ರೈಲಿನಡಿ ಸಿಲುಕಿ ಚಿರತೆ ಸಾವು
Team Udayavani, Mar 21, 2021, 9:20 PM IST
ಕಾರವಾರ: ತಾಲೂಕಿನ ಚೆಂಡಿಯಾ ಗ್ರಾಮದ ಬಳಿ ರೈಲಿನಡಿ ಸಿಲುಕಿ 3 ವರ್ಷದ ಗಂಡು ಚಿರತೆ ಮೃತಪಟ್ಟಿದೆ. ಶನಿವಾರ ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ ಎಂದು ರೈಲ್ವೆ ಟ್ರಾಕ್ ಮ್ಯಾನ್ ತಿಳಿಸಿದ್ದಾರೆ.
ಅಮದಳ್ಳಿ ಚೆಂಡಿಯಾ ಮಧ್ಯದ ಭಜನಕೇರಿಯ ಬಳಿ ಕೊಂಕಣ ರೈಲ್ವೆ ಮಾರ್ಗ ಹಾದು ಹೋಗಿದ್ದು, ಪಕ್ಕದಲ್ಲಿ ಅರಣ್ಯ ಹಾಗೂ ಗುಡ್ಡ ಪ್ರದೇಶವಿದ್ದು, ಇಲ್ಲಿ ಚಿರತೆಗಳ ಸಂಚಾರವಿದೆ. ಚಿರತೆ ಹಳಿ ದಾಟುವಾಗ ಚಲಿಸುತ್ತಿದ್ದ ರೈಲಿಗೆ ಸಿಕ್ಕಿದೆ. ರೈಲು ಬಡಿದು 3 ವರ್ಷದ ಗಂಡು ಚಿರತೆ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿ ತಿಳಿಸಿದ್ದಾರೆ.
ಉಪಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ. ವಸಂತ ರೆಡ್ಡಿ ಮೃತಪಟ್ಟ ಚಿರತೆಯನ್ನು ವೀಕ್ಷಿಸಿದರು. ಅವರ ಜೊತೆಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ ಕುಮಾರ, ವಲಯ ಅರಣ್ಯಾಧಿಕಾರಿ ಜಿ.ವಿ. ನಾಯ್ಕ, ಪಶು ವೈದ್ಯಾಧಿ ಕಾರಿ, ಕೊಂಕಣ ರೈಲ್ವೆ ಸೆಕ್ಷನ್ ಇಂಜಿನಿಯರ ಒಳಗೊಂಡಂತೆ ಪಂಚರ ಸಮ್ಮುಖದಲ್ಲಿ ಚಿರತೆಯ ಮರಣೋತ್ತರ ಪರೀಕ್ಷೆ ಕೈಗೊಳ್ಳಲಾಯಿತು.
ಕಾರವಾರ ಉಪಸಂರಕ್ಷಣಾಧಿಕಾರಿ ಆದೇಶದಂತೆ ಚಿರತೆಯ ಕಳೆಬರವನ್ನು ದಹಿಸಲು ಸೂಕ್ತ ಕ್ರಮ ಜರುಗಿಸಲಾಯಿತು. ನಂತರ ಕೊಂಕಣ ರೈಲ್ವೆ ಹಳಿಗಳ ಮೇಲೆ ವನ್ಯಪ್ರಾಣಿಗಳು ಸಾವನ್ನಪ್ಪುತ್ತಿರುವುದನ್ನು ತಡೆಗಟ್ಟಲು ಪರಿಹಾರ ಕ್ರಮ ಕೈಗೊಳ್ಳುವ ಪ್ರಸ್ತಾವನೆ ತಯಾರಿಸಿ ಕೊಂಕಣ ರೈಲ್ವೆ ಅಧಿಕಾರಿಗಳು ಹಾಗೂ ಕೊಂಕಣ ರೈಲ್ವೆ ಮಂಡಳಿಗೆ ಕಳುಹಿಸುವ ಕುರಿತಂತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲು ನಿರ್ಣಯಿಸಲಾಯಿತೆಂದು ಉಪಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ. ವಸಂತ ರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.