ಬಡವರಿಗೆ ದಿನಸಿ ಕಿಟ್ ವಿತರಣೆ
Team Udayavani, Jul 5, 2020, 3:51 PM IST
ಕುಮಟಾ: ತಾಲೂಕಿನ ಕೋಡಕಣಿ ಗ್ರಾಪಂ ವ್ಯಾಪ್ತಿಯ ಐಗಳಕೂರ್ವೆ, ಬೆಲೆ ಹಾಗೂ ತಣ್ಣೀರಹೊಂಡ ಭಾಗದ 150ಕ್ಕೂ ಅಧಿಕ ಬಡವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಶಾಸಕ ದಿನಕರ ಶೆಟ್ಟಿ ಅಗತ್ಯ ದಿನಸಿ ಕಿಟ್ ಹಾಗೂ ಮಾಸ್ಕ್ಗಳನ್ನು ವಿತರಿಸಿದರು.
ನಂತರ ಮಾತನಾಡಿದ ಅವರು, ಕೋವಿಡ್ ದಿಂದ ದೇಶದಾದ್ಯಂತ ಜನರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ. ಇಂಥ ವಿಷಮ ಸ್ಥಿತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ರೀತಿಯಲ್ಲಿ ಜನರ ನೆರವಿಗೆ ಮುಂದಾಗಿದೆ. ಅಲ್ಲದೇ, ಸಕ್ಕರೆ ಸಚಿವರೂ ಸಹ ರಾಜ್ಯದ ಬಡವರಿಗಾಗಿ ಅಗತ್ಯ ದಿನಸಿ ಕಿಟ್‌ಗಳನ್ನು ವಿತರಿಸಿದ್ದಾರೆ. ಕಾರ್ಯಕರ್ತರ ಸಹಕಾರದಿಂದ ಅವುಗಳನ್ನು ಕ್ಷೇತ್ರದ ಬಡವರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದರು.
ಸ್ಥಳೀಯ ಮುಖಂಡರಿಂದ ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಅವರು, ಕೂಲಂಕಷವಾಗಿ ಎಲ್ಲವನ್ನೂ ಪರಿಶೀಲನೆ ನಡೆಸಿ, ಬಗೆಹರಿಸುವ ವಿಶ್ವಾಸ ನೀಡಿದರು. ಸ್ಥಳೀಯ ಮುಖಂಡ ಸುಬ್ರಾಯ ಪಟಗಾರ ಶಾಸಕರನ್ನು ಸ್ವಾಗತಿಸಿದರು.
ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಗುತ್ತಿಗೆದಾರ ಮಂಜುನಾಥ ನಾಯ್ಕ, ಪ್ರಮುಖರಾದ ಸುಬ್ರಾಯ ಪಟಗಾರ, ಮಾದೇವ ಪಟಗಾರ, ಗಣಪತಿ ಪಟಗಾರ, ಪ್ರಕಾಶ ಪಟಗಾರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.