ದಿಗ್ಬಂಧನ ಹಾಕಿಕೊಂಡ ನಂದೊಳ್ಳಿ ಜನ
Team Udayavani, May 15, 2021, 9:31 PM IST
ಯಲ್ಲಾಪುರ: ತಾಲೂಕಿನ ಮಾವಿನಮನೆಯಲ್ಲಿ ವಿಪರೀತ ಸೊಂಕಿತರ ಸಂಖ್ಯೆಯಾದ ಬಳಿಕೆ ಇಡೀ ಊರಿನವರೇ ತಮಗೆ ತಾವೇ ದಿಗ್ಬಂಧನ ಹಾಕಿಕೊಂಡಿದ್ದರು. ಊರಿಗೆ ಬರದಂತೆ ಹೊರಗೆ ಹೋಗದಂತೆ ಮಾಡಲಾಗಿತ್ತು. ಈಗ ಸ್ವಲ್ಪ ನಿಯಂತ್ರಣದಲ್ಲಿದೆ. ಆದರೆ ನಂದೊಳ್ಳಿ ಪಂಚಾಯತ ವ್ಯಾಪ್ತಿಯಲ್ಲಿ ಇದೇ ತೆರನಾದ ಪರಿಸ್ಥಿತಿ ಬಂದೊದಗಿದೆ.
ಗುರುವಾರ 39 ಇದ್ದ ಪಾಸಿಟಿವ್ ಸಂಖ್ಯೆ ಶುಕ್ರವಾರ 52 ಕ್ಕೆ ಏರಿದೆ. ಇಡೀ ಊರಿಗೆ ಊರೇ ಆತಂಕದಲ್ಲಿದೆ. ಇಲ್ಲಿಯೂ ಊರೊಳಗೆ ಯಾರೂ ಬರದಂತೆ ಹೋಗದಂತೆ ಮತ್ತು ತಮ್ಮ ಮನೆಗಳಿಗೂ ಯಾರೂ ಬರದಂತೆ ದಿಗ್ಬಂಧನ ಹಾಕಿದ್ದಾರೆ.
ಈ ಕಾರ್ಯ ಮಾಡಿ ಮೂರ್ನಾಲ್ಕು ದಿನಗಳಾದರೂ ಸೋಂಕಿತರ ಸಂಖ್ಯೆ ಏರುತ್ತಿದೆ. ಗುಣಮುಖರಾದವರ ಸಂಖ್ಯೆ ಕಡಿಮೆಯಿದೆ. ಸ್ಥಳೀಯ ಪಂಚಾಯತ ಕೋವಿಡ್ ಬಗ್ಗೆ ತೆಗೆದುಕೊಳ್ಳುವ ಸುರಕ್ಷತಾ ಕ್ರಮ ತೆಗೆದುಕೊಂಡಿದೆ. ತಹಶೀಲ್ದಾರ್ ಸೇರಿದಂತೆ ಸಂಬಂಧಿಸಿದವರು ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಮಾಹಿತಿ ನೀಡುತ್ತಿದ್ದಾರೆ. ಕೆಲವರು ತಂಡ ರಚಿಸಿಕೊಂಡು ಅಗತ್ಯ ವಸ್ತುಗಳನ್ನು ಮನೆ ಮನೆಗೆ ಕಳಿಸುತ್ತಿದ್ದಾರೆ. ಅದಕ್ಕಾಗಿ ಸಹಾಯವಾಣಿಯನ್ನೂ ಮಾಡಿಕೊಂಡಿದ್ದಾರೆ. ಕಂಟೇನ್ಮೆಂಟ್ ಝೋನ್ ಎಂದು ಗುರುತಿಸಲ್ಪಟ್ಟಿದೆ. ಏನಿದ್ದರೂ ಈ ಭಾಗ ಸದ್ಯ ಆತಂಕದಲ್ಲಿದ್ದು ಜನರಲ್ಲಿ ಧೈರ್ಯ ತುಂಬುವ ಕಾರ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.