ಸ್ವಚ್ಚ ಭಾರತ ಅಭಿಯಾನ ಬೃಹತ್ ಸಮೂಹ ಚಳುವಳಿಯಾಗಿದೆ-ಆರ್.ಎಸ್.ಪವಾರ್


Team Udayavani, Oct 13, 2021, 7:37 PM IST

ಸ್ವಚ್ಚ ಭಾರತ ಅಭಿಯಾನ ಬೃಹತ್ ಸಮೂಹ ಚಳುವಳಿಯಾಗಿದೆ-ಆರ್.ಎಸ್.ಪವಾರ್

ದಾಂಡೇಲಿ:  ಸ್ವಚ್ಚ ಭಾರತ ನಿರ್ಮಾಣದ ಕನಸನ್ನಿಟ್ಟು ಸ್ವಚ್ಚತೆಯೆಡೆಗೆ ಸಾಗುವ ಅಚಲವಾದ ಗುರಿಯೊಂದಿಗೆ ಸ್ವಚ್ಚತಾ ಜಾಗೃತಿ ಮೂಡಿಸುವ ಕಾರ್ಯವನ್ನು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ನಿತ್ಯನಿರಂತರವಾಗಿ ಮಾಡಿದ್ದರು. ಸ್ವಚ್ಚತೆಯಿದ್ದಲ್ಲಿ ಆರೋಗ್ಯ, ಆರೋಗ್ಯವಿದ್ದಲ್ಲಿ ಸಮೃದ್ದ ಮತ್ತು ಸಶಕ್ತ ರಾಷ್ಟ್ರ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಸ್ವಚ್ಚತೆಗೆ ಹೆಚ್ಚಿನ ಒತ್ತನ್ನು ನೀಡಲಾಗಿ ಸ್ವಚ್ಚತಾ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ. ಸ್ವಚ್ಚ ಭಾರತ್ ಅಭಿಯಾನ ಒಂದು ಬೃಹತ್ ಸಮೂಹ ಚಳುವಳಿಯಾಗಿದೆ ಎಂದು ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಅವರು ಹೇಳಿದರು.

ಅವರು ಬುಧವಾರ ನಗರದ ಬಂಗೂರನಗರ ಪದವಿ ಮಹಾವಿದ್ಯಾಲಯದಲ್ಲಿ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಶಿವಮೊಗ್ಗ ಹಾಗೂ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಗಾಂಧೀ ಜಯಂತಿ ಅಂಗವಾಗಿ ನಡೆದ ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಶಿವಮೊಗ್ಗದ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಕ್ಷೇತ್ರ ಪ್ರಚಾರಾಧಿಕಾರಿಗಳಾದ ಜಿ.ತುಕಾರಾಮ ಗೌಡ ಅವರು ಸ್ವಚ್ಚ ಭಾರತ ನಿರ್ಮಾಣದ ಬಹುದೊಡ್ಡ ಕನಸು ಹೊಂದಿದ್ದ ಗಾಂಧೀಜಿಯವರ ಜನ್ಮದಿನಾಚರಣೆಯಂದೆ ಸ್ವಚ್ಚ ಭಾರತ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸ್ವಚ್ಚತೆಯ ಬಗ್ಗೆ ಜನಮಾನಸಕ್ಕೆ ಅರಿವು ಮೂಡಿಸಿ, ಆ ಮೂಲಕ ಸ್ವಚ್ಚತೆಯೆಡೆಗೆ ಸಮಾಜವನ್ನು ಕೊಂಡೊಯ್ಯಬೇಕಾದ ಗುರುತರವಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಸಮಾಜವನ್ನು ಜಾಗೃತಗೊಳಿಸುವ ಶಕ್ತಿಗಳಾಗಿರುವ ವಿದ್ಯಾರ್ಥಿಗಳಿಗೆ ಸ್ವಚ್ಚತೆಯ ಸಮಗ್ರವಾದ ಅರಿವನ್ನು ಮೂಡಿಸಿ ಸ್ವಚ್ಚ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ಪ್ರಯತ್ನ ಈ ಕಾರ್ಯಕ್ರಮದ ಮೂಲ ಆಶಯವಾಗಿದೆ. ಎಲ್ಲವು ಇದ್ದು ಆರೋಗ್ಯ ಸರಿಯಿಲ್ಲದಿದ್ದಾಗ ಎಲ್ಲವನ್ನು ಕಳೆದುಕೊಳ್ಳಬಹುದು. ಆದರೆ ಆರೋಗ್ಯವನ್ನು ಕಾಪಾಡಿಕೊಂಡಿದ್ದೇಯಾದಲ್ಲಿ ಮಿಕ್ಕುಳಿದವುಗಳನ್ನು ಗಳಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲ ಗಳಿಕೆಗಳಿಗೆ ಮೂಲ ಆಸರೆಯೆ ಆರೋಗ್ಯ, ಸದೃಢ ಆರೋಗ್ಯ ನಿರ್ಮಾಣಕ್ಕೆ ಸ್ವಚ್ಚತೆ ಬಹುಮುಖ್ಯವಾಗಿದೆ ಎನ್ನುವುದನ್ನು ವಿದ್ಯಾರ್ಥಿಗಳು ಅರಿತು ಸಮಾಜಕ್ಕೂ ಅರಿವಿನ ದೀಪವನ್ನು ಹಚ್ಚಬೇಕೆಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯೆ ಡಾ.ಶೋಭಾ ಶರ್ಮಾ ಅವರು ವಹಿಸಿ ಮಾತನಾಡಿ ಕಾಲೇಜಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿ, ಸ್ವಚ್ಚ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳನ್ನು ಅಣಿಗೊಳಿಸಲು ಈ ಕಾರ್ಯಕ್ರಮ ಸಹಕಾರಿ ಎಂದು ಹೇಳಿ ಕ್ಷೇತ್ರ ಜನಸಂಪರ್ಕ ಕಾರ್ಯಾಲಯದ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಕಾಲೇಜಿನ ಉಪ ಪ್ರಾಚಾರ್ಯ ಡಾ.ಆರ್.ಜಿ.ಹೆಗಡೆಯವರು ಭಾಗವಹಿಸಿ ಮಾತನಾಡುತ್ತಾ, ಹಿರಿಯರು ಸ್ವಚ್ಚತೆಗೆ ಹೆಚ್ಚಿನ ಪ್ರಾದಾನ್ಯತೆಯನ್ನು ನೀಡುತ್ತಿದ್ದರು. ಹಿರಿಯರು ಹಾಕಿ ಕೊಟ್ಟ ಸಂಸ್ಕೃತಿ, ಜೀವನಸಂಸ್ಕಾರಗಳನ್ನು ಮೈಗೂಡಿಸಿ ಬಾಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಈ ನಿಟ್ಟಿನಲ್ಲಿ ಸ್ವಚ್ಚತೆಯ ಪ್ರಾಮುಖ್ಯತೆಯನ್ನು ಜಗತ್ತಿಗೆ ಕೊರೊನಾ ಕಲಿಸಿಕೊಟ್ಟಿದೆ. ಸಚ್ಚ ಸಮಾಜ ನಿರ್ಮಾಣಕ್ಕೆ ನಾವೆಲ್ಲರೂ ಕಂಕಣಬದ್ದರಾಗಬೇಕೆಂದು ಕರೆ ನೀಡಿದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.