ಉತ್ತರ ಕನ್ನಡದಲ್ಲಿ 10 ಬಾರಿ ಕಾಂಗ್ರೆಸ್, 6 ಬಾರಿ ಕಮಲಕ್ಕೆ ಮಣೆ
ಕಿತ್ತೂರು, ಖಾನಾಪುರ ಕ್ಷೇತ್ರಗಳು ಕೆನರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿವೆ - 1967ರಲ್ಲಿ ಒಮ್ಮೆ ಸ್ವತಂತ್ರ ಅಭ್ಯರ್ಥಿ ಗೆಲುವು
Team Udayavani, Mar 26, 2024, 7:30 AM IST
ಕಾರವಾರ: ಅರಬ್ಬಿ ಸಮುದ್ರ, ಪಡುವಣ ಘಟ್ಟ ಸಾಲು, ಮಲೆನಾಡು, ಅರೆ ಮಲೆನಾಡು, ಬಯಲು ಸೀಮೆ ನಡುವಿನ ಲೋಕಸಭಾ ಕ್ಷೇತ್ರ ಉತ್ತರ ಕನ್ನಡ. ಬ್ರಿಟಿಷರ ಕಾಲಕ್ಕೆ ಅವಿಭಜಿತ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳು ಕೆನರಾ ಡಿಸ್ಟ್ರಿಕ್ಟ್ ಎಂದು ಕರೆಯಲ್ಪಡುತ್ತಿದ್ದವು. ಸ್ವಾತಂತ್ರÂದ ಬಳಿಕವೂ ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರ ಕೆನರಾ ಲೋಕಸಭಾ ಕ್ಷೇತ್ರ ಎಂದೇ ಕರೆಯಲಾಗುತ್ತಿದೆ. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜತೆ ಬೆಳಗಾವಿ ಜಿಲ್ಲೆಯ ಕಿತ್ತೂರು, ಖಾನಾಪುರ ವಿಧಾನಸಭಾ ಕ್ಷೇತ್ರಗಳು ಕೆನರಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿವೆ. ಈ ಸಲ ಮತದಾರರ ಸಂಖ್ಯೆ 50 ಸಾವಿರದಷ್ಟು ಹೆಚ್ಚಾಗಿದೆ. ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 16,22,857.
ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾ ಧಿಸಿದೆ. ಖಾನಾಪುರ, ಯಲ್ಲಾಪುರ, ಕುಮಟಾದಲ್ಲಿ ಬಿಜೆಪಿ ಗೆದ್ದಿದ್ದು, ಕಾರವಾರ, ಹಳಿಯಾಳ, ಶಿರಸಿ, ಭಟ್ಕಳ, ಕಿತ್ತೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಭಾರೀ ಪೈಪೋಟಿ ಇದೆ.
ಕ್ಷೇತ್ರದ ಇತಿಹಾಸ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ 1951ರ ಮೊದಲ ಲೋಕಸಭಾ ಚುನಾವಣೆಯಿಂದ ಸತತ ಮೂರು ಸಲ ಜೋಕಿಂದಾದ ಆಳ್ವ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. 1967ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ ದೇಸಾಯಿ ಗೆದ್ದಿದ್ದರು. 1971ರಿಂದ 1991ರ ತನಕ ಸತತ 6 ಸಲ ಕಾಂಗ್ರೆಸ್ ಗೆದ್ದಿದ್ದು, ಈ ಪೈಕಿ ದೇವರಾಯ ಜಿ.ನಾಯ್ಕ ಸತತ ನಾಲ್ಕು ಸಲ ಸಂಸದರಾಗಿದ್ದಾರೆ. 1996ರಲ್ಲಿ ಬಿಜೆಪಿ ಮೊದಲ ಬಾರಿ ಅನಂತ ಕುಮಾರ್ ಹೆಗಡೆ ಮೂಲಕ ಗೆದ್ದಿದೆ. 1998ರಲ್ಲಿ ಮತ್ತೆ ಕಮಲ ಅರಳಿತು. 1999ರಲ್ಲಿ ಜೊಕಿಂ ಆಳ್ವರ ಸೊಸೆ ಮಾರ್ಗರೆಟ್ ಆಳ್ವ ಮತ್ತೆ ಕಾಂಗ್ರೆಸ್‌ನಿಂದ ಗೆದ್ದರು. ಆದರೆ 5 ವರ್ಷಗಳ ಬಳಿಕ ನಡೆದ ಎರಡು ಚುನಾವಣೆಗಳಲ್ಲಿ ಮಾರ್ಗರೆಟ್ ಅವರು ಬಿಜೆಪಿ ಎದುರು ಸೋತಿದ್ದರು. 2014, 2019ರಲ್ಲೂ ಬಿಜೆಪಿ ಗೆಲ್ಲುವ ಮೂಲಕ ಒಟ್ಟು 6 ಸಲ ಗೆಲವು ಸಾಧಿ ಸಿದೆ. ಹತ್ತು ಸಲ ಗೆದ್ದಿದ್ದ ಕಾಂಗ್ರೆಸ್ ಈಗ ಮತ್ತೆ ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಲು ಭಾರೀ ಪ್ರಯತ್ನ ಪಡುತ್ತಿದೆ.
ಕ್ಷೇತ್ರದಲ್ಲಿ ನಿರ್ಣಾಯಕರು
ಈ ಕ್ಷೇತ್ರದಲ್ಲಿ ಮರಾಠರು, ನಾಮಧಾರಿಗಳು, ಮೀನುಗಾರರು, ದಲಿತರು, ಅಲ್ಪಸಂಖ್ಯಾಕರ ಮತಗಳು ನಿರ್ಣಾಯಕ. ಲೋಕಸಭಾ ಚುನಾವಣೆಯಲ್ಲಿ ಶಿರಸಿಯವರೇ ಹತ್ತು ಸಲ ಲೋಕಸಭಾ ಸದಸ್ಯರಾಗಿದ್ದಾರೆ. ನಾಮಧಾರಿಗಳು ನಾಲ್ಕು ಸಲ, ಮರಾಠರು ಒಂದು ಸಲ, ಕರಾವಳಿ ತಾಲೂಕಿನಿಂದ ಕೊಂಕಣಿ, ನಾಡವರು ತಲಾ ಒಂದೊಂದು ಸಲ, ಹವ್ಯಕ ಸಮುದಾಯದ ಅನಂತ್ ಕುಮಾರ್ ಹೆಗಡೆ ಆರು ಸಲ ಕೆನರಾ ಲೋಕಸಭೆಯನ್ನು ಪ್ರತಿನಿಧಿಸಿದ್ದಾರೆ. ಕ್ರಿಶ್ಚಿಯನ್ನರು ನಾಲ್ಕು ಸಲ (ಜೋಕಿಂ ಆಳ್ವ ಮೂರು ಸಲ, ಮಾರ್ಗರೆಟ್ ಆಳ್ವ ಒಮ್ಮೆ) ಗೆದ್ದಿದ್ದಾರೆ. ಈ ಬಾರಿ ಅನಂತಕುಮಾರ್ ಬದಲು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ನಿಂದ ಅಂಜಲಿ ನಿಂಬಾಳ್ಕರ್ ಕಣಕ್ಕಿಳಿದಿದ್ದಾರೆ.
ರಲ್ಲಿ ಮತದಾರರ ವಿವರ 2024 2019
ಪುರುಷರು 8,15,599 7,85,884
ಮಹಿಳೆಯರು 8,07,258 7,65,868
ಒಟ್ಟು 16,22,857 15,51,752
ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ
ಪಡೆದ ಮತಗಳು – 7,86,042
ಗೆಲುವಿನ ಅಂತರ: 4, 79,649
-ನಾಗರಾಜ್ ಹರಪನಹಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.