ರಾಜ್ಯದ ಬೊಕ್ಕಸ ಲೂಟಿ ಹೊಡೆದ ಕಾಂಗ್ರೆಸ್‌

Team Udayavani, May 1, 2018, 4:34 PM IST

30-YLP-02.jpg

ಯಲ್ಲಾಪುರ: ಸಿದ್ದರಾಮಯ್ಯ ನೇತೃತ್ವದ ಲೂಟಿಕೋರ ಸರ್ಕಾರ ರಾಜ್ಯದ ಬೊಕ್ಕಸವನ್ನೇ ಲೂಟಿ ಹೊಡೆದಿದೆ.

ಭಾರತಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಗರೀಬಿ ಹಠಾವೊ ಘೋಷಣೆ ಮಾಡುತ್ತ ಬಂದಿರುವ ಕಾಂಗ್ರೆಸ್‌ ದೇಶದ ಜನರ ಬಡತನ ತೊಲಗಿಸಿಲ್ಲ. ಕಾಂಗ್ರೆಸ್‌ ಚೇಲಾಗಳ ಬಡತನ ದೂರ ಮಾಡಿಕೊಂಡಿದೆ. ಜನರ ವಿಶ್ವಾಸಕ್ಕೆ ಧಕ್ಕೆ ತಂದಿದೆ. ವ್ಯಾಪಕ ಭ್ರಷ್ಟಾಚಾರ ಎಸಗಿದೆ. ಮತದ ಸಲುವಾಗಿ ಕರ್ನಾಟಕ ಸರ್ಕಾರ ಜಾತಿ ಜಾತಿಯ ನಡುವೆ ಒಡಕು ಹುಟ್ಟಿಸಿ ಧರ್ಮವನ್ನು ಒಡೆಯುತ್ತಿದೆ. ಇದನ್ನು ಕಿತ್ತಸೆಯಿರಿ ಎಂದು ಕೇಂದ್ರ ಸಾರಿಗೆ ಹಾಗೂ ಬಂದರು ಸಚಿವ ನಿತಿನ ಗಡ್ಕರಿ ಹೇಳಿದರು.

ವೈಟಿಎಸ್‌ಎಸ್‌ ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಎಸ್‌. ಪಾಟೀಲ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ದೇಶದಲ್ಲಿ ಬಿಜೆಪಿಯಿಂದ ಮಾತ್ರ ಭ್ರಷ್ಟಾಚಾರ ರಹಿತ ಆಡಳಿತ ಸಾಧ್ಯ. ಕರ್ನಾಟಕದ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 2 ಲಕ್ಷ ಕೋಟಿಗಿಂತ ಅಧಿಕ ಅನುದಾನ ನೀಡಲಾಗಿದೆ. ಆದರೆ ಅದನ್ನು ತಮ್ಮ ಸಾಧನೆಯೆಂದು ಈ ಸಿದ್ದರಾಮಯ್ಯ ಕಾಂಗ್ರೆಸ್‌ ಸರ್ಕಾರ ಹೇಳಿಕೊಳ್ಳುತ್ತಿದೆ. ಯಲ್ಲಾಪುರದಲ್ಲೂ ರಾಷ್ಟ್ರೀಯ ಹೆದ್ದಾರಿ ಪಕ್ಕ 17 ಕೋಟಿ ವೆಚ್ಚದ ಕಾಂಕ್ರಿಟ್‌ ಗಟಾರ ಕಾಮಗಾರಿ ನಡೆಯುತ್ತಿದೆ. ಇಲಕಲ್‌ ಕೈಗಾ, ಖಾನಾಪುರ ತಾಳಗುಪ್ಪ ಈ ಎಲ್ಲಾ ರಸ್ತೆ ಸುಧಾರಣಾ ಕಾಮಗಾರಿಗಳು ಕೇಂದ್ರದ್ದೇ ಆಗಿವೆ. ಆದರೆ ಅದನ್ನು ತಮ್ಮ ಸಾಧನೆಯೆಂದು ಕಾಂಗ್ರೆಸ್‌ ಹೇಳಿಕೊಳ್ಳುತ್ತಿದೆ. ಇದೇ ಇವರ ಸಾಧನೆ ಹೇಳಿಕೊಳ್ಳುವ ವಿಧಾನ. ಮದುವೆಯಾಗಿದ್ದು ನಾವು, ಮಕ್ಕಳಾದದ್ದೂ ನಮಗೆ. ಆದರೆ ಸಿಹಿ ಹಂಚಿ ಸಂಭ್ರಮಿಸುತ್ತಿರುವುದು ಮಾತ್ರ ಕಾಂಗ್ರೆಸಿನವರು ಎಂದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದರೆ ರಾಜ್ಯದ ವಿಕಾಸ ಸಾಧ್ಯ. ನದಿಗಳ ಜೋಡಣೆ ಮೂಲಕ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡು ರಾಜ್ಯಗಳ ನೀರಿನ ಸಮಸ್ಯೆ ಪರಿಹರಿಸಲಾಗುವುದು. ದೇಶದ ಭವಿಷ್ಯ ಬದಲಾಯಿಸುವ ಪ್ರಯತ್ನ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ. ಬದಲಿ ಇಂಧನಗಳ ಬಳಕೆ, ಹೈನುಗಾರಿಕೆ, ಕೃಷಿಗೆ ಉತ್ತೇಜನ ನೀಡುವ ಮೂಲಕ ರೈತರ ಸ್ವಾವಲಂಬನೆಗೆ ಯತ್ನಿಸಲಾಗುತ್ತಿದೆ. ಹಳ್ಳಿಗಳಲ್ಲಿನ ಕಚ್ಚಾ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿಕೊಡುವ ಮೂಲಕ ಹೊರಗಿನಿಂದ ಆಮದು ಮಾಡಿಕೊಳ್ಳುವ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದರು.

ಅಭ್ಯರ್ಥಿ ವಿ.ಎಸ್‌. ಪಾಟೀಲ ಮಾತನಾಡಿ, ಈ ಹಿಂದೆ2008 ರಲ್ಲಿ ಊರಿನ ಮಗನಿಗೆ ಆಶೀರ್ವಾದ ಮಾಡಿದ್ದೀರಿ. ಈಗ ದತ್ತುಪುತ್ರನಾಗಿ ನನ್ನನ್ನು ಸ್ವೀಕರಿಸಿ ಆಶೀರ್ವದಿಸುವ ಮೂಲಕ ಬಿಜೆಪಿಯನ್ನು ಗೆಲ್ಲಿಸಬೇಕೆಂದರು. ಗುಡ್ಡಗಾಡು ಪ್ರದೇಶಗಳಿಂದ ಕೂಡಿದ ಯಲ್ಲಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 200 ಕಿಮೀ ರಸ್ತೆ ಅಭಿವೃದ್ಧಿ ಕಲ್ಪಿಸಿಕೊಡಬೇಕು. ಪಟ್ಟಣದಲ್ಲಿ ಬೈಪಾಸ್‌ ನಿರ್ಮಿಸಿಕೊಡಬೇಕು.

ಕ್ಷೇತ್ರದ ತಾ.ಪಂ, ಜಿ.ಪಂ ಹಾಗೂ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ 3000 ಕಿ.ಮೀ ರಸ್ತೆ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸಬೇಕು. ಸಿದ್ದಿ, ಗೌಳಿ, ಕುಣಬಿ, ಲಂಬಾಣಿ ಸಮುದಾಯಗಳು ವಾಸಿಸುವ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ನೀಡಬೇಕೆಂದು ಅಭ್ಯರ್ಥಿ ವಿ.ಎಸ್‌. ಪಾಟೀಲ ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗಡ್ಕರಿ, ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಿದರೆ ಎಲ್ಲ ಬೇಡಿಕೆಗಳನ್ನೂ ಈಡೇರಿಸುವುದಾಗಿ ಭರವಸೆ ನೀಡಿದರು.

ಗುಜರಾತ್‌ ಸಂಸದ ದೇವಸಿಂಹ ಚೌಹಾಣ, ಆಸ್ಸಾಂ ಸಂಸದ ವಿಜಯಕುಮಾರ ಗುಪ್ತಾ, ಜಿಲ್ಲಾ ವಕ್ತಾರ ಪ್ರಮೋದ ಹೆಗಡೆ, ಪ್ರಮುಖರಾದ ಎಲ್‌.ಟಿ. ಪಾಟೀಲ, ಸದಾನಂದ ಭಟ್ಟ ನಡಗೋಡ, ರಾಘವೇಂದ್ರ ಭಟ್ಟ, ಗಣಪತಿ ಮುದ್ದೆಪಾಲ, ಗಣಪತಿ ಮಾನಿಗದ್ದೆ, ಅಶೋಕ ಚಲವಾದಿ, ಗಣಪತಿ ಬೋಳಗುಡ್ಡೆ, ಶ್ರುತಿ ಹೆಗಡೆ, ಗುಡ್ಡಪ್ಪ ಕಾತೂರ, ರೇಖಾ ಹೆಗಡೆ, ಚಂದ್ರಕಲಾ ಭಟ್ಟ, ಬಾಬಾಸಾಬ್‌ ಅಲನ್‌, ಎಲ್‌.ಆರ್‌. ಭಟ್ಟ ತೋಟ¾ನೆ, ಎನ್‌.ಕೆ. ಭಟ್ಟ ಅಗ್ಗಾಶಿಕುಂಬ್ರಿ, ಸುಮನ್‌ ಕುಲಕರ್ಣಿ ಉಪಸ್ಥಿತರಿದ್ದರು.

ತಾಲೂಕಾಧ್ಯಕ್ಷ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ಸ್ವಾಗತಿಸಿದರು. ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಉಮೇಶ ಭಾಗÌತ ನಿರ್ವಹಿಸಿದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.