Dandeli: ಕತ್ತು ಹಿಸುಕಿ ಪತ್ನಿಯ ಕೊಲೆ; ಆರೋಪಿ ಪತಿ ಬಂಧನ
Team Udayavani, Mar 22, 2024, 10:06 AM IST
ದಾಂಡೇಲಿ: ಪತಿ-ಪತ್ನಿಯ ಜಗಳದಲ್ಲಿ ಪತಿ ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಘಟನೆ ಇಲ್ಲಿನ ಗಾಂಧಿನಗರದ ರೈಲ್ವೆ ಹಳಿ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ.
ಗಾಂಧಿನಗರದ ರೈಲ್ವೆ ಹಳಿ ಪ್ರದೇಶ ವ್ಯಾಪ್ತಿಯ ನಿವಾಸಿ ಪಾತಿಮಾ (42) ಕೊಲೆಯಾದ ಮಹಿಳೆ. ಇವರ ಪತಿ, ಆಟೋ ಚಾಲಕ ಶೇಖ ಸಾಬ್ ಕೊಲೆ ಮಾಡಿದಾತ.
ಆಟೋ ಚಾಲಕ, ಶೇಖ ಸಾಬ್ ಪ್ರತಿದಿನ ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದನು. ಗುರುವಾರ ಸಂಜೆ ಇವರುಗಳ ಜಗಳ ತಾರಕಕ್ಕೇರಿ, ಪತಿ ತನ್ನ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ. ಶೇಖ್ ಸಾಬ್ ಕುಡಿದು ಬಂದು ಪ್ರತಿದಿನ ಜಗಳ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೈದ ಆರೋಪಿ ಶೇಖ್ ಸಾಬ್ ನನ್ನು ಬಂಧಿಸಿ ಶುಕ್ರವಾರ ನಸುಕಿನ ವೇಳೆ 3 ಗಂಟೆಯವರೆಗೆ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ಕೊಲೆಗೈದಿರುವುದನ್ನು ಒಪ್ಪಿಕೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮೃತದೇಹ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿದ್ದು, ಶುಕ್ರವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಘಟನೆಗೆ ಸಂಬಂಧಪಟ್ಟಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.