ಹಳಿಯಾಳ ರಸ್ತೆಯಲ್ಲಿ ಮಟ್ಕಾ ಆಡಿಸುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ- ಪ್ರಕರಣ ದಾಖಲು
Team Udayavani, Sep 1, 2021, 9:10 PM IST
ದಾಂಡೇಲಿ : ನಗರದ ಹಳಿಯಾಳ ರಸ್ತೆಯ 3ನಂ. ಗೇಟ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಾಟ ಆಡಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಮಟ್ಕಾ ಜುಗರಾಟಕ್ಕೆ ಬಳಸುತ್ತಿದ್ದ ನಗದನ್ನು ವಶಪಡಿಸಿಕೊಂಡಿರುವ ಘಟನೆ ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಹಳೆದಾಂಡೇಲಿ ನಿವಾಸಿ 37 ವರ್ಷ ವಯಸ್ಸಿನ ಸಂತೋಷ ಬುದಾಜಿ ನಾಯ್ಕ ಎಂಬಾತನು ಹಳಿಯಾಳ ರಸ್ತೆಯ 3ನಂ. ಗೇಟ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ತಮ್ಮ ಲಾಭಕ್ಕಾಗಿ ಅದೃಷ್ಟದ ಅಂಕೆ ಬಂದಲ್ಲಿ ಒಂದು ರೂಪಾಯಿಗೆ 80 ರೂಪಾಯಿ ಕೊಡುವುದಾಗಿ ಹೇಳಿ ಸಾರ್ವಜನಿಕರಿಂದ ಅಂಕೆ ಸಂಖ್ಯೆ ಮೇಲೆ ಹಣವನ್ನು ಪಂಥಕ್ಕೆ ಕಟ್ಟಿಸಿಕೊಂಡು ಓ.ಸಿ,ಮಟ್ಕಾ ಜುಗಾರಾಟ ಆಡಿಸುತ್ತಿದ್ದನು.
ಇದನ್ನೂ ಓದಿ:ಸೈಬರ್ ಭದ್ರತೆ ಈಗ ಜಾಗತಿಕ ಅಗತ್ಯ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ
ಈ ಸಂದರ್ಭದಲ್ಲಿ ದಾಂಡೇಲಿ ನಗರ ಪೊಲೀಸರು ದಾಳಿ ನಡೆಸಿ ಮಟ್ಕಾ ಬರೆದಿರುವ ಚೀಟಿ ಹಾಗೂ ನಗದು ರೂ: 1030/- ಮತ್ತು ಆರೋಪಿಯನ್ನು ವಶಕ್ಕೆ ಪಡೆದು ಕಲಂ 78(3) ರ ಕೆ.ಪಿ.ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಎಸೈ ಯಲ್ಲಪ್ಪ.ಎಸ್ ಅವರು ದಾಳಿ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಮಲಗಿದ್ದವನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Champions Trophy: ನ್ಯೂಜಿಲ್ಯಾಂಡ್ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು
Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು
Shivamogga: ಖ್ಯಾತ ಫೋಟೋ ಜರ್ನಲಿಸ್ಟ್ ಗೆ ಹೃದಯಾಘಾತ, ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.