ಬೋಟ್ ಮುಳುಗಡೆ: 6 ಮೀನುಗಾರರ ರಕ್ಷಣೆ
Team Udayavani, Sep 4, 2021, 6:54 PM IST
ಹೊನ್ನಾವರ: ಶರಾವತಿ ಸಂಗಮದ ಅಳವೆಯಲ್ಲಿ ಗಂಗೊಳ್ಳಿ ಮೂಲದ ಕೃಷ್ಣ ಭಂಡಾರಿ ಹೆಸರಿನ ಶಿವರಾಮ ಶಿಯಾನ್ ಮಾಲಕತ್ವದ ಬೋಟ್ ಮುಳುಗಡೆಯಾಗಿದೆ. ಕಳೆದ ಎರಡು ದಿನದ ಹಿಂದೆ ಆಳ ಸಮುದ್ರ ಮೀನುಗಾರಿಕೆಗೆ ತೆರಳಿ ವಾಪಸ್ ಕಾಸರಕೋಡ ಬಂದರು ಪ್ರದೇಶಕ್ಕೆ ಆಗಮಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬೋಟ್ ಮುಳುಗಡೆಯಿಂದ ತುಂಬಿದ್ದ ಮೀನು ಹಾಗೂ ಸಲಕರಣೆಗಳು ಸಮುದ್ರ ಪಾಲಾಗಿ ಅಂದಾಜು 24ಲಕ್ಷ ರೂ. ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಬೋಟ್‌ನಲ್ಲಿದ್ದ 6 ಮೀನುಗಾರರನ್ನು ಮತ್ತೊಂದು ಬೋಟ್ ಹಾಗೂ ಕರಾವಳಿ ಕಾವಲುಪಡೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಅಳವೆ (ಬ್ಯಾಕ್‌ವಾಟರ್ ತಡೆಗೋಡೆ) ನಿರ್ಮಾಣಕ್ಕೆ ಮುಹೂರ್ತ ಕೂಡಿಬಂದಿಲ್ಲ. ಕೇಂದ್ರ ಸರ್ಕಾರದಿಂದ ಹಿಂದೆ ಬಂದ ಹಣ ವಾಪಸ್ ಹೋಗಿದೆ. ಅಳವೆಯ ಸಹಿತ ಬಂದರು ಕಾಮಗಾರಿ ವಹಿಸಿಕೊಂಡ ಕಂಪನಿ ಅಳವೆ ಆಳ ಮಾಡಲು
ಹೊರಟಿತ್ತು. ಅದಕ್ಕಾಗಿ ದೊಡ್ಡದೊಡ್ಡ ಕಲ್ಲುಗಳನ್ನು ಒಯ್ಯಬೇಕಾಗಿರುವುದರಿಂದ ಪ್ರತ್ಯೇಕ ರಸ್ತೆ ನಿರ್ಮಿಸಲು ಆರಂಭಿಸಿತ್ತು. ಕೆಲವು ಮೀನುಗಾರರ ವಿರೋಧದಿಂದ ರಸ್ತೆ ಕಾಮಗಾರಿ ಪದೇಪದೇ ನಿಲ್ಲುತ್ತಿದೆ. ಅಳವೆಯ ಆಳ ಮತ್ತು ಅಗಲ ವಿಸ್ತರಣೆ ಮೀನುಗಾರರಿಗೆ ಮಾತ್ರವಲ್ಲ ಬಂದರು ನಿರ್ಮಾಣ ಕಂಪನಿಗೂ ಅಗತ್ಯವಿತ್ತು. ಸ್ವಾರ್ಥ ಮತ್ತು ರಾಜಕೀಯ ಅಡ್ಡ ಬಂದರೆ ಯಾವ ಕೆಲಸವೂ ಆಗುವುದಿಲ್ಲ ಎಂಬುದಕ್ಕೆ ಅಳವೆ ಉದಾಹರಣೆ.
ಇದನ್ನೂ ಓದಿ:ಕೇಂದ್ರ ಅಧ್ಯಯನ ತಂಡ ಭೇಟಿ : ಮಾರ್ಗಸೂಚಿ ಬದಲಿಸಿ ಹೆಚ್ಚುವರಿ ಅನುದಾನಕ್ಕೆ ಮುಖ್ಯಮಂತ್ರಿ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.