ಹಿಂದುಳಿದ ವರ್ಗಗಳ ಇಲಾಖೆ ಸಿಬ್ಬಂದಿಗೆ ಮುಂಬಡ್ತಿ ನೀಡಲು ಒತ್ತಾಯ
Team Udayavani, Jun 30, 2019, 12:26 PM IST
ಕಾರವಾರ: ಹಿಂದುಳಿದ ವರ್ಗಗಳ ಇಲಾಖೆಯ ಸಿಬ್ಬಂದಿ ಮುಂಬಡ್ತಿಗೆ ಆಗ್ರಹಿಸಿ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಲಯ ಮೇಲ್ವಿಚಾರಕರಿಗೆ ಕಚೇರಿ ಹಾಗೂ ವಿಸ್ತರಣಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡುವಂತೆ ಜಿಲ್ಲೆಯ ವಿವಿಧ ತಾಲೂಕುಗಳ ಮೇಲ್ವಿಚಾರಕರು ಇಲಾಖೆಯ ಜಿಲ್ಲಾ ಅಧಿಕಾರಿ ಬಸವರಾಜ ಬಡಿಗೇರ ಮುಖಾಂತರ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ವಿಸ್ತರಣಾಧಿಕಾರಿ ಹುದ್ದೆಗೆ ಪ್ರಥಮ ದರ್ಜೆ ಸಹಾಯಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಆದರೆ ಅನೇಕ ವರ್ಷಗಳಿಂದ ಹಾಸ್ಟೆಲ್ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮುಂಬಡ್ತಿ ನೀಡುತ್ತಿಲ್ಲ. ಹೀಗಾಗಿ ಕರ್ತವ್ಯದಲ್ಲಿ ಹಿರಿತನ ಹೊಂದಿರುವ ತಮಗೂ ಮುಂಬಡ್ತಿ ನೀಡುವಂತೆ ಮೇಲ್ವಿಚಾರಕರು ರಾಜ್ಯಾದ್ಯಂತ ಮನವಿ ನೀಡುವ ಮೂಲಕ ಆಗ್ರಹಕ್ಕೆ ಮುಂದಾಗಿದ್ದಾರೆ.
ಇಲಾಖೆಯಲ್ಲಿ ಅನುಷ್ಠಾನ ಹಂತದಲ್ಲಿ ತೀರಾ ಮುಖ್ಯ ಕರ್ತವ್ಯ ನಿರ್ವಹಿಸುತ್ತಿರುವ ನಿಲಯ ಮೇಲ್ವಿಚಾರಕರನ್ನು ಹೊರತುಪಡಿಸಿ ಉಳಿದೆಲ್ಲರಿಗೆ ಮುಂಬಡ್ತಿ ನೀಡಲಾಗುತ್ತಿದೆ. 2016-17ರಲ್ಲಿ ಎಸ್.ಡಿ.ಎ. ಹುದ್ದೆಯಿಂದ ಎಫ್.ಡಿ.ಎ. ಹುದ್ದೆಗೆ ಮುಂಬಡ್ತಿ ಹೊಂದಿದವರಿಗೆ ಈಗ ಪುನಃ ಮುಂಬಡ್ತಿಗೆ ಇಲಾಖೆ ಕಾರ್ಯಪ್ರವೃತ್ತವಾಗಿದೆ. 30 ವರ್ಷಗಳಿಂದಲೂ ನಿಷ್ಠೆಯಿಂದ ನಿಲಯ ಮೇಲ್ವಿಚಾರಕರಾಗಿ ಪ್ರಥಮ ದರ್ಜೆ ಸಹಾಯಕರ ವೇತನ ಶ್ರೇಣಿಯಲ್ಲೇ ಕಾರ್ಯನಿರ್ವಹಿಸುತ್ತಿದ್ದೇವೆ. ಹಾಲಿ ಮುಂಬಡ್ತಿ ಪ್ರಕ್ರಿಯೆ ತಡೆಹಿಡಿದು ಮುಂಬಡ್ತಿ ಪ್ರಕ್ರಿಯೆಯಲ್ಲಿ ನಿಲಯ ಮೇಲ್ವಿಚಾರಕರಿಗೂ ಕೂಡ ಎಫ್‌ಡಿಎಗಳ ಜೊತೆಗೆ ಕಚೇರಿ ಅಧೀಕ್ಷಕರು, ತಾಲೂಕು ವಿಸ್ತರಣಾಧಿಕಾರಿ ಹುದ್ದೆಗೆ ಮುಂಬಡ್ತಿ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಶಿವಾನಂದ ನಾಯ್ಕ, ಕೆ.ಕೆ. ಗಣಪತಿ, ಮಲ್ಲಿಕಾರ್ಜುನ ಗೌಡ್ರು, ಜಗದೀಶ ನಾಯ್ಕ, ಮಂಜುಳಾ, ವೀಣಾ ನಾಯಕ, ನರಸಿಂಹ ಪಟಗಾರ, ರಾಜು ನಾಯ್ಕ, ರಾಮದಾಸ ನಾಯ್ಕ, ಸುಕ್ರು ಗೌಡ ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.