ಭಟ್ಕಳ: ಕೋಟ್ಯಂತರ ರೂ. ಅವ್ಯವಹಾರ ಮಾಡಿ ಪರಾರಿಯಾದ ಮಂಗಳೂರು ಮೂಲದ ಬ್ಯಾಂಕ್ ಶಾಖಾಧಿಕಾರಿ
Team Udayavani, Apr 23, 2022, 4:36 PM IST
ಭಟ್ಕಳ: ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನ ನ್ಯೂ ಇಂಗ್ಲೀಷ್ ರಸ್ತೆಯ ಶಾಖೆಯಲ್ಲಿ ಸುಮಾರು 1.50 ಕೋಟಿಗೂ ಮಿಕ್ಕಿ ಅವ್ಯವಹಾರವಾಗಿದ್ದು ಶಾಖೆಯ ವ್ಯವಸ್ಥಾಪಕರನ್ನು ಅಮಾನತುಗೊಳಿಸಿ ಬ್ಯಾಂಕಿನ ಪ್ರಧಾನ ಕಚೇರಿಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕಳೆದ 2 ವರ್ಷಗಳಿಂದ ಇಲ್ಲಿ ಶಾಖಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಮೂಲತಃ ಮಂಗಳೂರಿನವರಾದ ಶಾಖಾಧಿಕಾರಿ ಅನೂಪ್ ಪೈ ಅವರು ಅವ್ಯವಹಾರ ನಡೆಸುತ್ತಿದ್ದಾರೆನ್ನಲಾಗಿದ್ದು, ಮಾರ್ಚ್ ಅಂತ್ಯಕ್ಕೆ ಬ್ಯಾಂಕಿನ ಅಡಿಟ್ ಮಾಡುವ ಸಂದರ್ಭದಲ್ಲಿ ಅಡಿಟರ್ ಈ ಅವ್ಯವಹಾರವನ್ನು ಬಯಲಿಗೆಳೆದಿದ್ದರು.
ಬ್ಯಾಂಕಿನಲ್ಲಿ ತುರ್ತು ಸಂದರ್ಭಕ್ಕೆಂದು ಇಡಲಾಗಿದ್ದ ಸಿಸ್ಟಮ್ ಅಕೌಂಟ್ ನಿಂದ ಹಣ ಡ್ರಾ ಮಾಡುತ್ತಿದ್ದ ಇವರು ಸುಮಾರು ಒಂದೂವರೆ ಕೋಟಿ ರೂಪಾಯಿಗಳಷ್ಟು ಅವ್ಯವಹಾರ ನಡೆಸಿದ್ದಾರೆನ್ನಲಾಗಿದೆ.
ಆಡಿಟ್ ವರದಿಯಲ್ಲಿ ವಿಷಯ ತಿಳಿಯುತ್ತಿದ್ದಂತೆಯೇ ಶಾಖಾಧಿಕಾರಿಯನ್ನು ಅಮಾನತು ಮಾಡಿದ್ದು, ನಂತರ ಶಾಖಾಧಿಕಾರಿಯಾಗಿ ಬಂದಿದ್ದ ರಾಘವೇಂದ್ರ ಅವರು ಅವ್ಯವಹಾರದ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರು ದಾಖಲಿಸಿರುವುದು ತಿಳಿಯುತ್ತಿದ್ದಂತೆಯೇ ಅನೂಪ ಪೈ ಅವರು ನಾಪತ್ತೆಯಾಗಿದ್ದು ಪೊಲೀಸರು ಅವರು ಉಳಿದುಕೊಂಡಿದ್ದ ಬಾಡಿಗೆ ಮನೆಗೆ ಹೋದಾಗ ಬೀಗ ಹಾಕಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.