ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು
Team Udayavani, Oct 5, 2019, 11:26 AM IST
ಅಂಕೋಲಾ: ಲಾರಿ ಮತ್ತು ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಂಕೋಲದ ರಾಷ್ಟ್ರೀಯ ಹೆದ್ದಾರಿ 63ರ ಹೆಬ್ಬುಳ ಬಳಿ ನಡೆದಿದೆ.
ಬೆಂಗಳೂರಿನಿಂದ ಕಾರವಾರ ಕಡೆ ಬರುತ್ತಿದ್ದ ಹುಂಡೈ ಕಾರು ಮತ್ತು ಅಂಕೋಲಾದಿಂದ ಯಲ್ಲಾಪುರ ಮಾರ್ಗವಾಗಿ ಹೊಗುತ್ತದ್ದ ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. ಕಾರವಾರದ ಮೂಲದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಇನ್ನಿಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿದೆ.
ಬೆಂಗಳೂರಿನಿಂದ ಕಾರವಾರಕ್ಕೆ ಕಾರಿನಲ್ಲಿ ಬರುತ್ತಿದ್ದ ತಂದೆ ಮಗ ಮತ್ತು ಸೊಸೆ ಬರುತ್ತಿದ್ದು, ಅಪಘಾತದಲ್ಲಿ ತಂದೆ ಕಾರವಾರದ ವಿ.ಕೆ.ಚಂದ್ರಮೌಳಿ, ಮತ್ತು ಕಾರಿನ ಚಾಲಕ ಕೊಡಿಭಾಗದ ನಿವಾಸಿ ರಾಘವೇಂದ್ರ ಡಿ. ನಾಯ್ಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಗ ಕಾರ್ತಿಕ .ವಿ.ಸಿ ಮತ್ತು ಸೊಸೆ ಕಿರ್ತಿ .ವಿ.ಸಿ ಗಂಭೀರ ಸ್ವರೂಪದ ಗಾಯಗಳಾಗಿದ್ದು ಇವರನ್ನು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಾರು ಚಾಲಕನ ಅಜಾಗರೂಕತೆ ಚಾಲನೆ ಈ ಅವಘಡಕ್ಕೆ ಕಾರಣ ಎಂದು ಪ್ರಕರಣ ದಾಖಲಾಗಿದೆ. ಸಿಪಿಐ ಕೃಷ್ಣಾನಂದ ನಾಯಕ, ಪಿಎಸ್ಐ ಎ. ವೈ ಕಾಂಬಳೆ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಡರಾತ್ರಿ ಸಾರ್ವಜನಿಕ ಸ್ಥಳಗಳಲ್ಲಿ ಹರಟೆ ಹೊಡೆಯುತ್ತಿದ್ದ ಯುವಕರ ಚಳಿ ಬಿಡಿಸಿದ ಪೊಲೀಸರು
Dandeli: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದವರಿಗೆ ಖಡಕ್ ಎಚ್ಚರಿಕೆ ನೀಡಿದ ಡಿವೈಎಸ್ಪಿ
Yakshagana; ಯಕ್ಷಗಾನದಲ್ಲಿ ಮೊದಲ ಬಾರಿ ಮಂಥರೆಯಾಗಿ ಮಿಂಚಿದ ಖ್ಯಾತ ನಟಿ ಉಮಾಶ್ರೀ
ಮೊದಲ ಬಾರಿಗೆ ಯಕ್ಷಗಾನ ಕ್ಷೇತ್ರಕ್ಕೆ ಪ್ರವೇಶಿಸಲಿರುವ ನಟಿ ಉಮಾಶ್ರೀ
ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.