ಹದಗೆಟ್ಟ ಜೋಗೇಶ್ವರ ರಸ್ತೆ: ವಾಹನ ಸವಾರರ ಪರದಾಟ
Team Udayavani, Mar 2, 2020, 4:45 PM IST
ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಪಂ ವ್ಯಾಪ್ತಿಯ ಜೋಗೇಶ್ವರ ಗೌಳಿದಡ್ಡಿ ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಇದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಇಪ್ಪತ್ತಕ್ಕೂ ಅಧಿಕ ಮನೆಗಳಿರುವ ಈ ಜೋಗೇಶ್ವರಹಳ್ಳ ಎಂಬ ಪುಟ್ಟ ಗ್ರಾಮದಲ್ಲಿ ಗೌಳಿಸಮುದಾಯದ ಜನರು ವಾಸವಾಗಿದ್ದಾರೆ. ನೂರಕ್ಕೂ ಅಧಿಕ ಜನಸಂಖ್ಯೆಯಿರುವ ಈ ಗ್ರಾಮವೂ ತಾಲೂಕು ಕೇಂದ್ರದಿಂದ 6 ಕಿಮೀ ದೂರದಲ್ಲಿದೆ. ಹಳೆಕರಗಿನಕೋಪ್ಪದಿಂದ ಜೋಗೆಶ್ವರಹಳ್ಳ ಗ್ರಾಮ ಮೂರು ಕಿಮೀ ಅಂತರದಲ್ಲಿದ್ದು, ಈ ರಸ್ತೆಯೂ ಸಂಪೂರ್ಣ ಹಾಳಾಗಿದೆ. ರಸ್ತೆಯ ತುಂಬೆಲ್ಲ ಕಲ್ಲುಗಳು ತುಂಬಿದ್ದು, ಇದರಿಂದ ಪಾದಚಾರಿಗಳು ಹಾಗೂ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡಬೇಕಾದ ಅನಿವಾರ್ಯತೆ ಎದುರಾಗಿದೆ.
ರಸ್ತೆ ತುಂಬಾ ಕಲ್ಲುಗಳಿರುವುದರಿಂದ ಬೈಕ್ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಳ್ಳುತ್ತಿದ್ದಾರೆ. ಬೈಕ್ ಚಲಾಯಿಸುವಾಗ ಸ್ವಲ್ಪ ನಿರ್ಲಕ್ಷ್ಯ ವಹಿಸಿದರು ಸಹ ಬಿಳ್ಳುವುದು ಖಚಿತ ಇನ್ನೂ ರಾತ್ರಿ ವೇಳೆ ಸಂಚರಿಸುವ ಬೈಕ್ ಸವಾರರು ಹಲವಾರು ಬಾರಿ ಬಿದ್ದು ಗಾಯ ನೂವು ಪಡಿಸಿಕೊಂಡಿದ್ದಾರೆ. ಹಳೆಕರಗಿನಕೋಪ್ಪ ಗ್ರಾಮದಿಂದ ನಮ್ಮ ಜೋಗೇಶ್ವರಹಳ್ಳ ಗ್ರಾಮದ ವರೆಗೆ ಸಂಪೂರ್ಣ ರಸ್ತೆ ಹಾಳಾಗಿದೆ ಈ ರಸ್ತೆಯಲ್ಲಿ ಸಂಚರಿಸಲು ತೀವ್ರತೊಂದರೆ ಅನುಭವಿಸುತ್ತಿದ್ದೇವೆ. ಆದ್ದರಿಂದ ಕೂಡಲೆ ನಮಗೆ ರಸ್ತೆ ಡಾಂಬರೀಕರಣ ಮಾಡಿ ಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ರಸ್ತೆ ಹಾಳಾಗಿರುವ ಕುರಿತು ಸಾರ್ವಜನಿಕರು ಸಚಿವ ಶಿವರಾಮ ಹೆಬ್ಟಾರ ಅವರ ಗಮನಕ್ಕೆ ತಂದಿದ್ದು ತಾಲೂಕಿನ ಎಲ್ಲ ಗೌಳಿದಡ್ಡಿ ಗ್ರಾಮಗಳ ರಸ್ತೆಯನ್ನು ನಿರ್ಮಿಸುತ್ತಿದ್ದು ಈ ರಸ್ತೆ ನಿಮಾಣಕ್ಕೂ ಸಹ ಸದ್ಯದಲ್ಲಿಯೆ ಸರಕಾರದಿಂದ ಅನುದಾನ ಬಿಡುಗಡೆ ಮಾಡಿಸಿ ರಸ್ತೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.