ಕೃಷಿಯನ್ನೂ ಉದ್ದಿಮೆಯೆಂದು ಪರಿಗಣಿಸಿ
Team Udayavani, Sep 11, 2019, 11:14 AM IST
ಶಿರಸಿ: ಶಶಿಕಲಾ ಮತ್ತು ಶಾಂತಾರಾಮ ಹೆಗಡೆ ತಟ್ಟೀಕೈ ಅವರನ್ನು ಶ್ರೀಗಳ ಸಮ್ಮಾನಿಸಿದರು.
ಶಿರಸಿ: ಸ್ವ ಸಹಾಯ ಸಂಘಗಳು ಉತ್ಪಾದಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಆ ಮೂಲಕ ಸಂಘಗಳನ್ನು ಕ್ರಿಯಾಶೀಲಗೊಳಿಸಬೇಕು. ಪ್ರಯತ್ನಶೀಲನಿಗೆ ಸಂಪತ್ತು ಒಲಿಯುತ್ತವೆ ಎಂದು ಸೊಂದಾ ಸ್ವರ್ಣವಲ್ಲೀ ಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ನುಡಿದರು.
ಮಂಗಳವಾರ ಅವರು ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ನಡೆದ ಗ್ರಾಮಾಭ್ಯುದಯದ ಸಂಘಗಳ ಸ್ವಾವಲಂಬಿ ಸಮಾವೇಶದಲ್ಲಿ ಸಾನ್ನಿಧ್ಯ ನೀಡಿ ಅವರು ಆಶೀರ್ವಚನ ನೀಡಿದರು.
ಸ್ವಸಹಾಯ ಸಂಘಗಳ ಮೂಲಕ ಕುಟುಂಬದ ಅಭಿವೃದ್ದಿ ಆಗಬೇಕು. ಕೃಷಿ ಕೆಲಸ ಮಾಡಿಕೊಳ್ಳಬೇಕು. ಕೃಷಿ, ತೋಟಗಾರಿಕೆ ಒಂದು ಉದ್ದಿಮೆ. ಕೃಷಿಯನ್ನೂ ಉದ್ದಿಮೆ ಎಂದು ಸರಕಾರ ಪರಿಗಣಿಸಬೇಕು ಎಂದರು.
ಕೃಷಿಗೆ ಬ್ಯಾಂಕ್ ಕೂಡ ಸಾಲದ ವ್ಯವಸ್ಥೆ ಮಾಡಬೇಕು. ಉದ್ದಿಮೆಗಳಿಗಿಂತ ಕೃಷಿ ಹೊರತಾಗಿಲ್ಲ, ಭಿನ್ನವಾಗಿಲ್ಲ ಎಂದರು.
ಸಂಘಗಳು ಕೃಷಿ, ತೋಟಗಾರಿಕಾ, ಅರಣ್ಯ ಅವಲಂಬಿತ ಕೆಲಸ ಮಾಡಬೇಕಿದೆ ಎಂದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ. ಹೆಗಡೆ, ಪ್ರತಿಯೊಂದು ಸ್ವ ಸಹಾಯ ಸಂಘಗಳೂ ಒಂದೊಂದು ಕ್ಷೇತ್ರದ ಅವಕಾಶ ಸೃಷ್ಟಿಸಿಕೊಳ್ಳಬೇಕು. ಆರ್ಥಿಕ ಬಲವರ್ಧನೆ ಮಾಡಿಕೊಳ್ಳಬೇಕಾಗಿದೆ ಎಂದರು.
ತೋಟಗಾರಿಕಾ ಅಧಿಕಾರಿ ಸತೀಶ ಹೆಗಡೆ, ಸ್ವಸಹಾಯ ಸಂಘಗಳು ಜೇನು ಕೃಷಿ ಮಾಡಬಹುದು. ಸ್ವಾವಲಂಬಿಯಾಗಿ ಸಂಘಗಳು ಜೇನು ವ್ಯವಸಾಯದಿಂದ ಬದುಕು ನಡೆಸಬಹುದು. ಜೇನು ವ್ಯವಸಹಾಯಕ್ಕೆ ನೆರವಿದೆ ಎಂದರು.
ಅಧ್ಯಕ್ಷತೆಯನ್ನು ಗ್ರಾಮಾಭ್ಯುದಯದ ಅಧ್ಯಕ್ಷ ಶಿವಾನಂದ ದೀಕ್ಷಿತ ವಹಿಸಿದ್ದರು.
ಮಠದ ಅಧ್ಯಕ್ಷ ವಿ.ಎನ್. ಹೆಗಡೆ ಬೊಮ್ಮನಳ್ಳಿ, ಕ್ಯಾಂಮ್ಕೋ ನಿರ್ದೇಶಕ ಶಂಭುಲಿಂಗ ಹೆಗಡೆ ನಿಡಗೋಡ, ಕೆಡಿಸಿಸಿ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಎಲ್.ಎಂ. ಹೆಗಡೆ, ವಿಜ್ಞಾನಿ ಡಾ| ಶಿವಶಂಕರಮೂರ್ತಿ ಇದ್ದರು.
ಎಂ.ಕೆ. ಹೆಗಡೆ ಗೋಳಿಕೊಪ್ಪ ಫಲ ಸಮರ್ಪಿಸಿದರು. ಗಣಪತಿ ಭಟ್ಟ ಹರಿಮನೆ ಸ್ವಾಗತಿಸಿದರು. ವಿ. ಶಂಕರ ಭಟ್ಟ ಸಮ್ಮಾನ ಪತ್ರ ವಾಚಿಸಿದರು. ಸಂತೋಷ ಭಟ್ಟ ಕೋಡಿಗಾರ ವಂದಿಸಿದರು. ರಮೇಶ ಹೆಗಡೆ ದೊಡ್ನಳ್ಳಿ ನಿರ್ವಹಿಸಿದರು. ಇದೇ ವೇಳೆ ಶಶಿಕಲಾ ಮತ್ತು ಶಾಂತಾರಾಮ ಹೆಗಡೆ ತಟ್ಟೀಕೈ ಅವರನ್ನು ಶ್ರೀಗಳ ಸಮ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.