ಪಕ್ಷಕ್ಕಾಗಿ ದುಡಿದಿದ್ದೇನೆ,ಶಿರಸಿ ಕ್ಷೇತ್ರಕ್ಕೆ ನಾನೂ ಟಿಕೆಟ್ ಆಕಾಂಕ್ಷಿ:- ದೀಪಕ್ ದೊಡ್ಡೂರು
Team Udayavani, Jul 10, 2021, 2:36 PM IST
ಶಿರಸಿ: ಕಾಂಗ್ರೆಸ್ ಗೆ ನಾನು ನಿನ್ನೆ ಮೊನ್ನೆ ಬಂದವನಲ್ಲ. ನಾನೂ ಶಿರಸಿ ಸಿದ್ದಾಪುರ ಆಕಾಂಕ್ಷಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ದೀಪಕ್ ದೊಡ್ಡೂರು ಹೇಳಿದರು.
ಶನಿವಾರ ಅವರು ನಗರದಲ್ಲಿ ಸುದ್ದಿಗೋಷ್ಡಿಯಲ್ಲಿ ಮಾತನಾಡಿ, ಕಳೆದ 2004 ರಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ, ವಿವಿಧ ಜವಬ್ದಾರಿ ನಿರ್ವಹಿಸಿದ್ದೇನೆ. ನಾನೂ ವಿವಿಧ ಚುನಾವಣೆಯಲ್ಲಿ ಮುಖ್ಯವಾಗಿ ದುಡಿದಿದ್ದೇನೆ. ಈ ಕಾರಣದಿಂದ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು, ನಾಯಕರಾದ ಆರ್.ವಿ.ದೇಶಪಾಂಡೆ, ಜಿಲ್ಲಾಧ್ಯಕ್ಷರಾದ ಭೀಮಣ್ಣನಾಯ್ಕ ಅವರು ನೀಡುವ ತೀರ್ಮಾನಕ್ಕೆ ಬದ್ದನಿದ್ದೇನೆ. ಯಾವುದೇ ಕ್ಷೇತ್ರದ ಸೇವಾ ಕರ್ತನಿಗೆ ಅದರಲ್ಲಿ ಬೆಳೆಯಬೇಕು ಎಂಬ ಕನಸು ಸಹಜ. ಈ ಕಾರಣದಿಂದ ನಾನೂ ಆಕಾಂಕ್ಷಿತ. ಆದರೆ ವಿಧಾನ ಸಭಾ ಚುನಾವಣೆಗೆ ಎರಡು ವರ್ಷ ಉಂಟು ಎಂದೂ ಹೇಳಿದರು.
ಇದನ್ನೂ ಓದಿ: ಮಾಜಿ ಸಚಿವ ಎಂ.ಬಿ.ಪಾಟೀಲಗೆ ಸ್ವಪಕ್ಷೀಯ ಶಾಸಕ ವೈ.ವಿ.ಪಾಟೀಲ್ ಸವಾಲು
ಈಗಾಗಲೇ ಶಿರಸಿ ಕ್ಷೇತ್ರದ ಮೇಲೆ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಭೀಮಣ್ಣ ನಾಯ್ಕ, ಕೆಪಿಸಿಸಿ ಕಾರ್ಯದರ್ಶಿ ಸುಷ್ಮಾ ರೆಡ್ಡಿ ಕಣ್ಣಿಟ್ಟು ಬಹಿರಂಗವಾಗಿ ಪ್ರಕಟಿಸಿದ್ದು ಉಲ್ಲೇಖನೀಯ. ಈಗ ದೀಪಕ್ ದೊಡ್ಡೂರು ತಾನೂ ಆಕಾಂಕ್ಷಿ ಎಂದಿದ್ದಾರೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ನಾಯಕರಾದ ಬಿ.ಕೆ.ಹರಿಪ್ರಸಾದ ಅವರು ಜೀವ ಜಲಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರರ ಮನೆಗೂ ತೆರಳಿ ಸಮಾಲೋಚನೆ ನಡೆಸಿದ್ದು ಹೊಸಬರಿಗೂ ಮಣೆ ನಡೆಯುತ್ತಿದೆ ಎಂಬ ಮಾತುಗಳೂ ಕಾಂಗ್ರೆಸ್ ವಲಯದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.