ಅಭಿವೃದ್ಧಿ ನಮ್ಮ ಸಂಕಲ್ಪ ಪ್ರಣಾಳಿಕೆ
Team Udayavani, May 25, 2019, 3:54 PM IST
ಸಿದ್ದಾಪುರ: ಲೋಕಸಭಾ ಚುನಾವಣೆ ಫಲಿತಾಂಶದಿಂದ ನಮ್ಮ ಜವಾಬ್ದಾರಿ ಹೆಚ್ಚಿದೆ. ಸ್ಥಳೀಯ ಪಪಂದಲ್ಲಿ 15 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಪ.ಪಂ ಚುನಾವಣೆ ಪಟ್ಟಣದ ಅಭಿವೃದ್ಧಿ ನಮ್ಮ ಸಂಕಲ್ಪ ಎಂಬ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಪಟ್ಟಣದ ಅಭಿವೃದ್ಧಿಗೆ ಸಂಕಲ್ಪ ಮಾಡಿ ಅಭ್ಯರ್ಥಿಗಳು ಕಾರ್ಯಕರ್ತರು ಮನೆಮನೆ ಬಾಗಿಲಿಗೆ ಹೋಗಿ ಪ್ರಚಾರ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ನಮ್ಮದೇ ಸರಕಾರವಿದೆ. ರಾಜ್ಯದಲ್ಲೂ ನಮ್ಮದೇ ಸರಕಾರ ಬರುವ ನಿರೀಕ್ಷೆ ಇದೆ. ಹೀಗಾಗಿ ಸ್ಥಳೀಯವಾಗಿಯೂ ನಮ್ಮದೇ ಆಡಳಿತವಾದರೆ ಜನರಿಗೆ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಅನುಕೂಲವಾಗಲಿದೆ. ಹಾಗಾಗಿ 15 ಸ್ಥಾನಗಳಲ್ಲಿ 14ರಲ್ಲಿ ಬಿಜೆಪಿ ಚಿನ್ನೆ ಮೇಲೆ ಅಭ್ಯರ್ಥಿಗಳು ಸ್ಪರ್ಧೆ ನಡೆಸಿದ್ದಾರೆ ಒಂದು ಸ್ಥಾನಕ್ಕೆ ನಾವು ಬೆಂಬಲ ಸೂಚಿಸಿದ್ದೇವೆ. ಹೀಗಾಗಿ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದರು.
ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ ಮಾತನಾಡಿ ನಮ್ಮ ಅವಧಿಯಲ್ಲಿ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಇನ್ನೂ ಶಾಶ್ವತ ನೀರಿನ ಸೌಲಭ್ಯ, ಸ್ವಚ್ಛತೆ, ಅತಿಕ್ರಮಣ ಸಮಸ್ಯೆಗಳು ಸೇರಿದಂತೆ ಹಲವಾರು ಸಮಸ್ಯೆಗಳಿವೆ. ಇವುಗಳ ನಿವಾರಣೆಗೆ ಬಿಜೆಪಿಗೆ ಬೆಂಬಲಿಸಬೇಕು ಎಂದರು.
ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ರವಿ ಹೆಗಡೆ ಹೂವಿನಮನೆ ಮಾತನಾಡಿ, ಇಲ್ಲಿ ಬಿಜೆಪಿ ಆಡಳಿತ ಅವಶ್ಯವಿದೆ. ಅನುಭವ-ಹಿರಿತನ ಹಾಗೂ ಹೊಸಬರಿಗೆ ಟಿಕೇಟ್ ನೀಡಿರುವುದರಿಂದ ಜನರಿಗೆ ಬಿಜೆಪಿ ಆಡಳಿತದ ಬಗ್ಗೆ ಒಲವಿದೆ. ರಾಜ್ಯದಲ್ಲಿ ನಮ್ಮದೆ ಸರಕಾರ ಬಂದ್ರೆ ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದ ಊರಾದ್ದರಿಂದ ವಿಶೇಷ ಅನುದಾನ ಕೇಳುತ್ತೇವೆ ಎಂದರು.
ತಾಲೂಕು ಅಧ್ಯಕ್ಷ ಎಂ.ವಿ. ಭಟ್ ಹಾಗೂ ಪ.ಪಂ ಅಭ್ಯರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Kannada Movie: ನಿರಂಜನ್ ಶೆಟ್ಟಿಯ ʼ31 ಡೇಸ್ʼ ಚಿತ್ರ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ
Water Price Hike: ಬಸ್ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.