ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ಸಿಗೆ ಅಭಿನಂದನೆ
Team Udayavani, Jul 5, 2020, 2:53 PM IST
ಭಟ್ಕಳ: ತಾಲೂಕಿನಲ್ಲಿ ಬಿಇಒ ಹಾಗೂ ಎಲ್ಲ ಶಿಕ್ಷಕರು, ಅಧಿಕಾರಿಗಳ ಸಹಕಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಉತ್ತಮ ರೀತಿಯಲ್ಲಿ ನಡೆದಿದ್ದು ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ. ಪಾಲಕರು ಬಹಳ
ಆತಂಕದಲ್ಲಿರುವಾಗ ಸರಕಾರ ಉತ್ತಮ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಯಾವುದೇ ಅಡ್ಡಿ ಆತಂಕವಿಲ್ಲದೆ ಪರೀಕ್ಷೆ ನಡೆಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸ್ಥಳೀಯವಾಗಿ ಶಿಕ್ಷಣ ಅಧಿಕಾರಿಗಳು, ತಾಲೂಕು ಆಡಳಿತ, ವೈದ್ಯಕೀಯ ಸಿಬ್ಬಂದಿ ಹಾಗೂ ವಿಶೇಷವಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಹಕಾರ ಎಲ್ಲ ವಿದ್ಯಾರ್ಥಿಗಳಿಗೂ ಅನುಕೂಲವಾಗಿತ್ತು. ಈ ಕುರಿತು ಮಾತನಾಡಿದ ಬಿಇಒ ಎಂ.ಆರ್. ಮುಂಜಿ, ಜವಾಬ್ದಾರಿಯುತವಾಗಿ ಪರೀಕ್ಷೆ ನಡೆಸಲು ಸಹಕರಿಸಿದ ತಾಲೂಕಿನ ಮುಖ್ಯ ಅಧೀಕ್ಷಕರು, ಉಪಮುಖ್ಯ ಅಧೀಕ್ಷಕರು, ಪರೀಕ್ಷಾ ಮಾರ್ಗಾಧಿಕಾರಿಗಳು, ಪ್ರಶ್ನೆ ಪತ್ರಿಕೆ ಪಾಲಕರು, ಕೊಠಡಿ ಮೇಲ್ವಿಚಾರಕರು, ಮೊಬೆ„ಲ್ ಸ್ವಾಧೀನಾಧಿಕಾರಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಸ್ವಯಂ ಸೇವಕರಾದ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರುಗಳಿಗೆ ಹಾಗೂ ವಿವಿಧ ಇಲಾಖೆಗಳು, ಪೊಲೀಸ್ ಸಿಬ್ಬಂದಿಗಳು, ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳನ್ನು ಅಭಿನಂದಿಸಿದರು.
ಪರೀಕ್ಷೆಯ ಆರಂಭದಿಂದ ಕೊನೆಯ ತನಕವೂ ಪ್ರತಿ ಹಂತದಲ್ಲಿಯೂ ಉಪ ನಿರ್ದೇಶಕ ಹರೀಶ್ ಗಾಂವ್ಕರ್ ಮಾರ್ಗದರ್ಶನ, ಜಿಲ್ಲಾ ನೋಡಲ್ ಅಧಿಕಾರಿ ಶ್ರೀಕಾಂತ ಹೆಗಡೆ, ಎನ್.ಜಿ.ನಾಯಕ, ಲತಾ, ತಾಲೂಕು ನೋಡಲ್ ಅಧಿಕಾರಿ ಪ್ರಕಾಶ ಶಿರಾಲಿ ಹಾಗೂ ಇತರರ ಸಹಕಾರ ಸ್ಮರಿಸಿದರು. ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ ತಾಲೂಕಿಗೆ ಉತ್ತಮ ಹೆಸರು ತರಲೆಂದೂ ಹಾರೈಸಿದರು. ತಾಲೂಕು ನೋಡಲ್ ಅಧಿಕಾರಿ ಪ್ರಕಾಶ ಶಿರಾಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.