ಮತ್ತೆ ಆಸ್ಪತ್ರೆಯಿಂದ ಪರಾರಿಯಾದ ಕೋವಿಡ್-19 ಪಾಸಿಟಿವ್ ಕಳ್ಳ
Team Udayavani, Jul 1, 2020, 12:06 PM IST
ಕಾರವಾರ: ಒಮ್ಮೆ ಪರಾರಿಯಾಗಿ ನಂತರ ಪತ್ತೆಯಾಗಿದ್ದ, ಕೊವಿಡ್ -19 ಸೋಂಕಿತ ಕಳ್ಳನೋರ್ವ ನಗರದ ವೈದ್ಯಕೀಯ ಕಾಲೇಜಿನ ಕೋವಿಡ್ ವಾರ್ಡಿನಿಂದ ಮತ್ತೊಮ್ಮೆ ಪರಾರಿಯಾಗಿದ್ದಾನೆ. ಈತನಿಗಾಗಿ ಹುಡುಕಾಟ ಆರಂಭವಾಗಿದೆ.
ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂದಿಸಿದಂತೆ ಧಾರವಾಡದಲ್ಲಿ ಕಳ್ಳನೋರ್ವನನ್ನ ಬಂಧಿಸಿದ್ದರು. ಅನಾರೋಗ್ಯ ಹಿನ್ನಲೆಯಲ್ಲಿ ಆತನನ್ನ ಪರೀಕ್ಷೆ ನಡೆಸಿದಾಗ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿತ್ತು. ಕಳ್ಳನನ್ನ ಕಾರವಾರ ವೈದ್ಯಕೀಯ ಕಾಲೇಜು ಕೋವಿಡ್ ವಾರ್ಡಿಗೆ ದಾಖಲು ಮಾಡಲಾಗಿತ್ತು. ಸೋಮವಾರ ವಾರ್ಡ್ ನಲ್ಲಿದ್ದ ಈತ, ಇಬ್ಬರ ಮೊಬೈಲ್ ಕದ್ದು ಪರಾರಿಯಾಗಿದ್ದ . ನಂತರ ಮಂಗಳವಾರ ಕಳ್ಳನನ್ನ ತಾಲೂಕಿನ ಕದ್ರಾ ಬಳಿ ಬಂಧಿಸಿ ಮತ್ತೆ ಆಸ್ಪತ್ರೆಗೆ ತಂದಿದ್ದರು.
ನಿನ್ನೆ ರಾತ್ರಿ ವೇಳೆ ಕೋವಿಡ್ ಪಾಸಿಟಿವ್ ಕಳ್ಳ ಮತ್ತೆ ಪೈಬರ್ ಬಾಗಿಲು ಮುರಿದು ವಾರ್ಡಿನಿಂದ ತಪ್ಪಿಸಿಕೊಂಡಿದ್ದಾನೆ. ರಾತ್ರಿಯಿಂದ ತಪ್ಪಿಸಿಕೊಂಡವನ ಹುಡುಕಾಟಕ್ಕೆ ಪೊಲೀಸರು ನಿರಂತರ ಪ್ರಯತ್ನ ನಡೆಸಿದ್ದಾರೆ.
ಕಳ್ಳನಿಗೆ ಕೋವಿಡ್-19 ಇರುವ ಹಿನ್ನಲೆಯಲ್ಲಿ ಆತ ಮತ್ತೆ ಯಾರ ಸಂಪರ್ಕಕ್ಕೆ ಬರಬಹುದು, ಯಾರನ್ನು ಮುಟ್ಟಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಕಾರವಾರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಕೋವಿಡ್ ಪಾಸಿಟಿವ್ ಕಳ್ಳನನ್ನು ಮುಟ್ಟಲು ಹೆದರಿದ ಕಾರಣ ಅವನು ಮತ್ತೊಮ್ಮೆ ತಪ್ಪಿಸಿಕೊಂಡನೇ ಎಂಬ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ
Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.