ಮೃತ ಡಿ.ಆರ್.ಎಫ್.ಓ ಯೋಗೇಶ್ ನಾಯ್ಕ ಅವರಿಗೆ ಅರಣ್ಯ ಇಲಾಖೆ ವತಿಯಿಂದ ಅಂತಿಮ ಗೌರವ ಸಲ್ಲಿಕೆ


Team Udayavani, Jul 8, 2023, 12:12 PM IST

ಮೃತ ಡಿ.ಆರ್.ಎಫ್.ಓ ಯೋಗೇಶ್ ನಾಯ್ಕ ಅವರಿಗೆ ಅರಣ್ಯ ಇಲಾಖೆಯ ವತಿಯಿಂದ ಅಂತಿಮ ಗೌರವ ಸಲ್ಲಿಕೆ

ದಾಂಡೇಲಿ: ದೇಹದೊಳಗೆ ಅಪಾಯಕಾರಿ ವಿಷ ಸೇರಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಸುಚಿರಾಯ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದ, ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಶಾಖೆಯ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ ಅವರಿಗೆ ಹಳಿಯಾಳ ಪಟ್ಟಣದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಾಲಯದ ಆವರಣದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು.

ನಿನ್ನೆ ಸಂಜೆಯೆ ಮೃತಪಟ್ಟಿದ್ದ ಯೋಗೇಶ್ ನಾಯ್ಕ ಅವರ ಮೃತದೇಹವನ್ನು ಇಂದು ಶನಿವಾರ ಹುಬ್ಬಳ್ಳಿಯಿಂದ ಬೆಳಿಗ್ಗೆ 7 ಗಂಟೆಗೆ ಹಳಿಯಾಳದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಾರ್ಯಾಲಯದ ಆವರಣಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮೃತ ಯೋಗೇಶ್ ನಾಯ್ಕ ಅವರ ಮೃತದೇಹಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಎಚ್.ಬಾಲಚಂದ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಟ್ ಸೇರಿದಂತೆ ಹಳಿಯಾಳ ಉಪ ವಿಭಾಗದ ವ್ಯಾಪ್ತಿಯ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಅಂತಿಮ ನಮನದೊಂದಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಟಿಂಬರ್ – ಕಾರ್ಪೆಂಟರ್ ಅಸೋಶಿಯೇಶನ್ ಸೇರಿದಂತೆ ಇನ್ನಿತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯಾತಿ ಗಣ್ಯರು, ಹಾಗೂ ಯೋಗೇಶ್ ನಾಯ್ಕ ಅವರ ಅಭಿಮಾನಿಗಳು ಗೌರವ ಸಲ್ಲಿಸಿದರು. ಈ ವೇಳೆ ಕುಟುಂಬಸ್ಥರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯ್ತು. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನೆಮಗನಂತೆ ಇದ್ದಂತಹ ಯೋಗೇಶ್ ಅವರನ್ನು ಕಳೆದುಕೊಂಡ ನೋವು ಒಂದೆಡೆಯಾದರೇ, ಸಹದ್ಯೋಗಿಗಳಿಗೆ ಆತ್ಮೀಯ ಸನ್ಮಿತ್ರನ ಅಗಲಿಕೆಯ ದುಃಖ, ಇನ್ನೂ ಯೋಗೇಶ್ ನಾಯ್ಕ ಅವರ ಕುಟುಂಬಸ್ಥರ, ಬಂಧುಗಳ ಯಾತನೆ, ಆಕ್ರಂದನ ಮುಗಿಲು ಮುಟ್ಟಿತ್ತು. ಒಬ್ಬ ನಿಷ್ಟಾವಂತ, ವಾತ್ಸಲ್ಯಮಯಿ, ಜನಮುಖಿ ಮತ್ತು ಸಮಾಜಮುಖಿ ವ್ಯಕ್ತಿತ್ವದ ಮೂಲಕ ಕಳೆದ 13 ವರ್ಷಗಳಿಂದ ಅತ್ಯಂತ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದ ಯೋಗೇಶ್ ನಾಯ್ಕ ಅವರ ಸೇವೆ ಮತ್ತು ವ್ಯಕ್ತಿತ್ವ ಸದಾ ಸ್ಮರಣೀಯವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಪ್ರಾಪ್ತವಾಗಲಿ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ದಯಪಾಲಿಸಲೆನ್ನುವುದೆ ಎಲ್ಲರ ಪ್ರಾರ್ಥನೆಯಾಗಿತ್ತು.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

3-dandeli

Dandeli: ಸಂಡೇ ಮಾರ್ಕೆಟ್ ಬಳಿ ಸರಣಿ ಕಳ್ಳತನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.