ಸಿಎಂ ನೈತಿಕ ಹೊಣೆ ಹೊತ್ತು ಸದ್ಯಕ್ಕೆ ರಾಜೀನಾಮೆ ನೀಡಲಿ-ಎನ್‌.ಎಸ್‌.ಹೆಗಡೆ


Team Udayavani, Aug 21, 2024, 6:11 PM IST

ಸಿಎಂ ನೈತಿಕ ಹೊಣೆ ಹೊತ್ತು ಸದ್ಯಕ್ಕೆ ರಾಜೀನಾಮೆ ನೀಡಲಿ-ಎನ್‌.ಎಸ್‌.ಹೆಗಡೆ

ಕಾರವಾರ: ಮುಡಾ ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್‌.ಎಸ್‌.ಹೆಗಡೆ ಒತ್ತಾಯಿಸಿದರು.

ಇಲ್ಲಿನ ಪತ್ರಿಕಾಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿ. ಅವರ ಮೇಲೆ ಆಪಾದನೆ ಬಂದಿದೆ. ರಾಜ್ಯದಲ್ಲಿ 135 ಸ್ಥಾನ ಪಡೆದಿರುವ ಕಾಂಗ್ರೆಸ್‌ ಒಳ್ಳೆಯ ಆಡಳಿತ ನೀಡಲಿ. ಆದರೆ ಸದ್ಯಕ್ಕೆ ಮುಖ್ಯಮಂತ್ರಿ ರಾಜೀನಾಮೆ ಕೊಡಲಿ. ಆರೋಪದಿಂದ ಮುಕ್ತರಾದ ನಂತರ ಮತ್ತೆ ಆಡಳಿತ ನಡೆಸಲಿ ಎಂದರು.

ಕಾಂಗ್ರೆಸ್‌ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಿದ್ದು ಸರಿಯಲ್ಲ. ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿಯೇ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್‌ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ವಿರುದ್ಧವೇ ಪ್ರತಿಭಟನೆ ಮಾಡಿದ್ದು ಅಕ್ಷಮ್ಯ ಅಪರಾಧ. ಸಿಎಂ ವಿರುದ್ಧ ಆರೋಪ ಕೇಳಿಬಂದಿದೆ. ಅದನ್ನು ಅವರು ಎದುರಿಸಬೇಕು. ವಿರೋಧ ಪಕ್ಷದ ಯಾವ ಪ್ರಶ್ನೆಗೂ ಉತ್ತರಿಸದೇ
ಸಿದ್ದರಾಮಯ್ಯ ಫಲಾಯನ ಮಾಡಬಾರದು ಎಂದರು.

ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ಸದಾನಂದ ಭಟ್‌ ಮಾತನಾಡಿ ಸಿದ್ದರಾಮಯ್ಯ 14 ಬಜೆಟ್‌ ಮಂಡಿಸಿದವರು. ಅರ್ಥಿಕ ಖಾತೆ ಅವರ ಬಳಿಯೇ ಇದೆ. ಆದರೂ ಅವರಿಗೆ ವಾಲ್ಮೀಕಿ ನಿಗಮದ ಹಗರಣ ಗೊತ್ತಾಗಲಿಲ್ಲ ಎಂಬುದು ಸೋಜಿಗ. ಮುಡಾ ಹಗರಣ ಸಹ ಅವರ ಕೊರಳಿಗೆ ಬಿದ್ದಿದೆ. ಈ ವಿಚಾರದಲ್ಲಿ ರಾಜ್ಯಪಾಲರ ವಿರುದ್ಧ ಸಚಿವ ಸಂಪುಟ ನಿರ್ಣಯ ಮಾಡಿದ್ದು ಸರಿಯಲ್ಲ. ಇದು
ಸಂವಿಧಾನಕ್ಕೆ ತೋರಿದ ಅಗೌರವ ಎಂದರು.

ಸಿಎಂ ಸಿದ್ದರಾಮಯ್ಯ ರಾಮಕೃಷ್ಣ ಹೆಗಡೆ ಅವರ ಗರಡಿಯಲ್ಲಿ ಬೆಳೆದವರು. ಹೆಗಡೆಯವರ ರಾಜಕೀಯ ಮೌಲ್ಯ
ಅನುಸರಿಸಬೇಕು. ಆರೋಪ ಕೇಳಿಬಂದಾದ ರಾಜೀನಾಮೆ ನೀಡಿದ ಅನೇಕ ಉದಹಾರಣೆಗಳಿವೆ. ಹಾಗೆಯೇ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ಅಪರಾಧ ಸಾಬೀತಾಗದಿದ್ದರೆ ಮತ್ತೆ ಅಧಿಕಾರಕ್ಕೆ ಬರಲಿ. ತಾವು ಇಲ್ಲದೆ ಇದ್ದರೆ ಕಾಂಗ್ರೆಸ್‌ ಇರಲ್ಲ ಎಂಬುದನ್ನು ಬಿಂಬಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಕರಣ ಬಳಸಿಕೊಂಡರು. ನಾವು ರಾಜೀನಾಮೆ ಕೇಳಿದರೆ, ಇಡೀ
ಪ್ರಕರಣವನ್ನು ಮತ್ತೂಂದೆಡೆಗೆ ತಿರುಗಿಸಿದರು ಎಂದು ಆರೋಪಿಸಿದರು.

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ನ ಸಚಿವ ಕೃಷ್ಣ ಭೈರೇಗೌಡ, ಜಮೀರ್‌ ಅಹಮ್ಮದ್‌ ಖಾನ್‌, ವಿಧಾನ ಪರಿಷತ್‌ ಸದಸ್ಯ ಐವನ್‌
ಡಿಸೋಜಾ ಅವರು ಮಾತನಾಡಿದ್ದು ಅಕ್ಷಮ್ಯ. ಇವರಿಗೆಲ್ಲ ರಾಜ್ಯಪಾಲ ಹುದ್ದೆಯ ಮಹತ್ವವೇ ತಿಳಿದಿಲ್ಲ ಎಂಬುದು ಅವರ ಹೇಳಿಕೆಗಳಿಂದ ಸಾಬೀತಾಗಿದೆ ಎಂದರು. ಜಗದೀಶ್‌ ನಾಯಕ, ಸುಭಾಷ್‌ ಗುನಗಿ, ಕಿಶನ್‌‌, ಬಿಜೆಪಿ ಪದಾಧಿಕಾರಿಗಳು, ಮುಂತಾದವರು ಉಪಸ್ಥಿತರಿದ್ದರು.

ಹತ್ತು ದಿನದ ನಂತರವೂ ಸಿಎಂ ಮಾತಿಗೆ ಬದ್ಧರಾಗಿರಲಿ
ಬಿಜೆಪಿ ಆರೋಪ ಮಾಡಿದೆ. ಅದಕ್ಕೆ ರಾಜ್ಯಪಾಲರು ತನಿಖೆಗೆ ಅನುಮತಿ ಕೊಟ್ಟಿದ್ದಾರೆ. ಪ್ರಕರಣ ಹೈಕೋರ್ಟ್‌ ನಲ್ಲಿದೆ. ಹತ್ತು ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್‌ ಸಿಕ್ಕಿದೆ. ಈಗ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದಿದ್ದಾರೆ. ಹತ್ತು ದಿನಗಳ ನಂತರ ಬರುವ ತೀರ್ಮಾನವನ್ನೂ ಅವರು ಒಪ್ಪಿಕೊಳ್ಳಬೇಕು. ಸತ್ಯಮೇವ ಜಯತೆ ಎಂಬ ಮಾತಿಗೆ ಬದ್ಧರಾಗಿರಬೇಕು ಎಂದು ಬಿಜೆಪಿ ವಕ್ತಾರ ಸದಾನಂದ ಭಟ್‌ ಹೇಳಿದರು.

ಟಾಪ್ ನ್ಯೂಸ್

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.