18ರೊಳಗೆ ವಿಧಾನ ಸಭೆಯಲ್ಲಿ ಚರ್ಚೆ

ಹಿರಿಯ ಅಧಿಕಾರಿಗಳು-ಕಾನೂನು ತಜ್ಞರು- ಮೊಗೇರ ಸಮಾಜದ ಮುಖಂಡರೊಂದಿಗೆ ವಿಸ್ತೃತ ಚರ್ಚೆ

Team Udayavani, Apr 8, 2022, 4:42 PM IST

22

ಭಟ್ಕಳ: ಮೊಗೇರರ ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಏ.18 ರೊಳಗೆ ವಿಧಾನಸಭೆಯಲ್ಲಿ ಹಿರಿಯ ಅಧಿಕಾರಿಗಳು, ಕಾನೂನು ತಜ್ಞರು ಹಾಗೂ ಮೊಗೇರ ಸಮಾಜದ ಮುಖಂಡರ ಸಭೆ ಕರೆದು ಕಾನೂನಾತ್ಮಕ ಅಂಶದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಗುರುವಾರ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೊಗೇರರು ತಮಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಮುಂದುವರಿಸಬೇಕೆಂದು ಕಳೆದ ಹಲವು ದಿನಗಳಿಂದ ಧರಣಿ ನಡೆಸುತ್ತಿದ್ದು, ಮುಖಂಡರ ಬಳಿ ಧರಣಿ ವಾಪಸ್‌ ಪಡೆಯಿರಿ ಎಂದು ಹೇಳಿದ್ದೇನೆ.

ಧರಣಿ ವಾಪಸ್‌ ಪಡೆಯುವ ವಿಶ್ವಾಸವಿದೆ ಎಂದರು. ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೊಗೇರ ಸಮಾಜದ ಕಾನೂನು ಸಲಹೆಗಾರ ಮತ್ತು ಮುಖಂಡ ನಾಗರಾಜ ಈ.ಎಚ್‌. ಮಾತನಾಡಿ, ಮೊಗೇರರ ಸಂಕಷ್ಟಮಯ ಪರಿಸ್ಥಿತಿಯನ್ನು ಖುದ್ದಾಗಿ ವೀಕ್ಷಿಸಿದ ಮುಖ್ಯಮಂತ್ರಿ ದೇವರಾಜ ಅರಸು ಅವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದರು. ಮೊಗೇರರು 2011ರ ವರೆಗೂ ಪರಿಶಿಷ್ಟ ಪ್ರಮಾಣ ಪತ್ರ ಪಡೆದಿದ್ದು, ಅದರ ನಂತರ ಸರಕಾರ ಸ್ಥಗಿತಗೊಳಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನಾವು ಹೈಕೋರ್ಟ್‌, ಸುಪ್ರೀಂ ಕೋರ್ಟ್‌, ರಾಷ್ಟ್ರೀಯ ಪರಿಶಿಷ್ಟ ಆಯೋಗ, ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಸಿದಾಗ ನಮ್ಮ ಪರವಾಗಿ ತೀರ್ಪು ಬಂದಿದೆ. ಆದರೆ ರಾಜ್ಯ ಸರಕಾರ ಮಾತ್ರ ನಮಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕುತ್ತಿದೆ. ಕಳೆದ ಹತ್ತನ್ನೆರಡು ವರ್ಷಗಳಿಂದ ಮೊಗೇರರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಸಿಗದೇ ಇರುವುದರಿಂದ ಮಕ್ಕಳ ಶಿಕ್ಷಣ, ವಿದ್ಯಾರ್ಥಿವೇತನ, ಉದ್ಯೋಗ, ಸರಕಾರ ಸೌಲಭ್ಯ ಪಡೆಯಲು ಭಾರೀ ಹಿನ್ನಡೆಯಾಗಿದೆ. ಅದೂ ಅಲ್ಲದೇ ಇತ್ತೀಚೆಗೆ ಸರಕಾರ ಮೊಗೇರರಿಗೆ ಪ್ರವರ್ಗ 1ರಲ್ಲಿ ಜಾತಿ ಪ್ರಮಾಣ ಪತ್ರ ಮುದ್ರಿಸಿ ಗೊಂದಲವನ್ನುಂಟು ಮಾಡಿದೆ. ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದ ಉತ್ತರ ಕನ್ನಡ ಮೊಗೇರರಿಗೆ ಸರಕಾರ ಪ್ರವರ್ಗ 1ರಲ್ಲಿನ ಜಾತಿ ಪ್ರಮಾಣ ಪತ್ರ ನೀಡಲು ಮುಂದಾಗಿದ್ದು, ಯಾವುದೇ ಕಾರಣಕ್ಕೂ ಪಡೆಯುವುದಿಲ್ಲ. ಕೋರ್ಟಿನ ಆದೇಶದಂತೆ ಸರಕಾರ ಮೊಗೇರರಿಗೆ ಈ ಹಿಂದೆ ನೀಡುತ್ತಿದ್ದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಮುಂದುವರಿಸಬೇಕು. ಸಮಾಜ ಕಲ್ಯಾಣ ಸಚಿವರು ತಾವೇ ಆಗಿರುವುದರಿಂದ ಈ ಮೊದಲಿನಂತೆ ಜಾತಿ ಪ್ರಮಾಣ ಪತ್ರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೊಗೇರ ಸಮಾಜದ ಅಧ್ಯಕ್ಷ ಅಣ್ಣಪ್ಪ ಮೊಗೇರ ಮಾತನಾಡಿ, ಸರಕಾರ ನಮ್ಮ ಬೇಡಿಕೆಗೆ ಸ್ಪಂದಿಸಬೇಕು. ಆದಷ್ಟು ಶೀಘ್ರದಲ್ಲಿ ನಮ್ಮ ಸಮಸ್ಯೆ ಬಗೆಹರಿಸಬೇಕೆಂದು. ನಮ್ಮ ಬೇಡಿಕೆ ಈಡೇರುವ ವರೆಗೂ ಧರಣಿ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮೊಗೇರ ಮುಖಂಡರ ಅಹವಾಲುಗಳನ್ನು ಶಾಂತಚಿತ್ತದಿಂದ ಕೇಳಿದರು. ಶಾಸಕ ಸುನೀಲ ನಾಯ್ಕ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಎಸಿ ಮಮತಾದೇವಿ, ಡಿವೈಎಸ್ಪಿ ಬೆಳ್ಳಿಯಪ್ಪ, ತಹಶೀಲ್ದಾರ್‌ ಸುಮಂತ, ಸಮಾಜ ಕಲ್ಯಾಣ ಅಧಿಕಾರಿಗಳು, ಮೊಗೇರ ಸಮಾಜದ ಹೋರಾಟ ಸಮಿತಿ ಅಧ್ಯಕ್ಷ ಎಫ್‌.ಕೆ. ಮೊಗೇರ, ಕುಮಾರ ಹೆಬಳೆ, ದಿವಾಕರ ಮೊಗೇರ, ವೆಂಕಟ್ರಮಣ ಮೊಗೇರ, ಅನಂತ ಮೊಗೇರ, ಜಟಕಾ ಮೊಗೇರ, ಪುಂಡಲೀಕ ಹೆಬಳೆ ಸೇರಿದಂತೆ ಹಲವು ಮುಖಂಡರಿದ್ದರು.

ಟಾಪ್ ನ್ಯೂಸ್

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.