ಶಿರಸಿ: ಅತಿವೃಷ್ಟಿಯಿಂದ ಮನೆ ಹಾನಿ; ಕಾಗೇರಿಯಿಂದ ಪರಿಹಾರ ಮೊತ್ತ ವಿತರಣೆ
Team Udayavani, Sep 9, 2022, 10:13 AM IST
ಶಿರಸಿ: ಕಳೆದ ವಾರ ಅತಿವೃಷ್ಟಿ ಹಾನಿಯಿಂದಾಗಿ ಮರ ಬಿದ್ದು ಮನೆ ಸಂಪೂರ್ಣ ನಾಶವಾಗಿದ್ದ ತಾಲೂಕಿನ ಹಳ್ಳಿಕಾನಿಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಮನೆ ಮಾಲೀಕರಿಗೆ ಪರಿಹಾರ ಮೊತ್ತದ ಆದೇಶ ಪತ್ರ ವಿತರಿಸಿದರು.
ಹಳ್ಳಿಕಾನ ವಾಸು ನಾಯ್ಕ ಎಂಬುವರ ಮನೆಯ ಮೇಲೆ ಬೃಹತ್ ಮರ ಮುರಿದು ಬಿದ್ದು ಮನೆ ಸಂಪೂರ್ಣ ಹಾನಿಯಾಗಿತ್ತು. ಘಟನೆಯಲ್ಲಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು. ಆದರೆ ಆ ಸಂದರ್ಭದಲ್ಲಿ ಊರಿನಲ್ಲಿ ಇರದ ಕಾರಣ ಕಾಗೇರಿ ಅವರು ಗುರವಾರ ಅವರ ಮನೆಗೆ ಭೇಟಿ ನೀಡಿ 95,100 ರೂ. ಮೊತ್ತದ ತುರ್ತು ಪರಿಹಾರ ವಿತರಿಸಿದರು.
ನಂತರ ಮಾತನಾಡಿದ ಅವರು, ಈಗ ಮೊದಲನೇ ಕಂತಿನ ಪರಿಹಾರವಾಗಿ 95 ಸಾವಿರ ರೂ. ನೀಡಲಾಗಿದೆ. ಒಟ್ಟು 5 ಲಕ್ಷ ರೂ. ಪರಿಹಾರ ಬರಲಿದೆ. ಮನೆ ಕಟ್ಟುತ್ತಾ ಹೋದಾಗ ಹಂತ ಹಂತವಾಗಿ ಪರಿಹಾರ ಬಿಡುಗಡೆಯಾಗುತ್ತದೆ. ಸರ್ಕಾರ ಹಾನಿಗೀಡಾದ ಸಂತ್ರಸ್ತರಿಗೆ ತುರ್ತು ಸ್ಪಂದನೆ ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕುಳವೆ ಗ್ರಾಪಂ ಅಧ್ಯಕ್ಷ ವಿನಯ ಭಟ್, ಆ ಭಾಗದ ವಾರ್ಡಿನ ಸದಸ್ಯ ಸಂದೇಶ ಭಟ್ ಬೆಳಖಂಡ, ತಹಶೀಲ್ದಾರ ಶ್ರೀಧರ ಮುಂದಲಮನಿ, ಪ್ರಮುಖರಾದ ಪ್ರಸನ್ನ ಜೋಶಿ, ಶ್ರೀನಾಥ ಶೆಟ್ಟಿ, ರವಿತೇಜ ರೆಡ್ಡಿ, ಮಂಜುನಾಥ ಶೇಟ್, ವಿಶ್ವ ಅರಸಿಕೇರಿ, ಎನ್.ವಿ.ಹೆಗಡೆ, ಪಿಡಿಒ ಸರೋಜಾ ನಾಯಕ ಹಾಗೂ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.