![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Oct 18, 2021, 6:26 PM IST
ಭಟ್ಕಳ: ತಾಲೂಕಾ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಆರೋಗ್ಯ ಇಲಾಖೆಯ ಮೂಲಕ ಪ್ರತಿ ವರ್ಷದ ಅಕ್ಟೋಬರ್ ತಿಂಗಳನ್ನು ಸ್ತನ ಕ್ಯಾನ್ಸ್‍ರ್ ಜಾಗೃತಿ ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.
ಸ್ತನ ಕ್ಯಾನ್ಸ್‍ರ್ ಒಂದು ಗಂಭೀರ ಕಾಯಿಲೆಯಾಗಿದ್ದು ಸೂಕ್ತ ತಪಾಸಣೆ ಮತ್ತು ಚಿಕಿತ್ಸೆಯಿಂದ ಇದನ್ನು ಪ್ರಥಮ ಹಂತದಲ್ಲಿಯೇ ಗುಣಪಡಿಸಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಮಹಿಳೆಯರು ಸೂಕ್ತ ತಪಾಸಣೆಯನ್ನು ವೈದ್ಯರಲ್ಲಿ ಮಾಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಇದಕ್ಕೂ ಪೂರ್ವ ಮಾತನಾಡಿದ ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಅವರು ಸ್ತನ ಕ್ಯಾನ್ಸ್‍ರ್ ಕುರಿವು ವಿವರವನ್ನು ನೀಡುತ್ತಾ ಮಹಿಳೆಯರು ಪ್ರಾಥಮಿಕವಾಗಿ ತಾವೇ ಪರೀಕ್ಷಿಸಿಕೊಳ್ಳಬಹುದಾದ ಕಾಯಿಲೆ ಇದಾಗಿದ್ದು ಯಾರೂ ಕೂಡಾ ನಿರ್ಲಕ್ಷ ಮಾಡದೇ ತಪಾಸಣೆ ಮಾಡಿಸಿಕೊಳ್ಳಬೇಕು. ನಿರ್ಲಕ್ಷ ಮಾಡಿದರೆ ಇದೊಂದು ಗಂಭೀರ ಕಾಯಿಲೆಯಾಗಿದೆ ಎಂದರು.
ಸ್ತ್ರೀರೋಗ ತಜ್ಞೆ ಡಾ. ಶಂಮ್ಸ್ ನೂರ್ ಅವರು ಮಾತನಾಡಿ ಸ್ತನ ಕ್ಯಾನ್ಸ್‍ರ್‍ನ್ನು ಪ್ರತಿಯೋರ್ವ ಮಹಿಳೆ ತಾವೇ ಪರೀಕ್ಷಿಸಿಕೊಳ್ಳಬಹುದು. ಯಾವುದೇ ಕಾಯಿಲೆಯನ್ನು ಪ್ರಾಥಮಿಕ ಹಂತದಲ್ಲಿಯೇ ತಡೆಯುವುದು ಮುಖ್ಯವಾಗಿದ್ದು ಇದನ್ನೂ ಕೂಡಾ ಮಹಿಳೆಯರು ತಮ್ಮ ಜೀವನ ಪದ್ಧತಿಯಿಂದಲೇ ತಡೆಯಬಹುದು ಎಂದರು.
ನಂತರ ತಾಲೂಕಾ ಆಸ್ಪತ್ರೆಯಿಂದ ಹೊರಟ ಜಾಗೃತಿ ಜಾಥಾವು ಆಸ್ಪತ್ರೆ ರಸ್ತೆಯಿಂದ ಇಂದಿರಾ ಕ್ಯಾಂಟೀನ್ ಮೂಲಕ ರಾಷ್ಟ್ರೀಯ ಹೆದ್ದಾರಿಯಾಗಿ ಶಂಶುದ್ಧೀನ್ ಸರ್ಕಲ್, ಸಾಗರ ರಸ್ತೆಯ ಮೂಲಕ ಮತ್ತೆ ತಾಲೂಕಾ ಆಸ್ಪತ್ರೆಯನ್ನು ತಲುಪಿ ಸಂಪನ್ನಗೊಂಡಿತು.
ಜಾಥಾದಲ್ಲಿ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್., ತಾಲೂಕಾ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್, ವಲಯ ಅರಣ್ಯಾದಿಕಾರಿ ಸವಿತಾ ದೇವಡಿಗ, ಶಿಶುಅಭಿವೃದ್ಧಿ ಇಲಾಖೆಯ ಸುಶೀಲಾ ಮೊಗೇರ, ನಗರ ಠಾಣೆಯ ಸಬ್ ಇನ್ಸಪೆಕ್ಟರ್ ಸುಮಾ ಬಿ., ಗ್ರಾಮೀಣ ಠಾಣೆಯ ರತ್ನಾ ಕುರಿ ತಾಲೂಕಿನ ಅಂಗನವಾಡಿ, ಆಶಾ ಕಾರ್ಯಕರ್ತರು, ವಿವಿಧ ಇಲಾಖೆಯ ಮಹಿಳಾ ಸಿಬ್ಬಂದಿಗಳು ಭಾಗವಹಿಸಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.