15 ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ
•ಪ್ರವಾಹದ ಹಿನ್ನೆಲೆಯಲ್ಲಿ ಶಾಸಕ ಆರ್.ವಿ. ದೇಶಪಾಂಡೆಯಿಂದ ಅಧಿಕಾರಿಗಳ ಸಭೆ
Team Udayavani, Aug 9, 2019, 1:16 PM IST
ಹಳಿಯಾಳ: ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ವಿತರಿಸಲಾಯಿತು.
ಹಳಿಯಾಳ: ನಿಸರ್ಗದೊಂದಿಗೆ ಸ್ನೇಹ ಮಾಡಬೇಕು ಹೊರತು ದ್ವೇಷ ಮಾಡಬಾರದು. ಅರಣ್ಯ ಹೆಚ್ಚಾಗಬೇಕು. ನಿಸರ್ಗದ ಜೊತೆಗೆ ಪರಿಸರ ಕಾಯ್ದುಕೊಳ್ಳಬೇಕು ಇಲ್ಲದಿದ್ದರೆ ಇಂತಹ ಪ್ರಕೃತಿ ವಿಕೋಪಗಳು ಸಂಭವಿಸುತ್ತವೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ತಹಶೀಲ್ದಾರ್ ಕಚೇರಿಯಲ್ಲಿ ನೆರೆ ಹಾನಿ ನಿಧಿಯಡಿ ಸುಮಾರು 15 ಜನರಿಗೆ ಪರಿಹಾರದ ಚೆಕ್‌ಗಳನ್ನು ವಿತರಿಸಿ ಬಳಿಕ ಪ್ರಕೃತಿ ವಿಕೋಪದ ಕುರಿತು ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು.
ಹಳಿಯಾಳ- ದಾಂಡೇಲಿಯನ್ನೊಳ ಗೊಂಡು ಒಟ್ಟೂ 6 ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ ಎಂದ ಅವರು, ಅಧಿಕಾರಿಗಳು, ಇನ್ನಿತರ ಸಿಬ್ಬಂದಿಗಳ ತಂಡ ತಯಾರಿಸಿ ಭಾಗಶಃ ಹಾಗೂ ಸಂಪೂರ್ಣ ಮನೆ ಕಳೆದುಕೊಂಡವರ ಬಳಿ ಸಂಪೂರ್ಣ ಮಾಹಿತಿ ಕಲೆಹಾಕಿ ಸರ್ಕಾರಕ್ಕೆ ವರದಿ ಸಲ್ಲಿಸಿ.
ಇನ್ನೂ ದಾಖಲೆ ಕಳೆದುಕೊಂಡವರಿಗೆ ಅಗತ್ಯ ದಾಖಲೆ ನೀಡಲು ತಾಲೂಕಾಡಳಿತ ಸಹಕರಿಸಬೇಕು. ನೆರೆ ಕಡಿಮೆಯಾದ ಬಳಿಕ ಇದು ತುರ್ತು ಪರಿಸ್ಥಿತಿ ಇರುವುದರಿಂದ ಯಾರಿಗೂ ತೊಂದರೆ ನೀಡದೆ ಕೂಡಲೇ ದಾಖಲೆಗಳನ್ನು ಅವರಿಗೆ ಒದಗಿಸಲು ಮುಂದಾಗಬೇಕು ಎಂದ ದೇಶಪಾಂಡೆ ಅತಿಕ್ರಮಣ ಮಾಡಿ ಮನೆ ಕಟ್ಟಿದವರು ಇಂದು ಮನೆ ಕಳೆದುಕೊಂಡಿದ್ದು ಮಾನವೀಯ ನೆಲೆಯ ಮೇಲೆ ಅವರಿಗೂ ಪರಿಹಾರ ಒದಗಿಸಲು ಕ್ರಮಕೈಗೊಳ್ಳಬೇಕು. ಈ ಬಗ್ಗೆ ತಾವು ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.
ಸಂಪೂರ್ಣ ಮನೆ ಕಳೆದುಕೊಂಡವರಿಗೆ ತಕ್ಷಣ ಪುನರ್ವಸತಿ ಕಲ್ಪಿಸಬೇಕು. ಕೆಪಿಸಿ ವಸತಿ ನಿವೇಶನಗಳು ಖಾಲಿ ಇದ್ದು ಅಲ್ಲಿ ನಿರಾಶ್ರಿತರಿಗೆ ವಸತಿಗೆ ಅವಕಾಶ ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದ ಅವರು ಸ್ಥಳದಲ್ಲೇ ಕೆಪಿಸಿಯ ಎಂಡಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ತಾತ್ಕಾಲಿಕ ವಸತಿಗೆ ಅವಕಾಶಕ್ಕೆ ಮನವಿ ಮಾಡಿದರು.
ನೆರೆ ಇಳಿದ ಬಳಿಕ ಮುಂದೆ ಆರೋಗ್ಯ, ಪಶು ಸಂಗೋಪನಾ ಹಾಗೂ ಪಶು ವೈದ್ಯ ಇಲಾಖೆ, ಪುರಸಭೆಯವರು ಜಾಗೃತರಾಗಬೇಕು ಎಲ್ಲೆಡೆ ಸ್ವಚ್ಛತೆ ಬಗ್ಗೆ ಗಮನ ಹರಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಪೈಪ್‌ಲೈನ್ ಯಡೋಗಾ ಸೇತುವೆಯಲ್ಲಿ ನೀರಿನ ಪ್ರವಾಹಕ್ಕೆ ಕೊಚ್ಚಿಹೋದ ಕಾರಣ ಕಳೆದ 3 ದಿನಗಳಿಂದ ಪಟ್ಟಣಕ್ಕೆ ನೀರಿನ ಸರಬರಾಜು ಸ್ಥಗಿತವಾಗಿದೆ. ಹೊಸ ಪೈಪ್‌ಲೈನ್ ಜೊಡಿಸಲು ಕೂಡಲೇ ಪುರಸಭೆಯವರು ಕಾರ್ಯನಿರ್ವಹಿಸುವಂತೆ ಹಾಗೂ ಅದಕ್ಕಾಗಿ ಅನುದಾನ ಕೊರತೆಯಾಗದಂತೆ ತಾವು ಗಮನ ಹರಿಸುವುದಾಗಿ ಹೇಳಿದರು.
ನಿರಂತರ ಮಳೆಗೆ ರಸ್ತೆಗಳಿಗೆ ಹಾನಿಯಾಗಿದ್ದು ಕೂಡಲೇ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಪಿಡಬ್ಲೂಡಿ ಅಧಿಕಾರಿಗೆ ದೇಶಪಾಂಡೆ ಸೂಚಿಸಿದರು.
ವಿಪ ಸದಸ್ಯ ಎಸ್.ಎಲ್. ಘೊಕ್ಲೃಕರ, ಜಿಪಂ ಸದಸ್ಯ ಕೃಷ್ಣಾ ಪಾಟೀಲ್, ಪುರಸಭೆ ಸದಸ್ಯ ಶಂಕರ ಬೆಳಗಾಂವಕರ, ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.