ಗಂಟೆ ಮುಂಚೆ ಪರೀಕ್ಷೆಗೆ ಹಾಜರಾಗಿ

Team Udayavani, Jun 12, 2020, 7:07 AM IST

ಗಂಟೆ ಮುಂಚೆ ಪರೀಕ್ಷೆಗೆ ಹಾಜರಾಗಿ

ಕಾರವಾರ: ಕೋವಿಡ್ ಲಾಕ್‌ಡೌನ್‌ನಿಂದ ಮುಂದೂಡಲಾಗಿದ್ದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ಜೂ.25 ರಿಂದ ಜು.4 ರವರೆಗೆ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಡಾ| ಹರೀಶಕುಮಾರ್‌ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಕುರಿತು ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಥರ್ಮಲ್‌ ಸ್ಕ್ರೀನಿಂಗ್‌, ಕೈಗಳಿಗೆ ಸ್ಯಾನಿಟೈಸರ್‌ ಮಾಡಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಗುತ್ತಿರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭದ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ತಿಳಿಸಿದರು.

ಪ್ರತಿಯೊಬ್ಬ ವಿದ್ಯಾರ್ಥಿ ಆರೋಗ್ಯ ತಪಸಣೆಗೆ ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು, ಯಾವುದೇ ಆತಂಕಗಳಿಗೆ ಅವಕಾಶ ಮಾಡಿಕೊಡದೆ ಸಮರ್ಥವಾಗಿ ಪರೀಕ್ಷೆ ನಡೆಸಲು ಸಿದ್ಧರಿರಬೇಕೆಂದು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಇಲಾಖಾ ಮಾರ್ಗದರ್ಶನದಂತೆ ಬೇರೆ ಜಿಲ್ಲೆಯ ಪರೀಕ್ಷಾ ಕೇಂದ್ರದಿಂದ ಆಗಮಿಸಿದ ಹೊಸದಾಗಿ ಪ್ರವೇಶ ಪತ್ರ ತರದೇ ಇರುವುದರಿಂದ, ಬಂದಿರುವ ಲಿಸ್ಟನ್ನು ಪರಿಶೀಲಿಸಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರುವಂತೆ ತಿಳಿಸಬೇಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು 200 ಮಾಸ್ಕ್ ಗಳನ್ನು ಇಟ್ಟುಕೊಳ್ಳಬೇಕು ಹಾಗೂ ಪ್ರತಿ ಕೊಠಡಿಯನ್ನು ಸ್ಯಾನಿಟೈಜೇಷನ್‌ ಮಾಡಬೇಕೆಂದು ತಿಳಿಸಿದರು.

ಪರೀಕ್ಷಾ ದಿನದಂದು ಕೇಂದ್ರದ ಸುತ್ತಮುತ್ತಲೂ 200 ಮೀಟರ್‌ ನಿಷೇಧ ಪ್ರದೇಶವೆಂದು ಘೋಷಿಸಲಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ನೇಮಕೊಂಡ ಅಧಿಕಾರಿ ಹಾಗೂ ಸಿಬ್ಬಂದಿ ಹೊರತುಪಡಿಸಿ ಉಳಿದ ವ್ಯಕ್ತಿಗಳಿಗೆ ಪ್ರವೇಶ ನಿಷೇಧವಿರುತ್ತದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್‌ ಮಾತನಾಡಿ, ಕಾರವಾರದಲ್ಲಿ ಪರೀಕ್ಷಾ ಕೇಂದ್ರಗಳು 35+5 ಮತ್ತು ಶಿರಸಿಯಲ್ಲಿ 35 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗುತ್ತಿದೆ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕಾರವಾರ ಡಿಡಿಪಿಐ ಹರೀಶ ಗಾಂವಕರ್‌ ಮತ್ತು ಶಿರಸಿ ಡಿಡಿಪಿಐ ದಿವಾಕರ ಶೆಟ್ಟಿ, ತಹಶೀಲ್ದಾರರು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.