಯವರು ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
ಡಾ| ಹೆಗಡೆಯವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಕುಮಟಾಕ್ಕೆ ತಂದ ಬಳಿಕ ಸಂಜೆ 7ರಿಂದ 10ರ ವರೆಗೆ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಅವರ ಅಪಾರ ಬಂಧುಬಳಗ ಹಾಗೂ ಅಭಿಮಾನಿಗಳು ಅಂತಿಮ ದರ್ಶನ ಪಡೆದು ನುಡಿನಮನ ಸಲ್ಲಿಸಿದರು. ಹಲವಾರು ಗಣ್ಯರು, ಸಾರ್ವಜನಿಕರು, ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.
ಕುಮಟಾದ ಪ್ರಸಿದ್ಧ ವೈದ್ಯ ಡಾ| ಟಿ.ಟಿ. ಹೆಗಡೆ ಅಗಲಿಕೆಗೆ ಸಂಸದ ಅನಂತಕುಮಾರ ಹೆಗಡೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ| ಟಿ.ಟಿ. ಹೆಗಡೆ ವೃತ್ತಿಯಲ್ಲಿ ವೈದ್ಯರಾಗಿದ್ದು, ಸಾಮಾಜಿಕ ಕಳಕಳಿ ಉಳ್ಳವರಾಗಿದ್ದವರು. ಅನೇಕ ಬಡವರಿಗೆ ಶುಲ್ಕವಿಲ್ಲದೆಯೇ ಚಿಕಿತ್ಸೆ ನೀಡಿರುವ ಅಪರೂಪದ ವೈದ್ಯರಾಗಿದ್ದರು. ಜನ ಸಂಘದ ಕಾಯದಿಂದಲೂ ಕಾರ್ಯಕರ್ತರಾಗಿದ್ದು, ನಂತರದ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸಿದ್ದಲ್ಲದೇ ಮಾರ್ಗದರ್ಶನ ಸಹ ನೀಡಿದವರು. ಬಿಜೆಪಿಯಿಂದ ಕುಮಟಾ ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಿಲ್ಲುವಂತೆ ಪಕ್ಷ ಕೇಳಿಕೊಂಡಾಗ ನಯವಾಗಿಯೇ ತಿರಸ್ಕರಿಸಿದ ಮಹಾನ್ ಚೈತನ್ಯ ಅವರು ಎಂದು ಸಂತಾಪ ಹೇಳಿಕೆಯಲ್ಲಿ ನೆನಪಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.