ಟನ್‌ ಕಬ್ಬಿಗೆ 2800 ರೂ. ಬೆಲೆ ನಿಗದಿಗೆ ಆಗ್ರಹ


Team Udayavani, Dec 22, 2020, 7:04 PM IST

ಟನ್‌ ಕಬ್ಬಿಗೆ 2800 ರೂ. ಬೆಲೆ ನಿಗದಿಗೆ ಆಗ್ರಹ

ಹಳಿಯಾಳ: ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈ ಹಿಂದೆ ರೈತರು ಕಂಪೆನಿ ಎದುರಿಗೆ ತಿಂಗಳು ಗಟ್ಟಲೇ ಹೋರಾಟ ನಡೆಸಿದಾಗ ಅವರ ಮೇಲೆ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಪ್ರಕರಣ ದಾಖಲಿಸಿದಾಗ ಸ್ಥಳೀಯ ಶಾಸಕರಿಗೆ ನೋವಾಗಲಿಲ್ಲ. ಆದರೆ ವಿಪ ಸದಸ್ಯ ಎಸ್‌.ಎಲ್‌. ಘೋಕ್ಲೃಕರ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ ದೇಶಪಾಂಡೆ ಮನಸ್ಸಿಗೆಘಾಸಿಯಾಗುತ್ತಿದೆ. ಇದು ರೈತರ ಮೇಲೆ ದೇಶಪಾಂಡೆ ಅವರಿಗಿರುವ ಕಾಳಜಿ ಎಂದು ಮಾಜಿ ಶಾಸಕ ಸುನೀಲ್‌ ಹೆಗಡೆ ವ್ಯಂಗ್ಯವಾಡಿದರು.

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ ಕಬ್ಬಿಗೆ 2800 ರೂ. ಬೆಲೆ ನಿಗದಿ ಮಾಡಬೇಕು ಹಾಗೂ ಡಿ.17 ರಂದು ಕಾರ್ಖಾನೆ ವಿರುದ್ಧ ನಡೆದ ರಾಜಕೀಯ ಪ್ರೇರಿತ ಬಂದ್‌ ಮಾಡಿದ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸುನೀಲ್‌ ಹೆಗಡೆನೇತೃತ್ವದಲ್ಲಿ ಬಿಜೆಪಿ ಘಟಕದವರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದರು.

ಶಾಸಕ ಆರ್‌.ವಿ. ದೇಶಪಾಂಡೆ ರೈತರ ಕುರಿತು ಮೊಸಳೆ ಕಣ್ಣೀರು ಸುರಿಸುತ್ತಾರೆ. ಈ ಹಿಂದೆರೈತರು ನಡೆಸಿದ ಹೊರಾಟಕ್ಕೆ ಪ್ರತಿಯಾಗಿ ಸಕ್ಕರೆ ಕಾರ್ಖಾನೆ ರೈತರ ಮೇಲೆ ಪ್ರಕರಣ ದಾಖಲಿಸಿತ್ತು.ರೈತರ ಹೋರಾಟದ ಸಂದರ್ಭದಲ್ಲಿ ಅವರ ಅಹವಾಲುಗಳನ್ನು ಆಲಿಸಲು ಬರದೇ ರೈತ ವಿರೋಧಿ ಧೋರಣೆ, ತಮ್ಮ ಉದಾಸೀನತೆ ಪ್ರದರ್ಶಿಸಿದದೇಶಪಾಂಡೆ ಇಂದು ರಾಜಕೀಯ ಪ್ರೇರಿತವಾಗಿತನ್ನ ಹಿತಾಸಕ್ತಿಗಾಗಿ ಘೋಕ್ಲೃಕರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದಂತೆ ದೇಶಪಾಂಡೆ ಕಾರ್ಖಾನೆ ವಿರುದ್ಧ ಹೇಳಿಕೆ ನೀಡಿರುವುದು ವಿಪರ್ಯಾಸ ಎಂದು ಟೀಕಾಪ್ರಹಾರ ಮಾಡಿದರು.

ರೈತರ ಜೀವನಾಡಿ ಸಕ್ಕರೆ ಕಾರ್ಖಾನೆಯನ್ನು ನಂಬಿ ಹಳಿಯಾಳ ಸೇರಿದಂತೆ ಅಕ್ಕಪಕ್ಕದಲ್ಲಿ ಸಾವಿರಾರು ಹೆಕ್ಟರ್‌ ಪ್ರದೇಶದಲ್ಲಿ ಕಬ್ಬು ಬೆಳೆದಿರುವ ಕಾರಣ ಕಂಪೆನಿಯು ರೈತರಿಗೆ ನೆರವಾಗಬೇಕಿದೆ. ಕಬ್ಬು ಬೆಳೆಗಾರರ ಹಿತ ರಕ್ಷಣೆಗಾಗಿ ಕಾರ್ಖಾನೆಯವರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕಾಗಿದ್ದು, ರೈತರ ಸಂಕಷ್ಟಗಳಿಗಾಗಿ ಸ್ಪಂದಿಸಬೇಕಾಗಿದೆ ಎಂದು ಕರೆ ನೀಡಿದರು.

ಇನ್ನು ಮುಂದೆ ಕಂಪೆನಿ ವಿರುದ್ಧ ಸ್ವಾರ್ಥ ಸಾಧನೆಗೆ, ವೈಯಕ್ತಿಕ ರಾಜಕಾರಣಕ್ಕಾಗಿ ಪ್ರತಿಭಟನೆ ಅಥವಾಬಂದ್‌ಗಳನ್ನು ಮಾಡಿದರೆ ಅಂತಹವರ ವಿರುದ್ಧ ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರಸಕ್ತ ಸಾಲಿನಲ್ಲಿ ಪೂರೈಸುವ ಕಬ್ಬಿಗೆ ಎಫ್‌ಆರ್‌ಪಿ ದರಕ್ಕಿಂತ ಹೆಚ್ಚುವರಿ 200 ರೂ. ದರ ನೀಡಬೇಕು. ತಾಲೂಕಿನಲ್ಲಿ ಬೆಳೆಯುವಂತಹ ಕಬ್ಬು ಬೆಳೆಯುವ ಇಳುವರಿ ಪ್ರಮಾಣ ಶೇಕಡಾ 12 ಕ್ಕಿಂತಲು ಜಾಸ್ತಿ ಬರುವುದರಿಂದ ರೈತರಿಗೆ ಉತ್ತಮ ದರ ನೀಡಬೇಕು ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಅಧ್ಯಕ್ಷ ಗಣಪತಿ ಕರಂಜೇಕರ, ಅನಿಲ್‌ ಮುತ್ನಾಳೆ, ಶಿವಾಜಿ ನರಸಾನಿ, ಉದಯಹೂಲಿ, ಚಂದ್ರಕಾಂತ ಕಮ್ಮಾರ, ವಾಸು ಪುಜಾರಿ,ಜಯ ಲಕ್ಷ್ಮೀ ಚವ್ಹಾಣ, ರಾಜೇಶ್ವರಿ ಹಿರೇಮಠ,ಸಂತೋಷ ಘಟಕಾಂಬಳೆ, ಶಾಂತಾ ಹಿರೆಕರ, ವಿಲಾಸ ಯಡವಿ, ಯಲ್ಲಪ್ಪಾ ಹೊನ್ನೋಜಿ ಇತರರು ಇದ್ದರು.

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.