ಮಂಗನ ಕಾಯಿಲೆ ನಿಯಂತ್ರಣಕ್ಕೆ ಸಹಕರಿಸಿ


Team Udayavani, Jan 21, 2020, 4:52 PM IST

uk-tdy-1

ಹೊನ್ನಾವರ: ಮಂಗನ ಕಾಯಿಲೆ ಮತ್ತೆ ಆರಂಭವಾಗುವ ಲಕ್ಷಣ ಕಾಣಿಸಿಕೊಂಡಿದ್ದು 2020ರ ಜನೆವರಿಯಲ್ಲಿ ಸಿದ್ಧಾಪುರ ಹೊನ್ನೇಪಟಕಿ ಬಳಿ 6 ಮಂಗಗಳು ಮೃತಪಟ್ಟಿದ್ದು ಒಂದಕ್ಕೆ ಕೆಎಫ್‌ಡಿ ತಗುಲಿದ್ದು ಕಂಡುಬಂದಿದೆ. ಜನಕ್ಕೆ ಈವರೆಗೆ ಬಾಧಿಸಿಲ್ಲ, ನಿರ್ಲಕ್ಷಿಸಿದರೆ ಪ್ರಾಣಕ್ಕೆ ಅಪಾಯ ತರುವ ಮಂಗನ ಕಾಯಿಲೆ ನಿಯಂತ್ರಿಸಲು ಜಿಲ್ಲಾ ಕೆಎಫ್‌ಡಿ ಘಟಕ ಸ್ಥಾನಿಕ ವೈದ್ಯಾಧಿಕಾರಿ ಡಾ| ಸತೀಶ ಶೇಟ್‌ ಹೇಳಿದ್ದಾರೆ.

ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಘಟಕದ ಸಹಕಾರದಲ್ಲಿ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಈವರೆಗೆ 1ಲಕ್ಷ ಡೋಸ್‌ ಸಿದ್ಧ ಮಾಡಿಕೊಂಡು ಇಷ್ಟರಲ್ಲಿ ಕೊಟ್ಟು ಮುಗಿಯಬೇಕಿತ್ತು. ಜನ ಆಸಕ್ತಿ ವಹಿಸದೆ, ಸಹಕಾರ ನೀಡದೇ ಇರುವುದರಿಂದ ಕೇವಲ 15,288 ಡೋಸ್‌ ಮಾತ್ರ ಕೊಡುವುದು ಸಾಧ್ಯವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಸರ್ವೇಕ್ಷಣ ವೈದ್ಯಾಧಿಕಾರಿ ಡಾ| ಸತೀಶಚಂದ್ರ ಅವರು ಹೇಳಿದಂತೆ ಉಣ್ಣೆಗಳ ನಿಯಂತ್ರಣ ಮತ್ತು ಪೂರ್ಣ ಪ್ರಮಾಣದ ಲಸಿಕೆ ಪಡೆಯುವುದರಿಂದ ಮಂಗನ ಕಾಯಿಲೆ ನಿಯಂತ್ರಿಸುವುದು ಸಾಧ್ಯವಿದೆ. ಜಿಲ್ಲೆಯ ಹೊನ್ನಾವರ, ಕುಮಟಾ, ಶಿರಸಿ, ಸಿದ್ಧಾಪುರ, ಭಟ್ಕಳ, ಜೋಯಿಡಾ, ಯಲ್ಲಾಪುರ ತಾಲೂಕುಗಳ 20 ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆಗಳನ್ನು ಇಡಲಾಗಿದ್ದು ರಜಾದಿನದ ಹೊರತು ಯಾವತ್ತು ಬೇಕಾದರೂ ಲಸಿಕೆ ಪಡೆಯಬಹುದು.

ಹೆಚ್ಚಿನ ಜನ ಬಂದರೆ ಯಾವುದೇ ಸ್ಥಳದಲ್ಲಿ ಲಸಿಕಾ ಶಿಬಿರ ನಡೆಸಲು ನಾವು ಸಿದ್ಧರಿದ್ದೇವೆ. ಈಗಾಗಲೇ ಹಳ್ಳಿಹಳ್ಳಿಗಳಲ್ಲಿ ಕಾಡಿಗೆ ಹೋಗುವವರಿಗೆ ಡಿಎಂಪಿ ತೈಲ ವಿತರಿಸಲಾಗಿದೆ. ಮಂಗಗಳು ಸತ್ತಲ್ಲಿ, ಉಣ್ಣಿಗಳು ಕಂಡಲ್ಲಿ ಸುಡುವ ವ್ಯವಸ್ಥೆ ಮಾಡಲಾಗಿದೆ. ಶಾಲೆ, ಕಾಲೇಜು ಸಹಿತ ಎಲ್ಲೆಡೆ ಲಸಿಕೆಯ ಮಾಹಿತಿ ನೀಡಿದ್ದು, ಧ್ವನಿವರ್ಧಕ, ಮಾಧ್ಯಮದಲ್ಲೂ ಪ್ರಚಾರ ಕೊಡಲಾಗಿದೆ. ಈ ವರ್ಷ 17 ರಕ್ತದ ಸ್ಯಾಂಪಲ್‌ ಗಳನ್ನು ಸಂಗ್ರಹಿಸಿದ್ದು 3 ಸತ್ತ ಮಂಗಗಳ ಉಣ್ಣಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. 2019 ಜನೆವರಿವರೆಗೆ ಜಿಲ್ಲೆಯಲ್ಲಿ 413 ಮಂಗಗಳು ಸತ್ತಿದ್ದವು. 62 ಮಂಗಗಳು ಶವಪರೀಕ್ಷೆ ಮಾಡಲಾಗಿತ್ತು. 820 ಜ್ವರ ಪೀಡಿತರ ರಕ್ತ ಸಂಗ್ರಹಿಸಲಾಗಿತ್ತು. 86 ಜನರ ರಕ್ತದಲ್ಲಿ ಕೆಎಫ್‌ಡಿ ವೈರಾಣು ಇರುವುದು ಪತ್ತೆಯಾಗಿತ್ತು.

ಇದರಲ್ಲಿ ಸಿದ್ಧಾಪುರದ ಮೂವರು ಮೃತಪಟ್ಟಿದ್ದಾರೆ. ಕಳೆದವರ್ಷದ ಲೆಕ್ಕಾಚಾರದಲ್ಲಿ ಈ ವರ್ಷವೂ ಮಂಗನ ಕಾಯಿಲೆ ಎದುರಿಸಲು ಎಲ್ಲ ಸಿದ್ಧತೆ ಮಾಡಿದೆ. ಜನ ಕೈಜೋಡಿಸಿದರೆ ಮಾತ್ರ ನಿಯಂತ್ರಣ ಸಾಧ್ಯ. ಏಳು ತಾಲೂಕುಗಳಲ್ಲಿ ಓಡಾಡಲು ಹೆಚ್ಚು ಸಿಬ್ಬಂದಿ ಬೇಕಿತ್ತು, ಯಾರು ಹೇಳುವುದು, ಎಲ್ಲವನ್ನೂ ಸುಧಾರಿಸಿಕೊಂಡು ಘಟಕ ತನ್ನ ಕೆಲಸ ಮಾಡುತ್ತಿದ್ದರೂ ಜನ ಲಸಿಕೆ ಪಡೆಯಲು ಮುಂದೆ ಬರದೇ ಇರುವುದು ಪರಿಣಾಮಕಾರಿ ನಿಯಂತ್ರಣಕ್ಕೆ ತೊಡಕಾಗಿದೆ ಎಂದು ಅವರು ಹೇಳಿದ್ದಾರೆ. ಎಚ್ಚರಿಕೆ ಘಂಟೆ ಬಾರಿಸಿದೆ, ಜನ ಎಚ್ಚರಾಗಬೇಕಿದೆ.

 

-ಜೀಯು, ಹೊನ್ನಾವರ

ಟಾಪ್ ನ್ಯೂಸ್

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.