ದಾಂಡೇಲಿ; ಪ್ರವಾಹ, ಮೊಸಳೆ ದಾಳಿ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ವಿತರಣೆ
Team Udayavani, Jul 31, 2023, 10:04 PM IST
ದಾಂಡೇಲಿ : ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭೀಕರ ಮಳೆಯಿಂದಾಗಿ ಮನೆ ಹಾನಿಯಾಗಿ ನಷ್ಟವನ್ನು ಅನುಭವಿಸಿದ ಸಂತ್ರಸ್ತರಿಗೆ ನಗರ ಸಭೆಯ ಸಭಾಭವನದಲ್ಲಿ ಸೋಮವಾರ ಪರಿಹಾರದ ಆದೇಶ ಪತ್ರವನ್ನು ಶಾಸಕರಾದ ಆರ್.ವಿ.ದೇಶಪಾಂಡೆಯವರು ವಿತರಿಸಿದರು.
ಮಳೆ ಹಾನಿಯಿಂದ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿರುವ ತಾಲ್ಲೂಕಿನ ಒಟ್ಟು 21 ಮನೆಗಳಿಗೆ ತಲಾ 5,000 ರೂ ನಂತೆ ಒಟ್ಟು 43 ಕುಟುಂಬಗಳಿಗೆ ಮತ್ತು ಮೂರು ಭಾಗಶ: ಹಾಗೂ ಒಂದು ಸಂಪೂರ್ಣ ಕುಸಿದ ಮನೆಗೆ ಹೀಗೆ ಒಟ್ಟು 4 ಕುಟುಂಬಗಳಿಗೆ ಒಟ್ಟು 1,37,000 ರೂ. ಪರಿಹಾರದ ಧನದ ಆದೇಶ ಪತ್ರವನ್ನು ವಿತರಿಸಲಾಯಿತು.
ಮೊಸಳೆ ದಾಳಿಗೊಳಗಾಗಿ ಮೃತಪಟ್ಟ ಪೀತಾಂಬರದಾಸ್ ಮಹೇಶ್ವರಿ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 7,50,000 ರೂ.,ಪರಿಹಾರ ಧನದ ಚೆಕ್ ಹಾಗೂ ಮೊಸಳೆ ದಾಳಿಗೊಳಗಾಗಿ ಮೃತಪಟ್ಟ 4 ಕುಟುಂಬಗಳಿಗೆ 4000 ರೂ. ನಂತೆ ಮಾಸಾಶನದ ಮಂಜೂರಾತಿ ಆದೇಶ ಪತ್ರವನ್ನು ಆರ್.ವಿ.ದೇಶಪಾಂಡೆಯವರು ವಿತರಿಸಿದರು.
ಪ್ರಕೃತಿ ವಿಕೋಪಗಳಂತಹ ಸಂದರ್ಭದಲ್ಲಿ ಸಮಸ್ಯೆಗೆ ಸ್ಪಂದಿಸುವಿಕೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಮಳೆ ಹಾನಿಯಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಅತೀ ತ್ವರಿತಗತಿಯಲ್ಲಿ ಪರಿಹಾರವನ್ನು ಒದಗಿಸುವ ಕಾರ್ಯವನ್ನು ರಾಜ್ಯ ಸರಕಾರ ಮಾಡುತ್ತಿದೆ. ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕೆಂದು ದೇಶಪಾಂಡೆಯವರು ಹೇಳಿದರು.
ವೇದಿಕೆಯಲ್ಲಿ ಸಹಾಯಕ ಆಯುಕ್ತೆ ಜಯಲಕ್ಷ್ಮೀ ರಾಯಕೋಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಎಚ್.ಬಾಲಚಂದ್ರ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ನಾಯ್ಕರ್, ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್, ತಾಲ್ಲೂಕು ಪಂಚಾಯ್ತು ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ ಹಾಲಮ್ಮನವರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಆರ್.ಹೆಗಡೆ, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಗರ ಸಭೆಯ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ತಹಶೀಲ್ದಾರ್ ಕಚೇರಿ ಮತ್ತು ನಗರ ಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.