ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ


Team Udayavani, Oct 17, 2021, 6:10 PM IST

ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ

ದಾಂಡೇಲಿ: ಸಂವಿಧಾನ ಎಂಬುವುದು ಜೀವನದ ಪ್ರಮುಖ ಘಟ್ಟ. ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳುವುದು ಹಾಗೂ ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕಾಗಿರುವುದು ಈ ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಈ ದೇಶದ ಮಹಾನ್ ಗ್ರಂಥವಾದ ಸಂವಿಧಾನವನ್ನು ಎಲ್ಲರು ಓದುವುದರ ಜೊತೆಗೆ ಅದರ ಮೌಲ್ಯಗಳ ಅನುಷ್ಟಾನದ ದಿಸೆಯಿಂದ ಸಂವಿಧಾನ ಓದು ಅಭಿಯಾನ ಕಾರ್ಯಕ್ರಮ ಪರಿಣಾಮಕಾರಿಯಾಗಿದೆ ಎಂದು ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನ್ ದಾಸ್ ಅವರು ಹೇಳಿದರು.

ಅವರು ಭಾನುವಾರ ನಗರದ ಮಾರುತಿ ನಗರದಲ್ಲಿ ಸಂವಿಧಾನ ಪೀಠಿಕೆಯ ಫಲಕ ಅನಾವರಣದೊಂದಿಗೆ ಡಿ.ಸ್ಯಾಮಸನ್ ಕುಟುಂಬದ ಸಾಮರಸ್ಯ ಹೊಸ ಮನೆಗೆ ಹೊಸ ಹೆಜ್ಜೆ ಗೃಹಪ್ರವೇಶೋತ್ಸವ ನಿಮಿತ್ತ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಆಯೋಜಿಸಿದ ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಎಂಬ ವಿನೂತನವಾದ ಅರ್ಥಪೂರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ದೇಶದ ಆಡಳಿತ ವ್ಯವಸ್ಥೆ ಸಂವಿಧಾನ ಮೇಲೆ ಅವಲಂಭಿತವಾಗಿದೆ. ನಮ್ಮ ಸಂವಿಧಾನ ಭಾತೃತ್ವ, ಸಹೋದರತೆ, ಸಮಾನತೆಯ ನೆಲೆಯಿಂದ ಕೂಡಿದ್ದು, ಎಲ್ಲರಿಗೂ ಬದುಕಲು ಅವಕಾಶ ಕೊಟ್ಟಿದೆ. ಇಂತಹ ಸಂವಿಧಾನ ಓದು ಅಭಿಯಾನದ ಮೂಲಕ ರಾಜ್ಯದಲ್ಲೆ ಮೊದಲ ಬಾರಿಗೆ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಲಾಗಿರುವುದು ಸಂತಸ ತಂದಿದೆ ಎಂದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಬೆಳಗಾವಿಯ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧೀಕರಣದ ನ್ಯಾಯಾಧೀಶರಾದ ಟಿ.ನಾರಾಯಣ ಸ್ವಾಮಿಯವರು ಮಾತನಾಡಿ ಸಂವಿಧಾನ ಪೀಠಿಕೆಯ ಫಲಕವನ್ನು ಅನಾವರಣಗೊಳಸುವ ಮೂಲಕ ಗೃಹಪ್ರವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸ್ಮರಣೀಯವಾಗಿದೆ. ಸಂವಿಧಾನ ಮೌಲ್ಯಗಳನ್ನು ಜೀವನದಲ್ಲಿ ಆಳವಡಿಸಿ ಸರ್ವ ಸಮಾನತೆಯ, ಪರಸ್ಪರ ಸೌಹಾರ್ಧತೆಯ ಬದುಕು ಕಟ್ಟಿಕೊಳ್ಳಲು ಇಂಥಹ ಕಾರ್ಯಕ್ರಮಗಳು ಸ್ಪೂರ್ತಿದಾಯಕ ಎಂದರು.

ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾದ ಕೆ.ಕೋಟೇಶ್ವರರಾವ್ ಅವರು ಸಂವಿಧಾನ ಫೀಠಿಕೆಯನ್ನು ಫಲಕವನ್ನಾಗಿಸಿ, ಸ್ಮರಣಿಕೆಯನ್ನಾಗಿ ಕೊಡುವಂತಹ ಕಾರ್ಯವನ್ನು ಈ ಮೂಲಕವಾಗಿ ಮುಂದುವರಿಸಿಕೊಂಡು ಹೋಗಬೇಕು. ಮನೆ ಮನೆಗೂ ಸಂವಿಧಾನ ಕಾರ್ಯಕ್ರಮದ ಮೂಲಕ ನಮ್ಮ ದೇಶದ ಸಂವಿಧಾನ ಪ್ರತಿಯೊಂದು ಮನೆ ಹಾಗೂ ಮನಸ್ಸುಗಳನ್ನು ತಲುಪುವಂತಾಗಲೆಂದು ಕರೆ ನೀಡಿದರು.

ಸಹಯಾನ,ಕೆರೆಕೋಣದ ಯಮುನಾ ಗಾಂವಕರ ಅವರು ವಿಠ್ಠಲ ಭಂಡಾರಿಯವರ ಆಶಯವನ್ನು ಮುಂದಿಟ್ಟುಕೊಂಡು, ಅವರ ಕಾರ್ಯವನ್ನು ಮುಂದುವರಿಸುವ ಮಹತ್ವದ ಸಂಕಲ್ಪತೊಟ್ಟು ನನ್ನನ್ನು ನಾನು ಅರ್ಪಿಸಿಕೊಂಡಿದ್ದೇವೆ. ವಿಠ್ಠಲ ಭಂಡಾರಿಯವರ ಚಳುವಳಿಗಳು, ಹೋರಾಟ ಹಾಗೂ ಬದುಕು ಬರಹಗಳನ್ನು ಸ್ಮರಿಸಿಕೊಂಡರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಲೇಖಕರು ಮತ್ತು ಮಿಮರ್ಶಕರಾದ ಡಾ.ಎಂ.ಜಿ.ಹೆಗಡೆಯವರು ದೇಶದಲ್ಲಿ ಹಲವಾರು ಜಾತಿ, ಧರ್ಮ, ಮತ, ಪಂಗಡಗಳಿದ್ದರೂ ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಸ್ವತಂತ್ರವಾಗಿ ಸಂತಸದಿಂದ ಬದುಕಲು ಸಂವಿಧಾನವೆ ಮೂಲ ಕಾರಣವಾಗಿದೆ ಎಂದರು.

ವೇದಿಕೆಯಲ್ಲಿ ತಹಶೀಲ್ದಾರ್ ಶೈಲೇಶ ಪರಮಾನಂದ, ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್, ವಕೀಲರ ಸಂಘದ ಕಾರ್ಯದರ್ಶಿ ವಿಶ್ವನಾಥ ಲಕ್ಷ್ಯಟ್ಟಿ ಉಪಸ್ಥಿತರಿದ್ದರು.

ಅಗಲಿದ ದಿ. ವಿಠ್ಠಲ ಭಂಡಾರಿಯವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯ್ತು. ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರನ್ನು ನಾಗಪ್ಪ ಮೊಕಾಶಿ ಮತ್ತು ಡಿ.ಸ್ಯಾಮಸನ್ ಪರಿವಾರದವರು ಸ್ಮರಣಿಕೆ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ವಿಶ್ರಾಂತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನದಾಸ್, ಡಿ.ಸ್ಯಾಮಸನ್ ದಂಪತಿಗಳನ್ನು ಮತ್ತು ಪತ್ರಕರ್ತ ಬಿ.ಎನ್.ವಾಸರೆಯವರನ್ನು ವಿಜಯ ಸಂದೇಶ ಪತ್ರಿಕೆಯ ಸಂಪಾದಕರಾದ ಸುಮಂಗಲಾ ಅಂಗಡಿ ಹಾಗೂ ಚಂದ್ರಕಾಂತ ಅಂಗಡಿ ದಂಪತಿಗಳು ಸನ್ಮಾನಿಸಿದರು.

ಮಾನಸಾ.ಬಿ.ವಾಸರೆ ಪ್ರಾರ್ಥನೆ ಗೀತೆ ಹಾಡಿದರು. ರತ್ನದೀಪಾ.ಎಂ ಅವರು ಸಂವಿಧಾನ ಪೀಠಿಕೆಯನ್ನು ಓದಿದರು. ಪತ್ರಕರ್ತ ಬಿ.ಎನ್.ವಾಸರೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿ.ಸ್ಯಾಸಮನ್ ವಂದಿಸಿದರು. ಸಂವಿಧಾನ ಓದು ಅಭಿಯಾನದ ಸದಸ್ಯರಾದ ಕೆ.ಎಚ್.ಪಾಟೀಲ ಅವರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.