ಹಾಸ್ಟೆಲ್ ಅಡುಗೆ ಸಹಾಯಕಿಗೆ ಕೋವಿಡ್
Team Udayavani, Jun 25, 2020, 3:43 PM IST
ಮುಂಡಗೋಡ: ಟಿಬೆಟಿಯನ್ ಕಾಲೋನಿಯ ಟಿಸಿವಿ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ನಲ್ಲಿ ಅಡುಗೆ ಸಹಾಯಕಿಯಾಗಿದ್ದ 45 ವರ್ಷದ ಟಿಬೆಟಿಯನ್ ಮಹಿಳೆಗೆ ಕೋವಿಡ್ ವೈರಸ್ ಇರುವುದು ದೃಢಪಟ್ಟಿದೆ.
ದೆಹಲಿಯಿಂದ ಬಂದು ಟಿಬೆಟಿಯನ್ ಕ್ಯಾಂಪ್ನ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಜೂ. 16ರಂದು ಕೋವಿಡ್ ವೈರಸ್ ಇರುವುದು ಪತ್ತೆಯಾಗಿತ್ತು. ಇವರ ಸಂಪರ್ಕದಿಂದ ಹಾಸ್ಟೆಲ್ನಲ್ಲಿ ಅಡುಗೆ ಸಹಾಯಕಿಯಾಗಿದ್ದ 45 ವರ್ಷದ ಟಿಬೆಟಿಯನ್ ಮಹಿಳೆಗೂ ವೈರಸ್ ಹರಡಿದೆ. ಈ ಮಹಿಳೆಗೆ ಪ್ರಥಮ ಸಂಪರ್ಕದಲ್ಲಿದ್ದ ಟಿ.ಸಿ.ವಿ. ಹಾಸ್ಟೆಲ್ ನಲ್ಲಿ ಕ್ವಾರಂಟೈನ್ನಲ್ಲಿದ್ದ 54 ಜನರು ಹಾಗೂ ಈ ಮಹಿಳೆಯ ಕ್ಯಾಂಪ್ ನಂ.2ರಲ್ಲಿರುವ ಮನೆಯಲ್ಲಿ 4 ಜನರನ್ನು ಸೇರಿ ಒಟ್ಟು 60 ಜನರನ್ನು ಪ್ರಥಮ ಸಂಪರ್ಕವೆಂದು ಗುರುತಿಸಲಾಗಿದ್ದು, ಮನೆಯ 4 ಜನರನ್ನೂ ಕ್ವಾರಂಟೈನ್ನಲ್ಲಿ ಇಡಲಾಗಿದೆ.
ಕೋವಿಡ್ ದೃಢಪಟ್ಟ ಟಿಬೆಟಿಯನ್ ಮಹಿಳೆಯನ್ನು ಕಾರವಾರದ ಕೋವಿಡ್ -19 ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ತಹಶೀಲ್ದಾರ್ ಶ್ರೀಧರ ಮುಂದಲಮನಿ, ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ಎಚ್.ಎಫ್. ಇಂಗಳೆ, ಟಿಬೆಟಿಯನ್ ಕ್ಯಾಂಪ್ನ ಆಡಳಿತ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿದರು. ತಾಲೂಕಿನಲ್ಲಿ ಈವೆರೆಗೆ 4 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಈಗಾಗಲೆ ಇಬ್ಬರು ಗುಣಮುಖರಾಗಿ ಮನೆಗೆ ತೆರಳಿದ್ದು, ಇಬ್ಬರನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.