ಪ್ರತಿಯೊಬ್ಬ ಮನುಷ್ಯನಿಗೂ ಆರೋಗ್ಯ-ಶಿಕ್ಷಣ ಮುಖ್ಯ

Team Udayavani, Nov 19, 2018, 3:41 PM IST

19-november-17.gif

ಕುಮಟಾ: ಮಧುಮೇಹ ಸಪ್ತಾಹದ ಅಂಗವಾಗಿ ಇಲ್ಲಿನ ಲಯನ್ಸ್‌ ಕ್ಲಬ್‌, ಭಾರತೀಯ ವೈದ್ಯಕೀಯ ಸಂಘ, ನೆಲ್ಲಿಕೇರಿ ಬೆಣ್ಣೆ ಪಿಯು ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು.

ಜಾಥಾಕ್ಕೆ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ನಾಯ್ಕ ಚಾಲನೆ ನೀಡಿ, ಮಧುಮೇಹ ಎಂಬುದು ಇಂದಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಕಂಡುಬರುತ್ತಿದೆ ಎಂಬುದು ಬೇಸರದ ಸಂಗತಿ. ಆರೋಗ್ಯ ಮತ್ತು ಶಿಕ್ಷಣ ಉತ್ತಮವಾಗಿದ್ದರೆ ಮನುಷ್ಯ ಏನು ಬೇಕಾದರೂ ಸಾಧಿಸಲು ಸಾಧ್ಯ ಎಂದರು.

ತಿನ್ನುವ ಪ್ರತಿಯೊಂದು ಆಹಾರದಲ್ಲೂ ಸಂಶಯ ಮೂಡುವ ಸ್ಥಿತಿ ಇಂದಿನ ಸಮಾಜದಲ್ಲಿ ನಿರ್ಮಾಣವಾಗಿದೆ. ಮನುಷ್ಯನ ದುರಾಸೆಯಿಂದ ದಿನದಿಂದ ದಿನಕ್ಕೆ ಕಲಬೆರಕೆ ಪದಾರ್ಥಗಳು ಹೆಚ್ಚುತ್ತಿವೆ. ಕಾಯಿಲೆಗಳಿಗೆ ತುತ್ತಾಗುವ ಮೊದಲು ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳುವುದು ಅಗತ್ಯ. ಸಮಯಕ್ಕೆ ತಕ್ಕಂತೆ ವ್ಯಾಯಾಮ, ಯೋಗಾಸನಗಳನ್ನು ದಿನಚರಿಯಲ್ಲಿ ಅಳವಡಿಸಿಕೊಂಡರೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ. ಸಾರ್ವಜನಿಕರಿಗಾಗಿ ಇಂತಹ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ಪ್ರತಿವರ್ಷ ನ.14ನ್ನು ವಿಶ್ವ ಮಧುಮೇಹ ದಿನವಾಗಿ ಆಚರಿಸಲಾಗುತ್ತದೆ. ಮತ್ತು ಇಡೀ ವಾರವನ್ನು ಮಧುಮೇಹ ಸಪ್ತಾಹವೆಂದು ಪರಿಗಣಿಸಿ ಮಧುಮೇಹದ ಜಾಗೃತಿ ಕುರಿತು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಕುಮಟಾ ಲಾಯನ್ಸ್‌ ಕ್ಲಬ್‌ ಮಧುಮೇಹದ ಬಗ್ಗೆ ಸಾಮಾನ್ಯ ಜನರಿಗೆ ತಿಳಿವಳಿಕೆ ನೀಡುವ ಉದ್ದೇಶದಿಂದ ಜಾಗೃತಿ ಜಾಥಾ ಹಾಗೂ ಮಾಹಿತಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಲಾಯನ್ಸ್‌ ಅಧ್ಯಕ್ಷ ಡಾ| ಪ್ರಕಾಶ ಪಂಡಿತ ತಿಳಿಸಿದರು.

ಬಗ್ಗೊಂ  ರಸ್ತೆಯ ಲಯನ್ಸ್‌ ಕ್ಲಬ್‌ ಸಭಾಭವನದಿಂದ ಹೊರಟ ಜಾಗೃತಿ ಜಾಥಾವು ಗಿಬ್‌ ಸರ್ಕಲ್‌ ಮುಖಾಂತರ ಬಸ್ತಿಪೇಟೆ, ನೆಲ್ಲಿಕೇರಿ ಹಳೆ ಬಸ್‌ನಿಲ್ದಾಣದಿಂದ ಮಾಸ್ತಿಕಟ್ಟೆ ಸರ್ಕಲ್‌ ಬಳಿ ಅಂತ್ಯಗೊಂಡಿತು.

ಐಎಂಎ ಕುಮಟಾ ಘಟಕದ ಅಧ್ಯಕ್ಷ ಡಾ| ವೆಂಕಟೇಶ ಶಾನಭಾಗ, ಎನ್‌ಎಸ್‌ ಎಸ್‌ ಕುಮಟಾ ಘಟಕದ ಸಂಚಾಲಕ ಪ್ರೊ| ಗಣೇಶ ಭಟ್‌, ಲಾಯನ್ಸ್‌ ಕ್ಲಬ್‌ನ ಗಿರೀಶ ಕುಚ್ಚಿನಾಡ, ರಘುನಾಥ ದಿವಾಕರ, ವಿಷ್ಣು ಪಟಗಾರ, ಮಂಗಲಾ ನಾಯ್ಕ, ಬೀರಣ್ಣ ನಾಯಕ, ರೇವತಿರಾವ್‌, ಎಚ್‌.ಎನ್‌. ನಾಯ್ಕ, ವಿ.ಐ. ಹೆಗಡೆ, ಎಮ್‌.ಎನ್‌ ಹೆಗಡೆ, ಲಾಯನ್ಸ್‌ ರೇವಣಕರ್‌ ಕಣ್ಣಿನ ಆಸ್ಪತ್ರೆಯ ಡಾ| ನವೀನ್‌ ಹಾಗೂ ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.