Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Team Udayavani, Sep 19, 2024, 11:59 AM IST
ದಾಂಡೇಲಿ : ನಗರದ ಲಿಂಕ್ ರಸ್ತೆಯಲ್ಲಿ ಸರಣಿ ಕಳ್ಳತನ ನಡೆದಿದ್ದು, ಗುರುವಾರ ಬೆಳಿಗ್ಗೆ 10:00 ಸುಮಾರಿಗೆ ದಾಂಡೇಲಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.
ನಗರದ ಲಿಂಕ್ ರಸ್ತೆಯಲ್ಲಿರುವ ಅಭಿಷೇಕ್ ಕಾಳೆ ಮಾಲಕತ್ವದ ಮೆಡಿಕಲ್ ಅಂಗಡಿಗೆ ಅಂಗಡಿಯ ಮೇಲ್ಛಾವಣಿಯ ಸೀಟು ಒಡೆದು ಒಳ ನುಗ್ಗಿರುವ ಕಳ್ಳರು, ಅಂಗಡಿ ಒಳಗಿದ್ದ ನಗದು 4 ಲಕ್ಷ ರೂಪಾಯಿ ಮತ್ತು ಚಿನ್ನದ ಆಭರಣಗಳನ್ನು ಕೆಲವು ಮಾಡಿದ್ದಾರೆ.
ಇದೇ ಕಟ್ಟಡದಲ್ಲಿರುವ ಪಕ್ಕದ ಶರಣ್.ಸಿ. ಅರಳಿಯವರ ಕಿರಾಣಿ ಅಂಗಡಿಗೂ ನುಗ್ಗಿರುವ ಕಳ್ಳರು ಅಲ್ಲಿ 45ರಿಂದ 50 ಸಾವಿರ ರೂಪಾಯಿ ನಗದನ್ನು ದೋಚಿದ್ದಾರೆ.
ಇನ್ನೂ ಇಲ್ಲೇ ಹತ್ತಿರದಲ್ಲಿರುವ ವಿಷ್ಣು ಕಲಾಲ್ ಅವರು ನಡೆಸುತ್ತಿರುವ ಮೈಲಾರ ವೈನ್ ಸೆಂಟರಿಗೆ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಅಲ್ಲಿಯೂ ಸರಿ ಸುಮಾರು 35 ಸಾವಿರ ನಗದನ್ನು ಹಾಗೂ ವಿವಿಧ ಮದ್ಯದ ಬಾಟಲಿಗಳನ್ನು ಕಳವುಗೈದ್ದಿದ್ದಾರೆ.
ಮೈಲಾರ ವೈನ್ ಸೆಂಟರಿನ ಮುಂಭಾಗದಲ್ಲಿರುವ ಕಿರಣ್ ಕರಡಿ ಅವರ ಎಲ್ ಜಿ ಕಿರಾಣಿ ಅಂಗಡಿಗೂ, ಅಂಗಡಿಯ ಮೇಲ್ಛಾವಣಿ ಶೀಟು ಒಡೆದು ರೂ : 2,000/- ನಗದನ್ನು ಕಳವು ಮಾಡಿದ್ದಾರೆ.
ಮೈಲಾರ ವೈನ್ ಸೆಂಟರಿಗೆ ನುಗ್ಗಿ ಕಳವು ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗುರುವಾರ ನಸುಕಿನ ವೇಳೆ ಸುಮಾರು ಎರಡುವರೆ ಗಂಟೆಯಿಂದ ನಾಲ್ಕು ಗಂಟೆಯ ಒಳಗಡೆ ಈ ಕಳ್ಳತನ ಕೃತ್ಯ ನಡೆದಿದೆ ಎನ್ನಲಾಗಿದೆ.
ಗುರುವಾರ ಬೆಳಿಗ್ಗೆ ಎಂದಿನಂತೆ ತಮ್ಮ ತಮ್ಮ ಅಂಗಡಿಗಳಿಗೆ ಬಂದ ಮಾಲಕರಿಗೆ ಕಳ್ಳತನವಾಗಿರುವುದು ಗೊತ್ತಾಗಿದೆ. ತಕ್ಷಣವೇ ಕಳ್ಳತನದ ಬಗ್ಗೆ ದಾಂಡೇಲಿ ನಗರ ಠಾಣೆಯ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದೆ. ನಗರ ಠಾಣೆಯ ಪೊಲೀಸರು ಕಳ್ಳತನವಾಗಿರುವ ಅಂಗಡಿಗಳಿಗೆ ತೆರಳಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಇದನ್ನೂ ಓದಿ: Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್‌ಐಆರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.