![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 21, 2024, 3:46 PM IST
ದಾಂಡೇಲಿ: ಗಾಂಧಿನಗರದಲ್ಲಿ ಕುಸಿದ ಸೇತುವೆಯ ಮೋರಿಗೆ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಬಿದ್ದು, ದ್ವಿಚಕ್ರ ವಾಹನದಲ್ಲಿದ್ದ ಪತಿ ಪತ್ನಿ ಇಬ್ಬರಿಗೂ ಗಂಭೀರ ಗಾಯವಾದ ಘಟನೆ ಶನಿವಾರ( ಸೆ.21) ನಡೆದಿದೆ.
ಸ್ಥಳೀಯ ಗಾಂಧಿನಗರದ ಕಂಜಾರಭಾಟ್ ನಿವಾಸಿಗಳಾದ ಕದಂ ಲಕ್ಷ್ಮಣ ಕಂಜಾರಭಾಟ್ ಹಾಗೂ ಅವರ ಪತ್ನಿ ಶಾಂತಾ ಕದಂ ಕಂಜಾರಭಾಟ್ ಗಾಯಗೊಂಡವರಾಗಿದ್ದಾರೆ. ಇವರು ನಗರದಿಂದ ಗಾಂಧಿನಗರಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಮೊದಲೇ ಕುಸಿದು ಬಿದ್ದಿರುವ ಕಿರು ಸೇತುವೆಯ ಬದಿಯಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಮೋರಿಯೊಳಗಡೆ ಬಿದ್ದ ಪರಿಣಾಮವಾಗಿ ಇಬ್ಬರಿಗೂ ಗಾಯವಾಗಿದೆ. ಗಾಯಗೊಂಡ ಇಬ್ಬರನ್ನು ತಕ್ಷಣವೆ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ಪತ್ರೆಗೆ ಸ್ಥಳೀಯ ನಗರಸಭಾ ಸದಸ್ಯೆ ರುಕ್ಮಿಣಿ ಬಾಗಡೆ, ಸ್ಥಳೀಯ ಯುವ ಮುಖಂಡ ಸುಮಿತ್ ಹಾಗೂ ಸ್ಥಳೀಯರು ಭೇಟಿ ನೀಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಗೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಕಳೆದ ಒಂದು ವರ್ಷಗಳ ಹಿಂದೆಯೇ ಇಲ್ಲಿ ಕಿರು ಸೇತುವೆ ಕುಸಿದು ಬಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಸೇತುವೆಯ ಎರಡು ಬದಿಯಲ್ಲಿ ದ್ವಿಚಕ್ರ ವಾಹನ ಸಂಚರಿಸಲು ಅವಕಾಶವಿದ್ದರೂ, ಅದು ಈ ರೀತಿಯ ಅನಾಹುತಕ್ಕೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಇಲ್ಲಿಯ ಕಿರು ಸೇತುವೆಯ ದುರಸ್ತಿಗೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕಾಗಿದೆ.
ಇದನ್ನೂ ಓದಿ: ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.