ಆತಂಕ ಪಡುವ ಬದಲು ಜಾಗೃತರಾಗಿರಿ
Team Udayavani, Mar 14, 2020, 3:26 PM IST
ಕಾರವಾರ: ಕೊರೊನಾ ವೈರಸ್ ಹರಡುತ್ತಿರುವುದರಿಂದ ಆತಂಕ ಪಡುವ ಅವಶ್ಯಕತೆ ಇಲ್ಲ, ಬದಲಾಗಿ ಮುಂಜಾಗೃತಾ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಶ್ ಮೌದ್ಗಿಲ್ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಕರೆ ನೀಡಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವೀಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಕರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಂಕಿ-ಅಂಶಗಳನ್ನು ಬಿತ್ತರಿಸುತ್ತಿರುವುದು ಜನರನ್ನು ಹೆದರಿಸುವ ಕಾರಣಕ್ಕಲ್ಲ ಎಂದರು. ಸಾರ್ವಜನಿಕರು ಎಚ್ಚೆತ್ತು ಮುನ್ನೆಚ್ಚರಿಕಾ ಕ್ರಮ ಕೈಗೊಂಡು ವೈರಸ್ ಹರಡದಂತೇ ತಡೆಯುವುದಕ್ಕಾಗಿ ಎಂದರು. ಹೆಚ್ಚಿನ ಜನಸಂದಣಿ ಸೇರುವ ಸಭೆ-ಸಮಾರಂಭಗಳಲ್ಲಿ ಅನಾವಶ್ಯಕವಾಗಿ ಭಾಗವಹಿಸದೇ, ಕೆಲ ದಿನ ಆದಷ್ಟು ಜಾಗೃತರಾಗಿರುವುದು ಉತ್ತಮ ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಡಾ| ಹರೀಶಕುಮಾರ್ ಕೆ. ಮಾತನಾಡಿ, ಮುಂಜಾಗೃತಾ ಕ್ರಮವಾಗಿ ಸರಕಾರಿ ಕಾರ್ಯಕ್ರಮ ಮುಂದೂಡಲಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಶೀಘ್ರದಲ್ಲಿಯೇ ಪರೀಕ್ಷೆಗಳು ಮುಕ್ತಾಯಗೊಳ್ಳಲಿವೆ ಎಂದರು. ಪ್ರತಿಯೊಬ್ಬರು ಆರೋಗ್ಯದ ಹಿತದೃಷ್ಟಿಯಿಂದ 14 ದಿನ ವೈಯಕ್ತಿಕ ಕಡಿವಾಣ ಹಾಕಿಕೊಳ್ಳುವ ಅಗತ್ಯವಿದೆ ಎಂದರು.
ಕುಡಿಯುವ ನೀರು, ಶಿಕ್ಷಣ, ನೆರೆ ಹಾನಿ ಮತ್ತು ಬರ ಪರಿಹಾರ, ಸಪ್ತಪದಿ ಸಾಮೂಹಿಕ ವಿವಾಹ, ಮರಳುಗಾರಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್ ಕೆ. ಹಾಗೂ ಜಿಪಂ ಸಿಇಒ ಎಂ. ರೋಷನ್ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಶ್ ಮೌದ್ಗಿಲ್ ಅವರಿಗೆ ಮಾಹಿತಿ ಸಲ್ಲಿಸಿದರು.
ಡಿಎಚ್‌ಒ ಡಾ| ಜಿ.ಎನ್ ಅಶೋಕಕುಮಾರ್, ಕಾರವಾರ ಉಪವಿಭಾಗಾಧಿಕಾರಿ ಪ್ರಿಯಾಂಕ ಎಂ., ಡಾ| ವಿನೋದ್ ಭೂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.