ಅಜಗಾಂವ್ ಕ್ರಾಸಿನಲ್ಲಿ ಕಾರು ಮತ್ತು ಬಸ್ಸಿಗೆ ಡಿಕ್ಕಿ ಹೊಡೆದ ಪೋಲ್ಸ್ ತುಂಬಿದ ಟ್ರಕ್
Team Udayavani, Aug 23, 2021, 5:10 PM IST
ದಾಂಡೇಲಿ : ಚಾಲಕನ ನಿಯಂತ್ರಣ ತಪ್ಪಿ ಪೋಲ್ಸ್ ತುಂಬಿಕೊಂಡು ಬರುತ್ತಿದ್ದ ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದು, ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದ ಘಟನೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಅಜಗಾಂವ ಕ್ರಾಸಿನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಪರವೂರಿನಿಂದ ದಾಂಡೇಲಿಯ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಗೆ ಪೋಲ್ಸ್ ಹೇರಿಕೊಂಡು ಬರುತ್ತಿದ್ದ ವಾಹನ ಸಂಖ್ಯೆ: ಕೆಎ-02, ಎಇ-4518 ಟ್ರಕ್ ಒಂದು ಚಾಲಕನ ನಿಯಂತ್ರಣ ತಪ್ಪಿ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅಜಗಾಂವ ಕ್ರಾಸ್ ಬಳಿ ಎದುರುಗಡೆಯಿಂದ ಬರುತ್ತಿದ್ದ ವಾಹನ ಸಂಖ್ಯೆ ಕೆಎ-31, ಎಂ:8619 ಸಂಖ್ಯೆಯ ಕಾರಿನ ಚಾಲಕನ ಬದಿಗೆ ಡಿಕ್ಕಿ ಹೊಡೆದು, ಆನಂತರ ಪ್ರಯಾಣಿಕರನ್ನು ಇಳಿಸುತ್ತಿದ್ದ ಕೆಎ-25, ಎಫ್ 1584 ಸಾರಿಗೆ ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಕಾರ್ಯಕ್ರಮಕ್ಕೆ ಆಹ್ವಾನಿಸಿದವರೇ ಉಪಸ್ಥಿತರಿಲ್ಲ: ಕುಮಾರಸ್ವಾಮಿ ಅಸಮಾಧಾನ
ಅಪಘಾತದಲ್ಲಿ ಸಾವು ನೋವು ಸಂಭವಿಸಿಲ್ಲ. ಆದರೆ ಕಾರು ಜಖಂಗೊಂಡಿದ್ದು, ಬಸ್ಸಿನ ಹಿಂಬದಿ ಕೂಡಾ ಜಖಂಗೊಂಡಿದೆ. ಇನ್ನು ಡಿಕ್ಕಿಯಾದ ಟ್ರಕ್ ಸಹ ಮುಂಭಾಗದಲ್ಲಿ ಜಖಂಗೊಂಡಿದ್ದು, ಸ್ಥಳದಲ್ಲಿ ಕೆಲ ಹೊತ್ತು ಸುಗಮ ಸಂಚಾರಕ್ಕೆ ಅಡಚಣೆಯಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ದಾಂಡೇಲಿ ಗ್ರಾಮೀಣ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು, ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.