Dandeli: ನ. 11ರಂದು ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ
Team Udayavani, Nov 5, 2024, 9:16 PM IST
ದಾಂಡೇಲಿ: ಶಿರಸಿಯ ರೋಟರಿ ಚಾರಿಟೇಬಲ್ ಆಸ್ಪತ್ರೆ, ದಾಂಡೇಲಿಯ ಲಯನ್ಸ್ ಕ್ಲಬ್, ಹಳಿಯಾಳದ ವಿಆರ್ಡಿಎಂ ಟ್ರಸ್ಟ್, ದಾಂಡೇಲಿಯ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ, ಕಾರವಾರದ ಜಿಲ್ಲಾ ಅಂದತ್ವ ನಿವಾರಣಾ ಸಂಸ್ಥೆ, ಕಾರವಾರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಡಿಯಲ್ಲಿ ನಗರದ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯಲ್ಲಿ ನ. 11ರ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಕಣ್ಣಿನ ಪೊರೆ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ಡಾ.ಸಂತೊಷ್ ಚೌವ್ಹಾಣ್ ಹೇಳಿದರು.
ಅವರು ನ.5ರ ಮಂಗಳವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಶಿಬಿರದ ಮಾಹಿತಿಯನ್ನು ನೀಡಿದರು. ಈ ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ. ಎ.ಜಿ. ವಸ್ತ್ರದ್ ಮತ್ತು ಡಾ. ಆದಿತ್ಯ ಪಡ್ನಿಸ್ ಅವರು ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ತಾಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ವಿಭಾಗಿಯ ಅಧ್ಯಕ್ಷ ಸೈಯದ್ ಇಸ್ಮಾಯಿಲ್ ತಂಗಳ, ನಗರದ ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಡಾ. ನಾಸಿರ್ ಅಹ್ಮದ ಜಂಗುಬಾಯಿ, ಉಪಾಧ್ಯಕ್ಷ ಇಮ್ತಿಯಾಜ್ ಅತ್ತಾರ, ಲಯನ್ಸ್ ಕ್ಲಬ್ ನ ಪ್ರಮುಖರುಗಳಾದ ಅನಿಲ್ ದಂಡಗಲ್, ವೀರೇಶ ಯರಗೇರಿ, ಮಾರುತಿರಾವ್ ಮಾನೆ, ರವಿ ಪೈ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.